ಶಾರುಖ್ ಗೆ ತಟ್ಟಿದ ಪುತ್ರನ ಡ್ರಗ್ಸ್ ನಂಟಿನ ಬಿಸಿ | ಬೈಜೂಸ್ ಜಾಹೀರಾತುಗಳಿಗೆ ತಾತ್ಕಾಲಿಕ ತಡೆ
Team Udayavani, Oct 10, 2021, 3:25 PM IST
ಮುಂಬೈ: ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಪುತ್ರ ಆರ್ಯನ್ ಖಾನ್ ಬಂಧನದ ಬಿಸಿ ನಟ ಶಾರುಖ್ ಖಾನ್ ಅವರಿಗೆ ತಟ್ಟಿದೆ. ಇವರು ಕಾಣಿಸಿಕೊಂಡಿರುವ ತನ್ನ ಜಾಹೀರಾತುಗಳನ್ನು ಬೈಜೂಸ್ ತಾತ್ಕಾಲಿಕವಾಗಿ ನಿಲ್ಲಿಸಿದೆ.
ಅಕ್ಟೋಬರ್ 2 ರಂದು ಮುಂಬೈನ ಕರಾವಳಿ ಪ್ರದೇಶದಲ್ಲಿದ್ದ ಐಷಾರಾಮಿ ಹಡಗಿನಲ್ಲಿ ನಡೆಯುತ್ತಿದ್ದ ಡಗ್ರ ಪಾರ್ಟಿ ಮೇಲೆ ದಾಳಿ ನಡೆಸಿದ ಎನ್‍ಸಿಬಿ, ಶಾರುಖ್ ಪುತ್ರ ಸೇರಿ ಏಳು ಜನರನ್ನು ಬಂಧಿಸಿದದೆ. ಈ ಘಟನೆಯ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಶಾರುಖ್ ಖಾನ್ ವಿರುದ್ಧ ಟ್ರೋಲ್ ಗಳು ಶುರುವಾದವು. ಅದರಲ್ಲೂ ಅವರು ಅಂಬಾಸಿಡರ್ ಆಗಿರುವ ಬೈಜೂಸ್ ಕಂಪನಿಯನ್ನು ಎಳೆದು ತಂದು ಟ್ರೋಲ್ ಮಾಡಲಾಯಿತು. ಇದರಿಂದ ಎಚ್ಚೆತ್ತುಕೊಂಡಿರುವ ಬೈಜೂಸ್, ತನ್ನ ಜಾಹೀರಾತುಗಳಿಗೆ (ಶಾರುಖ್ ಖಾನ್ ಕಾಣಿಸಿಕೊಂಡಿರುವ) ತಾತ್ಕಾಲಿಕವಾಗಿ ತಡೆ ನೀಡಿದೆ. ಕೇವಲ ಜಾಹೀರಾತುಗಳಿಗೆ ಮಾತ್ರ ಬ್ರೇಕ್ ಹಾಕಲಾಗಿದೆ. ಆದರೆ, ಅಂಬಾಸಿಡರ್ ಸ್ಥಾನದಿಂದ ಶಾರುಖ್ ಅವರನ್ನು ಕೈ ಬಿಡಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಶಾರುಖ್ ಖಾನ್ ಅವರು 2017 ರಿಂದ ಬೈಜೂಸ್ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದಾರೆ. ಈವರೆಗೆ ಕಂಪನಿಗೆ ಸಂಬಂಧಪಟ್ಟಂತಹ ಜಾಹೀರಾತುಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಆದರೆ, ಪುತ್ರನ ಬಂಧನದ ನಂತರ ಟ್ವಟರ್ ಸೇರಿದಂತೆ ಸಾಮಾಜಿಕ ಜಾಲತಾಗಳಲ್ಲಿ ಶಾರುಖ್ ಅವರನ್ನು ಬೈಜೂಸ್ ಜಾಹೀರಾತುಗಳನ್ನು ಬಳಸಿಕೊಂಡು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಯಿತು.
ಇನ್ನು ಮುಂಬೈನ ಸ್ಥಳೀಯ ನ್ಯಾಯಾಲಯವು ಗುರುವಾರ ಆರ್ಯನ್ ಖಾನ್ ಮತ್ತು ಇತರ 7 ಮಂದಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಅಕ್ಟೋಬರ್ 3 ರಂದು ಬಂಧನಕ್ಕೊಳಗಾಗಿದ್ದ ಆರ್ಯನ್ ಖಾನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ಶುಕ್ರವಾರ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!
Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್ ಫಿಕ್ಸ್
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
MUST WATCH
ಹೊಸ ಸೇರ್ಪಡೆ
Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್: 21 ವರ್ಷದ ಹಿಂದೆ ನಡೆದಿದ್ದೇನು?
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್‌ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್‌ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.