Deepika Padukone: ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ
Team Udayavani, Sep 8, 2024, 1:18 PM IST
ಮುಂಬಯಿ: ಬಾಲಿವುಡ್ (Bollywood) ನಟಿ ದೀಪಿಕಾ ಪಡುಕೋಣೆ(Deepika Padukone) ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಶನಿವಾರ(ಸೆ.7ರಂದು) ಸಂಜೆ 5 ಗಂಟೆ ಸುಮಾರಿಗೆ ದೀಪಿಕಾ ಆಸ್ಪತ್ರೆಗೆ ದಾಖಲಾಗಿದ್ದರು. ನಟಿಯ ಜತೆ ತಾಯಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಎರಡು ದಿನಗಳ ಹಿಂದಷ್ಟೇ ಪತಿ ರಣ್ವೀರ್ ಸಿಂಗ್(Ranveer Singh) ಅವರೊಂದಿಗೆ ದೀಪಿಕಾ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.
ಡಿಸೆಂಬರ್ 2018 ರಲ್ಲಿ ಇಟಲಿಯ ಲೇಕ್ ಕೊಮೊದಲ್ಲಿ ದೀಪಿಕಾ – ರಣ್ವೀರ್ ಅದ್ಧೂರಿಯಾಗಿ ಕುಟುಂಬ ಹಾಗೂ ಆತ್ಮೀಯರ ಸಮ್ಮುಖದಲ್ಲಿ ವಿವಾಹವಾಗಿದ್ದರು.
ಬಾಲಿವುಡ್‌ನ ಕ್ಯೂಟ್ ಜೋಡಿಗಳಲ್ಲಿ ಒಂದಾಗಿರುವ ದೀಪಿಕಾ – ರಣ್ವೀರ್ ಈ ವರ್ಷದ ಫೆಬ್ರವರಿಯಲ್ಲಿ ಪ್ರೆಗ್ನೆನ್ಸಿ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಇತ್ತೀಚೆಗೆ ದೀಪಿಕಾ ತನ್ನ ಪತಿ ಜತೆ ಬೇಬಿ ಬಂಪ್ ಫೋಟೋಗಳನ್ನು ಹಂಚಿಕೊಂಡಿದ್ದರು. ಈ ಫೋಟೋಗಳು ವೈರಲ್ ಆಗಿತ್ತು.
ಸಿನಿಮಾದ ವಿಚಾರಕ್ಕೆ ಬಂದರೆ ದೀಪಿಕಾ ʼಸಿಂಗಂ ಎಗೇನ್ʼ ನಲ್ಲಿ ಲೇಡಿ ಸಿಂಗಂ ಆಗಿ ಕಾಣಿಸಿಕೊಳ್ಳಲಿದ್ದಾರೆ. ರಣ್ವೀರ್ ಇದೇ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.