ಇಂದು ಬೆಂಗಳೂರಿನಲ್ಲಿ ದೀಪಿಕಾ-ರಣವೀರ್ ಆರತಕ್ಷತೆ
Team Udayavani, Nov 21, 2018, 11:09 AM IST
ನವೆಂಬರ್ 14ರಂದು ಇಟಲಿಯ ಸುಂದರ “ಲೇಕ್ ಕೊಮೋ’ದಲ್ಲಿ ಕೊಂಕಣಿ ಮತ್ತು ಸಿಂಧಿ ಸಂಪ್ರದಾಯದಂತೆ ಹಸೆಮಣೆ ಏರಿದ ಬಾಲಿವುಡ್ ತಾರೆಯರಾದ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ ಮದುವೆ ಆರತಕ್ಷತೆ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯಲಿದೆ.
ಆರತಕ್ಷತೆ ಕಾರ್ಯಕ್ರಮಕ್ಕಾಗಿ ಮಂಗಳವಾರ ಬೆಳಿಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದೀಪಿಕಾ-ರಣವೀರ್ ಜೋಡಿ ಆಗಮಿಸಿತು. ಹಣೆ ಮೇಲೆ ಸಿಂಧೂರ ಇಟ್ಟುಕೊಂಡಿದ್ದ ದೀಪಿಕಾ, ಅನಾರ್ಕಲಿ ಚೂಡಿದಾರ್ ತೊಟ್ಟು ಕಂಗೊಳಿಸುತ್ತಿದ್ದರೆ, ರಣವೀರ್ ಸಿಂಗ್ ಕುರ್ತಾ ಪೈಜಾಮಾ ಹಾಕಿಕೊಂಡು ಮಿಂಚುತ್ತಿದ್ದರು. ವಿಮಾನ ನಿಲ್ದಾಣದಿಂದ ಹೊರಬಂದ ದೀಪಿಕಾ-ರಣವೀರ್ ಜೋಡಿ ಹೊರಗೆ ನೆರೆದಿದ್ದ ಜನರತ್ತ ಕೈ ಬೀಸಿ ಧನ್ಯವಾದ ತಿಳಿಸಿದರು.
ಬಳಿಕ ಬಿಗಿ ಭದ್ರತೆಯಲ್ಲಿ ಬೆಂಗಳೂರಿನ ತಮ್ಮ ಮನೆಯತ್ತ ತೆರಳಿದರು. ಇಂದು ದೀಪಿಕಾ-ರಣವೀರ್ ಆರತಕ್ಷತೆ ಅದ್ಧೂರಿಯಾಗಿ ನಡೆಯಲಿದ್ದು, ಕನ್ನಡ, ತೆಲುಗು, ತಮಿಳು ಮತ್ತು ಮಲೆಯಾಳಂ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.