“2.0′ ಚಿತ್ರದ ಆ್ಯಕ್ಷನ್ ಹೇಗಿದೆ ಗೊತ್ತಾ?: Watch
Team Udayavani, Oct 3, 2018, 3:34 PM IST
ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಬಾಲಿವುಡ್ನ ಅಕ್ಷಯ್ ಕುಮಾರ್ ನಟಿಸಿರುವ “2.0′ ಚಿತ್ರ ಒಂದಲ್ಲ ಒಂದು ವಿಷಯದಲ್ಲಿ ಸದ್ದು ಮಾಡುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಗೊಂಡ ಚಿತ್ರದ ಟೀಸರ್ ಕೋಟಿಗಟ್ಟಲೆ ವೀಕ್ಷಣೆ ಕಂಡು ಸುದ್ದಿಯಾಗಿತ್ತು. ಇದೀಗ ಚಿತ್ರದ ಮೇಕಿಂಗ್ ವಿಡಿಯೋವೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದ್ದು, ಟೀಸರ್ನಷ್ಟೇ ಸದ್ದು ಮಾಡುತ್ತಿದೆ.
ಮೇಕಿಂಗ್ ವಿಡಿಯೋದಲ್ಲಿ ರಜನಿ ಮತ್ತು ಅಕ್ಷಯ್ರ ಹಲವು ಸಾಹಸಗಳು, ವಿವಿಧ ಸ್ಟೈಲಿಶ್ ಲುಕ್ಗಳನ್ನು ಕಾಣಬಹುದಾಗಿದೆ. ಪ್ರಪಂಚದಾದ್ಯಂತ ಸುಮಾರು 25 ವಿಎಫ್ಎಕ್ಸ್ ಸ್ಟುಡಿಯೋದಲ್ಲಿ ಚಿತ್ರಕ್ಕೆ ಗ್ರಾಫಿಕ್ ಕಾರ್ಯ ಮಾಡಲಾಗಿದ್ದು, ಸುಮಾರು 3000ಕ್ಕೂ ಹೆಚ್ಚು ನುರಿತ ತಂತ್ರಜ್ಞರು ಚಿತ್ರಕ್ಕೆ ಕಾರ್ಯನಿರ್ವಹಿಸಿದ್ದಾರಂತೆ. ಈ ಹಿಂದೆ ಎಂದಿರನ್(ರೋಬೊಟ್) ಚಿತ್ರ ನಿರ್ದೇಶಿಸಿ ಹಾಲಿವುಡ್ ಮಟ್ಟದಲ್ಲಿ ಸಾಕಷ್ಟು ಹೆಸರು ಮಾಡಿದ್ದ ಶಂಕರ್ ಅವರೇ ಚಿತ್ರದ ಮುಂದುವರೆದ ಭಾಗವನ್ನು ನಿರ್ದೇಶಿಸಿದ್ದಾರೆ.
ಹೀಗಾಗಿ ಸಿನಿಪ್ರಿಯರಲ್ಲಿ ಈ ಚಿತ್ರ ಮತ್ತಷ್ಟು ಕುತೂಹಲ ಮೂಡಿಸಿದೆ. ಬಾಲಿವುಡ್ ನಟ ಅಕ್ಷಯ್ ಕುಮಾರ್ ಈ ಚಿತ್ರದಲ್ಲಿ ನೆಗೆಟಿವ್ ಪಾತ್ರದಲ್ಲಿ ಅಭಿನಯಿಸಿದ್ದು, ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದಾರೆ. ರೋಬೋಟ್ ಪಾತ್ರದಲ್ಲಿ ನಾಯಕ ರಜನಿಕಾಂತ್ ಮಿಂಚಿದ್ದು, ಎಂದಿನಂತೆ ಈ ಚಿತ್ರದಲ್ಲೂ ತಮ್ಮ ಸ್ಟೈಲ್ ತೋರಿಸಲಿದ್ದಾರೆ. ಲೈಕಾ ಪ್ರೊಡಕ್ಷನ್ಸ್ನಲ್ಲಿ ಕರಣ್ ಜೋವರ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಎ.ಆರ್.ರೆಹಮಾನ್ ಸಂಗೀತವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.