![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 24, 2023, 1:01 PM IST
ಮುಂಬಯಿ: ಕಂಗನಾ ರಣಾವುತ್ ನಿರ್ದೇಶನ ಮಾಡಿರುವ ಬಾಲಿವುಡ್ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಎಮರ್ಜೆನ್ಸಿʼ ಚಿತ್ರ ತಂಡ ರಿಲೀಸ್ ಡೇಟ್ ಅನೌನ್ಸ್ ಮಾಡಿದೆ.
ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ಕುರಿತು ತಯಾರಾದ ʼಎಮರ್ಜೆನ್ಸಿʼ ಸಿನಿಮಾದಲ್ಲಿ ಕಂಗನಾ ಇಂದಿರಾ ಗಾಂಧಿ ಅವರ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಟೀಸರ್ ಗೆ ರಾಜಕೀಯವಾಗಿ ಒಂದಷ್ಟು ವಿರೋಧ ವ್ಯಕ್ತವಾಗಿತ್ತು. ಸಿನಿಮಾದ ಚಿತ್ರೀಕರಣ ಮುಗಿಸಲು ಆಸ್ತಿಯನ್ನು ಅಡ್ಡವಿಟ್ಟಿದ್ದೇನೆ ಎಂದು ನಟಿ ಈ ಹಿಂದೆ ಹೇಳಿದ್ದರು.
ಒಂದಷ್ಟು ವಿಚಾರಗಳಿಗೆ ಸುದ್ದಿಯಾಗಿರುವ ʼಎಮರ್ಜೆನ್ಸಿʼ ಸಿನಿಮಾ ಇದೀಗ ರಿಲೀಸ್ ಡೇಟನ್ನು ಅನೌನ್ಸ್ ಮಾಡಿದೆ.
ಪುಟ್ಟ ಟೀಸರ್ ಮೂಲಕ ಡೇಟ್ ರಿವೀಲ್ ಮಾಡಿದೆ. ಅಂದು ನಡೆದಿದ್ದ ಹಿಂಸೆ, ಹೋರಾಟ, ವಿರೋಧ ಪಕ್ಷದ ನಾಯಕರ ಬಂಧನದ ಬಗ್ಗೆ ಟೀಸರ್ ನಲ್ಲಿ ತೋರಿಸಲಾಗಿದೆ. ಪ್ರಧಾನಿ ರಕ್ಷಕ ಅಥವಾ ಸರ್ವಾಧಿಕಾರಿಯೋ? ಎಂದು ಪ್ರಶ್ನೆಯನ್ನು ಮಾಡಲಾಗಿದೆ. ನವೆಂಬರ್ 24 ರಂದು ಸಿನಿಮಾ ತೆರೆಗೆ ಬರಲಿದೆ ಎಂದು ಸಿನಿಮಾ ತಂಡ ಅನೌನ್ಸ್ ಮಾಡಿದೆ.
“ನಮ್ಮ ರಾಷ್ಟ್ರದ ನಾಯಕ ತನ್ನ ಜನರ ಮೇಲೆ ಯುದ್ಧವನ್ನು ಘೋಷಿಸಿದ್ದು ನಮ್ಮ ಇತಿಹಾಸದ ಕರಾಳ ಘಟ್ಟಕ್ಕೆ ಸಾಕ್ಷಿ” ಕಂಗನಾ ಬರೆದುಕೊಂಡಿದ್ದಾರೆ.
ಸಿನಿಮಾದಲ್ಲಿ ನಟ ಅನುಪಮ್ ಖೇರ್ ಜಯಪ್ರಕಾಶ್ ನಾರಾಯಣ್ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಮಿಲಿಂದ್ ಸೋಮನ್ ,ಮಹಿಮಾ ಚೌಧರಿ, ವಿಶಾಕ್ ನಾಯರ್, ಸತೀಶ್ ಕೌಶಿಕ್ ಶ್ರೇಯಸ್ ತಲ್ಪಡೆ ಮುಂತಾದ ಕಲಾವಿದರು ವಿವಿಧ ರಾಜಕೀಯ ಮುಖಂಡರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
A protector or a Dictator? Witness the darkest phase of our history when the leader of our nation declared a war on it’s people.
🔗 https://t.co/oAs2nFWaRd#Emergency releasing worldwide on 24th November pic.twitter.com/ByDIfsQDM7
— Kangana Ranaut (@KanganaTeam) June 24, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.