ಮಹಾಭಾರತದ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ
Team Udayavani, Feb 8, 2022, 11:29 AM IST
ಹೊಸದಿಲ್ಲಿ: ಪ್ರಸಿದ್ದ ಮಹಾಭಾರತ ಧಾರವಾಹಿಯ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಅವರು ಇಂದು ನಿಧನರಾದರು. 74 ವರ್ಷದ ಪ್ರವೀಣ್ ಕುಮಾರ್ ಸೋಬ್ತಿ ಅವರು ತಮ್ಮ ಬೃಹತ್ ಮೈಕಟ್ಟುಗೆ ಹೆಸರುವಾಸಿಯಾಗಿದ್ದರು ಅನೇಕ ಬಾಲಿವುಡ್ ಚಲನಚಿತ್ರಗಳಲ್ಲಿ ಹೆಂಚ್‌ಮ್ಯಾನ್, ಗೂಂಡಾ ಮತ್ತು ಅಂಗರಕ್ಷಕನ ಪಾತ್ರವನ್ನು ನಿರ್ವಹಿಸಿದ್ದಾರೆ.
ಪಂಜಾಬ್ ಮೂಲದ ಪ್ರವೀಣ್ ಕುಮಾರ್ ಅವರು ನಟನಾ ವೃತ್ತಿಗೆ ಕಾಲಿಡುವ ಮೊದಲು ಹ್ಯಾಮರ್ ಥ್ರೋ ಮತ್ತು ಡಿಸ್ಕಸ್ ಥ್ರೋ ಕ್ರೀಡಾಪಟುವಾಗಿದ್ದರು. ಅವರು ನಾಲ್ಕು ಬಾರಿ ಏಷ್ಯನ್ ಗೇಮ್ಸ್ ಪದಕ ವಿಜೇತರಾಗಿದ್ದಾರೆ (2 ಚಿನ್ನ, 1 ಬೆಳ್ಳಿ ಮತ್ತು 1 ಕಂಚು) ಮತ್ತು ಎರಡು ಒಲಿಂಪಿಕ್ ಕ್ರೀಡಾಕೂಟಗಳಲ್ಲಿ (1968 ಮೆಕ್ಸಿಕೋ ಗೇಮ್ಸ್ ಮತ್ತು 1972 ಮ್ಯೂನಿಚ್ ಗೇಮ್ಸ್) ಭಾರತವನ್ನು ಪ್ರತಿನಿಧಿಸಿದ್ದಾರೆ.
ಅರ್ಜುನ ಪ್ರಶಸ್ತಿ ಪುರಸ್ಕೃತ ಪ್ರವೀಣ್ ಕುಮಾರ್ ಅವರು ಕ್ರೀಡಾ ಕೋಟಾದಲ್ಲಿ ಪ್ರವೀಣ್ ಗೆ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಡೆಪ್ಯುಟಿ ಕಮಾಂಡೆಂಟ್ ಹುದ್ದೆ ಪಡೆದಿದ್ದರು.
ಇದನ್ನೂ ಓದಿ:ಬದಲಾಯ್ತು ಶ್ರೀಲೀಲಾ- ಧನ್ವೀರ್ ನಟನೆಯ ‘ಬೈ ಟು ಲವ್’ ರಿಲೀಸ್ ಡೇಟ್
ಕ್ರೀಡೆಯ ಯಶಸ್ವಿ ವೃತ್ತಿಜೀವನದ ನಂತರ, ಪ್ರವೀಣ್ 70 ರ ದಶಕದ ಅಂತ್ಯದಲ್ಲಿ ಕ್ಯಾಮಾರ ಮುಂದೆ ಬಂದರು. ಪ್ರವೀಣ್ ಅವರು ಪಂದ್ಯಾವಳಿಗಾಗಿ ಕಾಶ್ಮೀರದಲ್ಲಿದ್ದಾಗ ತಮ್ಮ ಮೊದಲ ಬಾಲಿವುಡ್ ಚಿತ್ರಕ್ಕೆ ಸಹಿ ಹಾಕಿದ್ದರು. ರವಿಕಾಂತ್ ನಾಗೈಚ್ ನಿರ್ದೇಶನದಲ್ಲಿ ಅವರ ಸಂಭಾಷಣೆ ಇಲ್ಲದ ಮೊದಲ ಪಾತ್ರ ಮಾಡಿದ್ದರು.
80ರ ದಶಕದಲ್ಲಿ ಬಿಆರ್ ಚೋಪ್ರಾ ನಿರ್ದೇಶನದ ಮಹಾಭಾರತ ಧಾರವಾಹಿಯಲ್ಲಿ ಭೀಮ ಪಾತ್ರದಲ್ಲಿ ಮಿಂಚಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.