28 ದಿನಗಳ ಆಸ್ಪತ್ರೆ ವಾಸದಿಂದ ಮನೆಗೆ ಮರಳಿದ ಲತಾ ದೀದಿ ; ಏನಾಗಿತ್ತು ಈ ಲೆಜಂಡರಿ ಗಾಯಕಿಗೆ?
Team Udayavani, Dec 8, 2019, 6:59 PM IST
ಮುಂಬಯಿ: ಉಸಿರಾಟದ ತೊಂದರೆಯಿಂದಾಗಿ ಗಂಭೀರ ಆರೋಗ್ಯ ಸ್ಥಿತಿಯಲ್ಲಿ ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಬಹುಭಾಷಾ ಗಾಯಕಿ ಲತಾ ಮಂಗೇಶ್ಕರ್ ಅವರು ಇದೀಗ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಲತಾ ಅವರನ್ನು ನವಂಬರ್ 11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲತಾ ಅವರಲ್ಲಿ ನ್ಯುಮೋನಿಯಾ ಸಮಸ್ಯೆ ಕಾಣಿಸಿಕೊಂಡಿದ್ದ ಕಾರಣ ಸುಮಾರು ಮೂರು ವಾರಗಳ ಕಾಲ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
Namaskaar, For the past 28 days, I was at Breach Candy hospital.. I was diagnosed with pneumonia. The (cont) https://t.co/nHAQuCozF9
— Lata Mangeshkar (@mangeshkarlata) December 8, 2019
‘ಕಳೆದ 28 ದಿನಗಳನ್ನು ನಾನು ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಕಳೆದಿದ್ದೇನೆ. ನನಗೆ ನ್ಯುಮೋನಿಯಾ ಸಮಸ್ಯೆ ಕಾಣಿಸಿಕೊಂಡಿತ್ತು. ಹಾಗಾಗಿ ನಾನು ಸಂಪೂರ್ಣ ಗುಣಮುಖಳಾಗುವತನಕ ಆಸ್ಪತ್ರೆಯಲ್ಲೇ ಇರುವಂತೆ ಇಲ್ಲಿನ ವೈದ್ಯರು ನನಗೆ ಸಲಹೆ ನೀಡಿದ್ದರು. ಇದೀಗ ಮಾಯಿ ಮತ್ತು ಬಾಬಾ ಅವರ ಆಶೀರ್ವಾದದಿಂದ ನಾನು ಗುಣಮುಖಳಾಗಿದ್ದೇನೆ. ನನ್ನ ಆರೋಗ್ಯ ಸುಧಾರಣೆಗಾಗಿ ಹಾರೈಸಿದ ಎಲ್ಲರಿಗೂ ನನ್ನ ಧನ್ಯವಾದಗಳು. ನಿಮ್ಮ ಪ್ರಾರ್ಥನೆ ಮತ್ತು ಹಾರೈಕೆಗಳು ಫಲನೀಡಿದೆ ನಿಮ್ಮ ಪ್ರೀತಿಗೆ ನಾನು ತಲೆಬಾಗುತ್ತೇನೆ’ ಎಂದು ಲತಾ ಮಂಗೇಶ್ಕರ್ ಅವರು ತಮ್ಮ ಆರೋಗ್ಯ ಸಮಸ್ಯೆ, ಆಸ್ಪತ್ರೆ ವಾಸ ಮತ್ತು ಇದೀಗ ಗುಣಮುಖರಾಗಿ ಮನೆಗೆ ಬಂದಿರುವ ವಿಷಯವನ್ನು ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮಾತ್ರವಲ್ಲದೇ ಆಸ್ಪತ್ರೆಯಲ್ಲಿ ತನ್ನನ್ನು ಆರೈಕೆ ಮಾಡಿದ ವೈದ್ಯರ ತಂಡಕ್ಕೂ ಸಹ ಲತಾ ಅವರು ವಿಶೇಷ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅವರೆಲ್ಲರ ಹೆಸರುಗಳನ್ನು ಟ್ವೀಟ್ ನಲ್ಲಿ ನಮೂದಿಸಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುವ ಮೂಲಕ ಈ ಲೆಜಂಡರಿ ಗಾಯಕಿ ವೈದ್ಯರ ಸೇವೆಯನ್ನು ವಿಶೇಷವಾಗಿ ಸ್ಮರಿಸಿಕೊಂಡಿದ್ದಾರೆ.
Namaskaar,
A special thank you, again to the team of doctors who treated me with utmost care and love.
Dr. Pratit Samdani, Dr. Ashwin Mehta, Dr. Zareer Udwadia, Dr Nishit Shah, Dr. Janardan Nimbolkar and Dr. Rajeev Sharma.— Lata Mangeshkar (@mangeshkarlata) December 8, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.