6 ವರ್ಷದ ಬಳಿಕ ʼDhruva Natchathiramʼ ರಿಲೀಸ್: ಚಿತ್ರ ನೋಡಿ ರಿವ್ಯೂ ಕೊಟ್ಟ ನಿರ್ದೇಶಕ
Team Udayavani, Nov 21, 2023, 6:34 PM IST
ಚೆನ್ನೈ: ನಟ ಚಿಯಾನ್ ವಿಕ್ರಮ್ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಧ್ರುವ ನಚ್ಚತಿರಂ’ ಸಿನಿಮಾ ಅಂತೂ ರಿಲೀಸ್ ಹಂತಕ್ಕೆ ಬಂದು ನಿಂತಿದೆ. ಇದೇ ವಾರ ಸಿನಿಮಾ ತೆರೆಗೆ ಬರಲಿದೆ.
ಗೌತಮ್ ವಾಸುದೇವ್ ಮೆನನ್ ನಿರ್ದೇಶನದ ʼಧ್ರುವ ನಚ್ಚತಿರಂ’ ಅಂದುಕೊಂಡಂತೆ ಆಗಿದ್ದರೆ ಇಷ್ಟು ಹೊತ್ತಿಗೆ ರಿಲೀಸ್ ಆಗಿ 3-4 ನಾಲ್ಕು ವರ್ಷಗಳೇ ಕಳೆಯುತ್ತಿದ್ದವು. 2017 ರಲ್ಲಿ ಸಟ್ಟೇರಿದ ಸಿನಿಮಾಕ್ಕೆ ಕಾನೂನು ತೊಡಕು ಹಾಗೂ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಅಂತೂ ಸಿನಿಮಾ ತೆರೆಗೆ ಬರಲು ಸಿದ್ದವಾಗಿದ್ದು, ವಿಕ್ರಮ್ ಅಭಿಮಾನಿಗಳು ತೆರೆ ಮೇಲೆ ಸ್ಪೈ ಆ್ಯಕ್ಷನ್ ಜರ್ನಿಯನ್ನು ನೋಡಲು ಕಾತರದಿಂದ ಕಾಯುತ್ತಿದ್ದಾರೆ.
ಇದೀಗ ಸಿನಿಮಾದ ಮೊದಲ ವಿಮರ್ಶೆ ಹೊರಬಿದ್ದಿದೆ. ಸಿನಿಮಾದ ಫೈನಲ್ ಕಟ್ ನ್ನು ವೀಕ್ಷಿಸಿರುವ ನಿರ್ದೇಶಕ ಲಿಂಗುಸಾಮಿ ವಿಕ್ರಮ್ ಚಿತ್ರದ ಬಗ್ಗೆ ಪಾಸಿಟಿವ್ ರಿವ್ಯೂ ನೀಡಿದ್ದಾರೆ.
“ಮುಂಬೈನಲ್ಲಿ ಮುಂಬೈನಲ್ಲಿ ʼಧ್ರುವ ನಚ್ಚತಿರಂ’ ಫೈನಲ್ ಕಟ್ ನೋಡಿದೆ. ಸಿನಿಮಾದ ದೃಶ್ಯವನ್ನು ಅದ್ಭುತವಾಗಿ ತೋರಿಸಲಾಗಿದೆ. ಸಿನಿಮಾ ಕೂಡ ಚೆನ್ನಾಗಿದೆ. ಚಿಯಾನ್ ವಿಕ್ರಮ್ ಕೂಲ್ ಆಗಿ ಕಾಣಿಸಿಕೊಂಡಿದ್ದಾರೆ. ವಿನಾಯಕನ್ ಇಡೀ ಸಿನಿಮಾದಲ್ಲಿ ಗಮನ ಸೆಳೆಯುತ್ತಾರೆ. ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗವಿದ್ದು, ಎಲ್ಲರೂ ಅವರವರ ಪಾತ್ರವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಸಿನಿಮಾಕ್ಕೆ ಒಳ್ಳೆದಾಗಲಿ, ದೊಡ್ಡ ಹಿಟ್ ಆಗಲಿ” ಎಂದು ಚಿತ್ರತಂಡಕ್ಕೆ ಹಾರೈಸಿದ್ದಾರೆ.
ಗೌತಮ್ ವಾಸುದೇವ್ ಮೆನನ್ ಬರೆದುಮ ನಿರ್ದೇಶಿಸಿರುವ ‘ಧ್ರುವ ನಚ್ಚತಿರಂ’ ಸ್ಪೈ ಆಕ್ಷನ್ ಕಥಾಹಂದರವನ್ನು ಒಳಗೊಂಡಿದೆ. ಈ ಚಿತ್ರದಲ್ಲಿ ಚಿಯಾನ್ ವಿಕ್ರಮ್ ಪ್ರಮುಖ ಪಾತ್ರದಲ್ಲಿ ರಿತು ವರ್ಮಾ, ಆರ್ ಪಾರ್ತಿಬನ್, ರಾಧಿಕಾ ಶರತ್‌ಕುಮಾರ್, ಸಿಮ್ರಾನ್ ಮತ್ತು ವಿನಾಯಕನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇದೇ ನ.24 ರಂದು ಸಿನಿಮಾ ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.