Actor Darren Kent: 36ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಹಾಲಿವುಡ್ ನಟ

Team Udayavani, Aug 16, 2023, 12:00 PM IST

Actor Darren Kent: 36ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಖ್ಯಾತ ಹಾಲಿವುಡ್ ನಟ

ವಾಷಿಂಗ್ಟನ್:‌ ಹಾಲಿವುಡ್‌ ಸಿನಿಮಾರಂಗ  ಖ್ಯಾತ ನಟನನ್ನು ಕಳೆದುಕೊಂಡಿದೆ. 36ನೇ ವಯಸ್ಸಿನಲ್ಲಿ ಡ್ಯಾರೆನ್ ಕೆಂಟ್ ಇಹಲೋಕ ತ್ಯಜಿಸಿದ್ದಾರೆ.

ಡ್ಯಾರೆನ್ ಕೆಂಟ್ ಅವರು ಶುಕ್ರವಾರ( ಆ.11 ರಂದು) ನಿಧನರಾಗಿದ್ದಾರೆ.  ಅವರ ನಿಧನದ ಸುದ್ದಿಯನ್ನು ಟ್ಯಾಲೆಂಟ್‌ ಏಜೆನ್ಸಿ ಕ್ಯಾರಿ ಡಾಡ್ ಅಸೋಸಿಯೇಟ್ಸ್, ಆಗಸ್ಟ್‌ 15 ರಂದು ಅಧಿಕೃತಗೊಳಿಸಿದೆ.

“ನಮ್ಮ ಆತ್ಮೀಯ ಸ್ನೇಹಿತ ಮತ್ತು ಕ್ಲೈಂಟ್ ಡ್ಯಾರೆನ್ ಕೆಂಟ್ ಅವರು ಶುಕ್ರವಾರದಂದು ನಿಧನರಾಗಿದ್ದಾರೆ ಎಂದು ನಾವು ನಿಮಗೆ ತೀವ್ರ ದುಃಖದಿಂದ ಹೇಳಬೇಕಾಗಿದೆ. ಅವರ ಪೋಷಕರು ಮತ್ತು ಆತ್ಮೀಯ ಸ್ನೇಹಿತರು ಅವರ ಪಕ್ಕದಲ್ಲಿದ್ದರು. ಈ ಕಷ್ಟದ ಸಮಯದಲ್ಲಿ ನಮ್ಮ ಆಲೋಚನೆಗಳು ಮತ್ತು ಪ್ರೀತಿ ಅವರ ಕುಟುಂಬದೊಂದಿಗೆ ಇದೆ. RIP ನನ್ನ ಸ್ನೇಹಿತ” ಎಂದು ಏಜೆನ್ಸಿ ಟ್ವಿಟರ್‌ ನಲ್ಲಿ ಬರೆದುಕೊಂಡಿದೆ.

ಯಾರು ಈ ಡ್ಯಾರೆನ್ ಕೆಂಟ್?: ಲಂಡನ್ ಮತ್ತು ಉತ್ತರ ಸಮುದ್ರದ ನಡುವಿನ ಆಗ್ನೇಯ ಇಂಗ್ಲೆಂಡ್‌ನ ಎಸೆಕ್ಸ್‌ನಲ್ಲಿ ಹುಟ್ಟಿ ಬೆಳೆದ ಡ್ಯಾರೆನ್ ಕೆಂಟ್ 2008 ರಲ್ಲಿ ಬಂದ ʼಮಿರರ್ಸʼ ಎಂಬ ಹಾರಾರ್‌ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಆ ಬಳಿಕ ಅವರು ಎಮ್ಮಿ ಪ್ರಶಸ್ತಿ ವಿಜೇತ ‘ಗೇಮ್ ಆಫ್ ಥ್ರೋನ್ಸ್’ ಸಿನಿಮಾದಲ್ಲಿ ಕಾಣಿಸಿಕೊಂಡರು. ಈ ಸಿನಿಮಾದಲ್ಲಿನ ಅವರ ಅಭಿನಯದಿಂದ ಅಪಾರ ಪ್ರೇಕ್ಷಕರ ಗಮನ ಸೆಳೆದರು. ‘ಡಂಜಿಯನ್ಸ್ ಅಂಡ್ ಡ್ರಾಗನ್ಸ್: ಹಾನರ್ ಅಮಾಂಗ್ ಥೀವ್ಸ್’ (Dungeons and Dragons: Honor Among Thieves) ಸಿನಿಮಾದಲ್ಲಿ ಅವರು ಇತ್ತೀಚೆಗೆ ಕಾಣಿಸಿಕೊಂಡಿದ್ದರು.

ʼ ‘ಸ್ನೋ ವೈಟ್ ಮತ್ತು ಹಂಟ್ಸ್‌ ಮ್ಯಾನ್‌ʼ, ‘ಮಾರ್ಷಲ್ಸ್ ಲಾʼ, ʼಬ್ಲಡಿ ಕಟ್ಸ್‌ʼ, ʼಬ್ಲಡ್‌ ಡ್ರೈವ್‌ʼ,ʼ ಫ್ರಾಂಕೆನ್‌ಸ್ಟೈನ್ ಕ್ರಾನಿಕಲ್ಸ್ʼ, ʼಗ್ರೀನ್‌ ಫಿಂಗರ್ಸ್‌ʼ, ʼಹ್ಯಾಪಿ ಅವರ್ಸ್‌ʼ.. ಮುಂತಾದ ಸಿನಿಮಾಗಳಲ್ಲಿ ಅವರು ನಟಿಸಿ ಜನಪ್ರಿಯತೆಯನ್ನು ಪಡೆದುಕೊಂಡಿದ್ದರು.

ನಟ ಮಾತ್ರವಲ್ಲದೆ ಅವರು ಅವಾರ್ಡ್ ವಿನ್ನಿಂಗ್‌ ಬರಹಗಾರ ಹಾಗೂ ನಿರ್ದೇಶಕರೂ ಆಗಿದ್ದರು. ಅವರ ʼ ಯು ನೋ ಮಿ’ ಸಿನಿಮಾ ಅವರಿಗೆ ಜನವರಿ ಪ್ರಶಸ್ತಿಯನ್ನು ತಂದುಕೊಟ್ಟಿತು.

ಟಾಪ್ ನ್ಯೂಸ್

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

A.R.Rahman Divorce: ಎ.ಆರ್‌.ರೆಹಮಾನ್‌ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.