Bollywood Actor Govinda: ಬಾಲಿವುಡ್ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು
Team Udayavani, Oct 1, 2024, 9:34 AM IST
ಮುಂಬಯಿ: ಬಾಲಿವುಡ್ ನಟ (Bollywood Actor Govinda) ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರ ಬೆಳಗ್ಗೆ(ಅ.1ರಂದು) ನಟ ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಅವರದೇ ರಿವಾಲ್ವರ್‌ನಿಂದ ಗುಂಡು ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಕಸ್ಮಿಕವಾಗಿ ಅವರ ರಿವಾಲ್ವರ್‌ನಿಂದ ಗುಂಡು ತಗುಲಿದೆ ಎನ್ನಲಾಗಿದೆ.
ಮುಂಜಾನೆ 4:45ಕ್ಕೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರು ತನ್ನ ರಿವಾಲ್ವರ್ ನ್ನು ಕ್ಲೀನ್ ಮಾಡುವಾಗ ಆಕಸ್ಮಿಕವಾಗಿ ಗುಂಡು ಅವರ ಕಾಲಿಗೆ ಬಂದು ತಗುಲಿದೆ ಎಂದು ವರದಿಯಾಗಿದೆ.
“ಗೋವಿಂದ ಕೋಲ್ಕತ್ತಾಗೆ ಹೊರಡಲು ತಯಾರಾಗುತ್ತಿದ್ದರು. ಅವರು ತಮ್ಮ ಪರವಾನಗಿ ಪಡೆದ ರಿವಾಲ್ವರ್ ನ್ನು ಕಬೋರ್ಡ್‌ನಲ್ಲಿ ಇಟ್ಟುಕೊಂಡಿದ್ದರು. ಅದು ಅವರ ಕೈಯಿಂದ ಬಿದ್ದು ಗುಂಡು ಅವರ ಕಾಲಿಗೆ ತಗುಲಿದೆ. ವೈದ್ಯರು ಬುಲೆಟ್ ನ್ನು ತೆಗೆದಿದ್ದಾರೆ” ಎಂದು ಅವರ ಮ್ಯಾನೇಜರ್ ʼಎಎನ್‌ಐʼಗೆ ತಿಳಿಸಿದ್ದಾರೆ.
ಕೂಡಲೇ ಅವರನ್ನು ಮುಂಬಯಿಯ ಖಾಸಗಿ ಆಸ್ಪತ್ರೆಯ ಐಸಿಯುಗೆ ದಾಖಲು ಮಾಡಲಾಗಿದೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
90ರ ದಶಕದ ಬಾಲಿವುಡ್‌ನ ಸ್ಟಾರ್ ನಟರಲ್ಲಿ ಒಬ್ಬರಾಗಿದ್ದಾರೆ. ಅವರ ಕಾಮಿಡಿ ಪಾತ್ರಗಳನ್ನು ನೋಡಿ ಫಿದಾ ಆಗದವರಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.