Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್
Team Udayavani, Oct 4, 2024, 3:31 PM IST
ಮುಂಬೈ: ತಮ್ಮದೇ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ತಗುಲಿ ಆಸ್ಪತ್ರೆ ದಾಖಲಾಗಿದ್ದ ಬಾಲಿವುಡ್ ನಟ ಗೋವಿಂದ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದು ಶುಕ್ರವಾರ (ಅ.4) ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಡಿಸ್ಚಾರ್ಜ್ ವೇಳೆ ನಟನ ಜೊತೆಗೆ ಪತ್ನಿ ಸುನೀತಾ, ಮಗಳು ಟೀನಾ ಅಹುಜಾ ಜೊತೆಗಿದ್ದರು ಅಲ್ಲದೆ ಆಸ್ಪತ್ರೆ ಹೊರಗೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಈ ವೇಳೆ ವೀಲ್ ಚೇರ್ ಮೂಲಕ ಬಂದ ನಟ ಆಸ್ಪತ್ರೆ ಹೊರಭಾಗದಲ್ಲಿ ಸೇರಿದ್ದ ಅಭಿಮಾನಿಗಳನ್ನು ಕಂಡು ಫ್ಲೈಯಿಂಗ್ ಕಿಸ್ ನೀಡುವ ಮೂಲಕ ತನ್ನ ಆರೋಗ್ಯದ ಬಗ್ಗೆ ಪ್ರಾರ್ಥಿಸಿದ್ದಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಕಳೆದ ಅಕ್ಟೋಬರ್ 1 ರಂದು ಮುಂಜಾನೆ ಐದು ಗಂಟೆಯ ಸುಮಾರಿಗೆ ತಮ್ಮದೇ ಸರ್ವಿಸ್ ರಿವಾಲ್ವರ್ ಅನ್ನು ಸ್ವಚ್ಛಗೊಳಿಸುವ ವೇಳೆ ಆಕಸ್ಮಿಕವಾಗಿ ಗುಂಡು ಹಾರಿ ಕಾಲಿಗೆ ಏಟಾಗಿತ್ತು ಈ ವೇಳೆ ಅವರನ್ನು ಮುಂಬೈನ ಅಂಧೇರಿಯಲ್ಲಿರುವ ಕ್ರಿಟಿಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು ಅದರಂತೆ ಇಂದು (ಅ.4) ರಂದು ಡಿಸ್ಚಾರ್ಜ್ ಮಾಡಿದ್ದಾರೆ.
#WATCH | Mumbai: Actor and Shiv Sena leader Govinda says, “I thank everyone for their prayers… I thank CM Shinde, police and the press. I especially thank my fans for praying so much for me. I thank them from the bottom of my heart for their love.” https://t.co/O5nWBbUz9G pic.twitter.com/nsmcxMPoCi
— ANI (@ANI) October 4, 2024
ಈ ಕುರಿತು ಹೇಳಿಕೆ ನೀಡಿದ ಆಸ್ಪತ್ರೆಯ ವೈದ್ಯರಾದ ಡಾ.ರಮೇಶ್ ಅಗರ್ವಾಲ್ “ಗೋವಿಂದ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಯಾವುದೇ ತೊಂದರೆ ಇಲ್ಲ ಇನ್ನು 3-4 ವಾರಗಳ ಕಾಲ ವಿಶ್ರಾಂತಿ ಬೇಕು, ಅಲ್ಲದೆ ಅವರಿಗೆ ವ್ಯಾಯಾಮ, ಫಿಸಿಯೋಥೆರಪಿ ಎಲ್ಲವೂ ಮನೆಯಲ್ಲೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Road Mishap: ಟ್ರಕ್-ಟ್ರ್ಯಾಕ್ಟರ್ ಡಿಕ್ಕಿ; 10 ಕಾರ್ಮಿಕರು ಸಾವು; 3 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.