ಆಸ್ಕರ್ ಅವಾರ್ಡ್‌ಗೆ ಎಂಟ್ರಿಕೊಟ್ಟ ಭಾರತದ ‘ಛೆಲ್ಲೋ ಶೋʼ ಸಿನಿಮಾ
ಆಸ್ಕರ್ ರೇಸ್‌ನಿಂದ ಹೊರಬಿದ್ದ ಆರ್‌ಆರ್‌ಆರ್ , "ದಿ ಕಾಶ್ಮೀರ್ ಫೈಲ್ಸ್'
Team Udayavani, Sep 20, 2022, 8:12 PM IST
ನವದೆಹಲಿ: ಗುಜರಾತ್‌ನ “ಛೆಲ್ಲೋ ಶೋ’ ಸಿನಿಮಾವು ಭಾರತದಿಂದ ಆಸ್ಕರ್ ಪ್ರಶಸ್ತಿಗೆ ಅಧಿಕೃತ ಎಂಟ್ರಿ ಪಡೆದಿದೆ. ಮಂಗಳವಾರ ಈ ಚಿತ್ರವನ್ನು ಆಯ್ಕೆ ಮಾಡಿ ಭಾರತದ ಫಿಲಂ ಫೆಡರೇಷನ್ ಮಂಗಳವಾರ ಈ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ ನಡೆಸಿದ ಕಾಶ್ಮೀರಿಗರು: ಈ ಬಗ್ಗೆ ನಟ ಹೇಳಿದ್ದೇನು?
ಅಕಾಡೆಮಿ ಅವಾರ್ಡ್‌ನಲ್ಲಿ ‘ಅತ್ಯುತ್ತಮ ವಿದೇಶಿ ಫೀಚರ್ ಸಿನಿಮಾ’ ವಿಭಾಗ ಅಡಿಯಲ್ಲಿ ‘ಚೆಲ್ಲೋ ಶೋʼ ಸಿನಿಮಾ ಆಯ್ಕೆಯಾಗಿದೆ. ‘ಚೆಲ್ಲೋ ಶೋʼ ಎಂದರೆ ‘ಕೊನೆಯ ಶೋ’ ಎಂಬ ಅರ್ಥವನ್ನು ಇದು ಹೊಂದಿದೆ.
ಪಾನ್ ನಳಿನ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, 9 ವರ್ಷದ ಬಾಲಕನೊಬ್ಬನಿಗೆ ಸಿನಿಮಾದ ಮೇಲೆ ಉಂಟಾಗುವ ಪ್ರೀತಿಯ ಕಥೆಯನ್ನು ವಿವರಿಸುತ್ತದೆ. ಈ ಸಿನಿಮಾ ಕಳೆದ ವರ್ಷ ಜೂನ್‌ನಲ್ಲಿ ಟ್ರಿಬೆಕಾ ಚಲನಚಿತ್ರೋತ್ಸವದಲ್ಲಿ ಪ್ರೀಮಿಯರ್ ಆಗಿತ್ತು. ಭವಿನ್ ರಾಬರಿ, ಭವೇಶ್ ಶ್ರೀಮಲಿ, ರಿಚಾ ಮೀನಾ ಸೇರಿ ಅನೇಕರು ಅಭಿನಯಿಸಿರುವ ಸಿನಿಮಾ ಸ್ಪೇನ್‌ನ ಚಲನಚಿತ್ರೋತ್ಸವದಲ್ಲಿ ಗೋಲ್ಡನ್ ಸ್ಪೈಕ್ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಇದೇ ಅ.14ರಂದು “ಲಾಸ್ಟ್ ಫಿಲಂ ಶೋ'(ಇಂಗ್ಲಿಷ್) ಹೆಸರಿನಲ್ಲಿ ವಿಶ್ವಾದ್ಯಂತ ತೆರೆ ಕಾಣಲಿದೆ. ಅದಕ್ಕೂ ಮೊದಲೇ ಈ ಚಿತ್ರ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದುಕೊಂಡಿರುವುದು ವಿಶೇಷ.
“ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಆಸ್ಕರ್‌ಗೆ ಆಯ್ಕೆಯಾಗಬಹುದೆನ್ನುವ ನಿರೀಕ್ಷೆಯಿತ್ತು. ಇದರೊಂದಿಗೆ ‘ಆರ್ ಆರ್ ಆರ್’ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಸಾವಿರಾರು ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಸಿನಿಮಾವೂ ಆಸ್ಕರ್ ರೇಸ್ ನಲ್ಲಿ ಸ್ಥಾನ ಪಡೆದುಕೊಳ್ಳಲಿದೆ, ಆಸ್ಕರ್ ಗೆಲ್ಲಲಿದೆ ಎಂದು ರಾಜಮೌಳಿ ಭಾವಿಸಿದ್ದರು. ಆದರೆ, ಅದು ಸುಳ್ಳಾಗಿದೆ. ಅನೇಕರು ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ‘ಆರ್ ಆರ್ ಆರ್’ ಚಿತ್ರಕ್ಕೆ ಅವಕಾಶ ನೀಡಲೇಬೇಕು ಎಂದು ಕೋರುತ್ತಿದ್ದಾರೆ.
ಕಳೆದ ಬಾರಿ ಆಸ್ಕರ್‌ಗೆ ಭಾರತದಿಂದ ತಮಿಳಿನ “ಕೂಳಂಗಲ್’ ಸಿನಿಮಾ ಆಯ್ಕೆಯಾಗಿತ್ತು. ಆದರೆ ಅದು ಅಂತಿಮ ಹಂತ ತಲುಪಲು ವಿಫಲವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.