Tollywood: ದಸರಾ ಹಬ್ಬಕ್ಕೆ ಸ್ಪೆಷೆಲ್ ಅಪ್ಡೇಟ್ ಕೊಟ್ಟ ಮಹೇಶ್ ಬಾಬು ʼಗುಂಟೂರು ಕಾರಮ್ʼ
Team Udayavani, Oct 24, 2023, 12:07 PM IST
ಹೈದರಾಬಾದ್: ಪ್ರಿನ್ಸ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼ ಗುಂಟೂರು ಕಾರಮ್ʼ ಹೈಪ್ ಹೆಚ್ಚಿಸಿದೆ. ಮಹೇಶ್ ಬಾಬು ಲೋಕಲ್ ಹೈದಾನಂತೆ ಕಾಣಿಸಿಕೊಂಡಿರುವ ಪೋಸ್ಟರ್ ಗಳು ಈಗಾಗಲೇ ವೈರಲ್ ಆಗಿದೆ.
ʼ ಗುಂಟೂರು ಕಾರಮ್ʼ ಸಿನಿಮಾದ ಅಪ್ಡೇಟ್ ಗಳಿಂದಲೇ ಚಿತ್ರ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಿಸಿದೆ. ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚಾಗಲು ಮತ್ತೊಂದು ಕಾರಣವೆಂದರೆ ಇದು ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಅವರ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ಸಿನಿಮಾ. ಈ ಹಿಂದೆ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಅವರು 2010 ರಲ್ಲಿ ʼಖಲೇಜಾʼ ಸಿನಿಮಾವನ್ನು ಮಾಡಿದ್ದರು. ಇದೀಗ ಮತ್ತೆ ಸೂಪರ್ ಹಿಟ್ ಕಾಂಬಿನೇಷನ್ ಜೊತೆಯಾಗುತ್ತಿರುವುದು ಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದೆ.
ದಸರಾ ಹಬ್ಬದ ಪ್ರಯುಕ್ತ ಮಹೇಶ್ ಬಾಬು ಅವರು ತನ್ನ ʼ ಗುಂಟೂರು ಕಾರಮ್ʼ ಸಿನಿಮಾದ ಹೊಸ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ ಹಬ್ಬದ ಶುಭಾಶಯವನ್ನು ಕೋರಿದ್ದಾರೆ.
ಮಾಸ್ ಲುಕ್ ನಲ್ಲಿ ಮಹೇಶ್ ಬಾಬು ಅವರು ಧಮ್ ಎಳೆಯುತ್ತ ಕೂತಿರುವುದನ್ನು ಪೋಸ್ಟರ್ ನಲ್ಲಿ ನೋಡಬಹುದು. ಶೀಘ್ರದಲ್ಲಿ ಸಿನಿಮಾದ ಮೊದಲ ಹಾಡನ್ನು ರಿಲೀಸ್ ಮಾಡುವುದಾಗಿ ಪೋಸ್ಟರ್ ಮೂಲಕ ತಿಳಿಸಲಾಗಿದೆ.
ಅಂದಹಾಗೆ ಸಿನಿಮಾ ಮುಂದಿನ ಸಂಕ್ರಾಂತಿ ಹಬ್ಬಕ್ಕೆ ರಿಲೀಸ್ ಆಗಲಿದ್ದು,ಈ ಸಿನಿಮಾದಲ್ಲಿ ಜಯರಾಮ್, ಶ್ರೀಲೀಲಾ, ಮೀನಾಕ್ಷಿ ಚೌಧರಿ, ಜಗಪತಿ ಬಾಬು ಮತ್ತು ರಮ್ಯಾ ಕೃಷ್ಣ ಮುಂತಾದವರು ನಟಿಸಿದ್ದಾರೆ.
ಈ ಸಿನಿಮಾದ ಬಳಿಕ ರಾಜಮೌಳಿ ಅವರ ʼಎಸ್ ಎಸ್ ಎಂಬಿ29ʼ ಸಿನಿಮಾದಲ್ಲಿ ಮಹೇಶ್ ಬಾಬು ಕಾಣಿಸಿಕೊಳ್ಳಲಿದ್ದಾರೆ.
Lighting the way to a great year ahead!! #HappyDussehra #GunturKaaram 🔥 pic.twitter.com/sbku7utNXT
— Mahesh Babu (@urstrulyMahesh) October 23, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.