ಗ್ರ್ಯಾಮಿ ಪ್ರಶಸ್ತಿ ಪಡೆದ ಭಾರತೀಯ ಮೂಲದ ಗಾಯಕಿ ಫಲ್ಗುಣಿ ಶಾ
Team Udayavani, Apr 4, 2022, 2:10 PM IST
ಲಾಸ್ ವೇಗಾಸ್: ಭಾರತೀಯ ಮೂಲದ ಅಮೆರಿಕನ್ ಗಾಯಕಿ ಫಲ್ಗುಣಿ ಶಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿ ಜಯಿಸಿದ್ದಾರೆ. ಅತ್ಯುತ್ತಮ ಮಕ್ಕಳ ಸಂಗೀತ ಆಲ್ಬಮ್ ವಿಭಾಗದಲ್ಲಿ ಫಲ್ಗುಣಿ ಶಾ ಗ್ರ್ಯಾಮಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ‘ಎ ಕಲರ್ ಫುಲ್ ವರ್ಲ್ಡ್’ ಆಲ್ಬಮ್ ಗಾಗಿ ಫಲ್ಗುಣಿ ಈ ಪ್ರಶಸ್ತಿ ಜಯಿಸಿದ್ದಾರೆ.
“ಇಂದಿನ ಮ್ಯಾಜಿಕ್ ಅನ್ನು ವಿವರಿಸಲು ನನ್ನ ಬಳಿ ಪದಗಳಿಲ್ಲ. ಗ್ರ್ಯಾಮಿ ಪ್ರೀಮಿಯರ್ ಸಮಾರಂಭದಲ್ಲಿ ಪ್ರದರ್ಶನ ನೀಡುವುದು ಮತ್ತು ನಂತರ ‘ಎ ಕಲರ್‌ಫುಲ್ ವರ್ಲ್ಡ್’ನಲ್ಲಿ ಕೆಲಸ ಮಾಡಿದ ಎಲ್ಲಾ ಜನರ ಪರವಾಗಿ ಈ ಪ್ರತಿಮೆಯನ್ನು ಮನೆಗೆ ಕೊಂಡೊಯ್ಯುವುದು ಎಂತಹ ಗೌರವವಿದು” ಎಂದು ಫಲ್ಗುಣಿ ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.
“ನಾವು ಅತ್ಯಂತ ವಿನಮ್ರರಾಗಿದ್ದೇವೆ. ಈ ಪ್ರಶಸ್ತಿಗೆ ಗುರುತಿಸಿದ್ದಕ್ಕೆ ರೆಕಾರ್ಡಿಂಗ್ ಅಕಾಡೆಮಿಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ” ಎಂದು ಫಲು ಎಂದೇ ಹೆಸರಾದ ಫಲ್ಗುಣಿ ಶಾ ಬರೆದುಕೊಂಡಿದ್ದಾರೆ.
ಇದನ್ನೂ ಓದಿ:ಎರಡನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರು ಮೂಲದ ಸಂಗೀತ ಸಂಯೋಜಕ ರಿಕಿ ಕೇಜ್
ಗಾಯಕಿ ಫಲ್ಗುಣಿ ಶಾ ಅವರು ಪ್ರಸ್ತುತ ನ್ಯೂಯಾರ್ಕ್‌ನಲ್ಲಿ ನೆಲೆಸಿದ್ದಾರೆ. ಅವರು ಈ ಹಿಂದೆ ಎಆರ್ ರೆಹಮಾನ್ ಅವರೊಂದಿಗೆ ಸಹ ಕೆಲಸ ಮಾಡಿದ್ದರು.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಚಾಲಕ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.