ಪ್ರಭಾಸ್, ದೀಪಿಕಾ, ಬಿಗ್ ಬಿ.. ʼಪ್ರಾಜೆಕ್ಟ್ ಕೆʼಗೆ ಮತ್ತೊಬ್ಬ ದಿಗ್ಗಜ ನಟನ ಎಂಟ್ರಿ
Team Udayavani, Jun 25, 2023, 1:37 PM IST
ಮುಂಬಯಿ: ಬಿಗೆಸ್ಟ್ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗರುವ ʼಪ್ರಾಜೆಕ್ಟ್ ಕೆʼ ಸಿನಿಮಾ ತಂಡ ಭಾನುವಾರ (ಜೂ.25 ರಂದು) ಹೊಸ ಅಪ್ಡೇಟ್ ವೊಂದನ್ನು ನೀಡಿದೆ.
ಸುಮಾರು 500 ಕೋಟಿ ರೂ. ಬಜೆಟ್ ನಲ್ಲಿ ತಯರಾಗುತ್ತಿರುವ ʼಪ್ರಾಜೆಕ್ಟ್ ಕೆʼ ಸಟ್ಟೇರಿದ ದಿನದಂದಲೇ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದೆ. ಅದಕ್ಕೆ ಒಂದು ಕಾರಣ ಸಿನಿಮಾದ ಮಲ್ಟಿ ಸ್ಟಾರ್ಸ್ ಗಳು. ಸಿನಿಮಾದಲ್ಲಿ ಪ್ರಭಾಸ್, ದೀಪಿಕಾ ಪಡುಕೋಣೆ ಮತ್ತು ಅಮಿತಾಬ್ ಬಚ್ಚನ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿರುವ ಸಿನಿಮಾಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿಯಾಗಿದ್ದಾರೆ.
ʼಪ್ರಾಜೆಕ್ಟ್ ಕೆʼಚಿತ್ರವು ಗ್ರಾಫಿಕ್ಸ್ ಮತ್ತು ವಿಎಫ್‌ಎಕ್ಸ್ ಮೇಲೆ ಹೆಚ್ಚು ಅವಲಂಬಿತವಾಗಿದೆ. ಈಗಾಗಲೇ ಸುಮಾರು ಶೇ. 70-75 ರಷ್ಟು ಸಿನಿಮಾ ಮುಗಿದಿದೆ. ದೀಪಿಕಾ ಹಾಗೂ ಬಿಗ್ ಬಿ ಅವರ ಪಾತ್ರದ ಕೆಲ ಸೀನ್ ಗಳು ಶೂಟ್ ಆಗಲು ಬಾಕಿಯಿದೆ.
ಈ ಹಿಂದೆ ನಟ ಕಮಲ್ ಹಾಸನ್ ಅವರು ʼಪ್ರಾಜೆಕ್ಟ್ ಕೆʼ ಸಿನಿಮಾದಲ್ಲಿ ನಟಿಸಲಿದ್ದಾರೆ. ಅದಕ್ಕಾಗಿ 150 ಕೋಟಿ ರೂ. ಸಂಭಾವನೆಯನ್ನು ಪಡೆಯಲಿದ್ದಾರೆ ಎನ್ನುವ ಸುದ್ದಿಯೊಂದು ಹಬ್ಬಿತ್ತು. ಇದು ಪ್ರಭಾಸ್ ಅವರಿಗಿಂತ ದುಪ್ಪಟ್ಟು ಸಂಭಾವನೆ ಎಂದು ವರದಿ ಆಗಿತ್ತು.
ಇದೀಗ ಗೊಂದಲಗಳಿಗೆ ತೆರೆ ಎಳೆದಿದ್ದು, ಕಮಲ್ ಹಾಸನ್ ಸಿನಿಮಾದಲ್ಲಿ ನಟಿಸುವುದು ಪಕ್ಕಾ ಆಗಿದೆ. ಈ ಬಗ್ಗೆ ಸಿನಿಮಾ ಪ್ರೂಡಕ್ಷನ್ ಹೌಸ್ ವೈಜಯಂತಿ ಮೂವೀಸ್ ಟೀಸರ್ ವೊಂದರ ಮೂಲಕ ʼನಾಯಕನ್ʼ ಎಂಟ್ರಿಯ ಬಗ್ಗೆ ಅಧಿಕೃತವಾಗಿ ಹೇಳಿದೆ.
‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಕಮಲ್ ಹಾಸನ್ ಹಿಂದೆಂದೂ ಕಾಣದ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾ ಎಲ್ಲವೂ ಅಂದುಕೊಂಡಂತೆ ಆದರೆ ಜನವರಿ 12, 2024 ರಂದು ತೆರೆಗೆ ಬರಲಿದೆ.
ಚಿತ್ರಕ್ಕೆ ಸಂತೋಷ್ ನಾರಾಯಣನ್ ಅವರ ಸಂಗೀತ ಸಂಯೋಜನೆ , ಜೋರ್ಡ್ಜೆ ಸ್ಟೋಜಿಲ್ಕೋವಿಕ್ ಅವರ ಛಾಯಾಗ್ರಾಹಕ ಮತ್ತು ಕೋಟಗಿರಿ ವೆಂಕಟೇಶ್ವರ ರಾವ್ ಸಂಕಲನವಿರಲಿದೆ.
Welcoming the greatest actor Ulaganayagan @ikamalhaasan. Our journey becomes Universal now. #ProjectK https://t.co/DIbI5R7YA2#Prabhas @SrBachchan @deepikapadukone @nagashwin7 @DishPatani @Music_Santhosh @AshwiniDuttCh @VyjayanthiFilms pic.twitter.com/pokTfuErl0
— Vyjayanthi Movies (@VyjayanthiFilms) June 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.