ಸಾವಿರಾರು ಜನರ ಹಸಿವು ನೀಗಿಸುತ್ತಿರುವ ಬಾಲಿವುಡ್ ನಟಿ
Team Udayavani, May 6, 2021, 4:23 PM IST
ಮುಂಬೈ:ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ದಿನಗೂಲಿ ಕಾರ್ಮಿಕರಿಗೆ ಹಾಗೂ ಸಂಕಷ್ಟದಲ್ಲಿರುವ ಜನರಿಗೆ ಹೊಟ್ಟೆ ತುಂಬ ಊಟ ಹಂಚಿದ್ದಾರೆ.
ಬಿಟೌನ್ ಬ್ಯೂಟಿ ಜಾಕ್ವೆಲಿನ್, ಕೋವಿಡ್ ಸಂಕಷ್ಟದ ಸಮಯದಲ್ಲಿ ತೊಂದರೆಗೆ ಸಿಲುಕಿರುವ ಜನರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಫೌಂಡೆಶನ್ವೊಂದನ್ನು ಶುರು ಮಾಡಿದ್ದಾರೆ. ಇದು ಹಲವು ಎನ್ಜಿಒಗಳ ಜೊತೆ ಕೈ ಜೋಡಿಸಿದೆ. ಈ ಫೌಂಡೆಶನ್ ಮೂಲಕ ಹಣ ಸಂಗ್ರಹಿಸಿ, ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುತ್ತಿದ್ದಾರೆ.
ಇತ್ತೀಚಿಗೆ ಮುಂಬೈನ ರೋಟಿ ಬ್ಯಾಂಕ್ ಹೆಸರಿನ ಎನ್ಜಿಒ ಕಚೇರಿಗೆ ಭೇಟಿ ನೀಡಿದ ಜಾಕ್ವೆಲಿನ್, ಸಾಕಷ್ಟು ಜನರಿಗೆ ಊಟ ನೀಡಿದ್ದಾರೆ. ಈ ಚಿತ್ರಗಳನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ರೋಟಿ ಬ್ಯಾಂಕ್ ಎನ್ಜಿಒ ನಿವೃತ್ತ ಪೊಲೀಸ್ ಅಧಿಕಾರಿ ಡಿ. ಶಿವಾನಂದನ್ ಅವರಿಂದ ನಡೆಯುತ್ತಿದ್ದು, ಹಸಿದ ಸಾವಿರಾರು ಹೊಟ್ಟೆಗಳಿಗೆ ಅನ್ನ ನೀಡುತ್ತಿದ್ದಾರೆ ಎಂದು ಅವರು ಬರೆದುಕೊಂಡಿದ್ದಾರೆ.
ಇನ್ನು ಬಾಲಿವುಡ್ನ ಸಾಕಷ್ಟು ತಾರೆಯರು ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಸಹಾಯದ ಹಸ್ತ ಚಾಚಿದ್ದಾರೆ. ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಪ್ರತಿ ನಿತ್ಯ 5000 ಜನರಿಗೆ ಊಟ ವಿತರಿಸುವ ಕಾರ್ಯ ಮಾಡುತ್ತಿದ್ದಾರೆ. ಸ್ವತಃ ತಾವೇ ಮುಂದೆ ನಿಂತು ಆಹಾರವನ್ನು ಪರಿಶೀಲಿಸಿ ಪ್ಯಾಕ್ ಮಾಡಿಸುತ್ತಿದ್ದಾರೆ. ನಟ ಸೋನು ಸೂದ್ ಅವರು ಕಳೆದ ವರ್ಷದಿಂದ ಪರೋಪಕಾರಿ ಕಾರ್ಯ ಮಾಡುತ್ತಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.