![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 30, 2021, 5:18 PM IST
ಹೈದರಾಬಾದ್ : ಬಾಯ್‍ಫ್ರೆಂಡ್ ಕೈ ಕೊಟ್ಟಿದ್ದಕ್ಕೆ ಮನನೊಂದು ತೆಲುಗು ಚಿತ್ರರಂಗದ ಜ್ಯೂನಿಯರ್ ಆರ್ಟಿಸ್ಟ್ ಅನುರಾಧ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‍ನಲ್ಲಿ ನಡೆದಿದೆ.
ಸಾಕಷ್ಟು ಸಿನಿಮಾಗಳಲ್ಲಿ ಸಹ ಕಲಾವಿದೆಯಾಗಿ ನಟಿಸಿದ್ದ ಅನುರಾಧ, ಕಿರಣ್ ಎಂಬುವರನ್ನು ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದಳು. ಈತನನ್ನೆ ಮದುವೆಯಾಗಬೇಕೆಂದು ಬಯಸಿದ್ದಳು. ಆದರೆ, ಮದುವೆಗೆ ನಿರಾಕರಿಸಿದ ಕಿರಣ, ಈಕೆಗೆ ಕೈ ಕೊಟ್ಟಿದ್ದರು. ಇದರಿಂದ ಮನನೊಂದಿದ್ದ ಅನುರಾಧ ಹೈದರಾಬಾದ್‍ನ ಬಂಜಾರಾ ಹಿಲ್ಸ್ ನಲ್ಲಿರುವ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ.
ಅನುರಾಧ ನಾಲ್ಕು ದಿನಗಳಿಂದ ಮನೆಯಿಂದ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಮನೆಗ ಬಾಗಿಲು ಮುರಿದು ಒಳ ಪ್ರವೇಶಿಸಿದ್ದರು. ಈ ವೇಳೆ ನಟಿ ಅನುರಾಧ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಸಿಲ್ಲಿಂಗ್ ಫ್ಯಾನ್‍ಗೆ ನೇತಾಡುತ್ತಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಕನ್ನಡದ ನಟಿಯೂ ಆತ್ಮಹತ್ಯೆ :
ಇನ್ನು ಗುರುವಾರ ಕನ್ನಡ ಚಿತ್ರರಂಗದ ನಟಿ ಸೌಜನ್ಯಾ(ಸವಿ ಮಾದಪ್ಪ) ಅವರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದು ಸಾವಿಗೆ ಶರಣಾಗಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.