ನೇಣು ಬಿಗಿದ ಸ್ಥಿತಿಯಲ್ಲಿ ‘ಕಾಂಚನಾ-3’ ನಟಿ ಶವ ಪತ್ತೆ
Team Udayavani, Aug 23, 2021, 3:44 PM IST
ಪಣಜಿ: ರಷ್ಯಾ ಮೂಲದ ರೂಪದರ್ಶಿ ಹಾಗೂ ಚಿತ್ರ ನಟಿ ಅಲೆಕ್ಸಾಂಡ್ರಾ ಜಾವು ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶುಕ್ರವಾರ (ಆ.22) ಗೋವಾದಲ್ಲಿರುವ ಆಕೆಯ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತ ವಾಗಿದೆ.
ಈ ನಟಿ ಕಾಲಿವುಡ್‍ನಲ್ಲಿ ಸೂಪರ್ ಡೂಪರ್ ಹಿಟ್ ಪಡೆದಿದ್ದ ಕಾಂಚನಾ-3 ಸಿನಿಮಾದಲ್ಲಿ ನಟಿಸಿದ್ದರು. ಉತ್ತರ ಗೋವಾದ ಪಟ್ಟಣವೊಂದರಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಅಲೆಕ್ಸಾಂಡ್ರಾ ಮೃತದೇಹ ಮನೆಯಲ್ಲಿ ಪತ್ತೆಯಾಗಿದ್ದು, ಆಕೆಯ ನೆರೆಹೊರೆ ಮನೆಯವರು ಕೆಲವು ದಿನಗಳ ಹಿಂದೆ ಅಲೆಕ್ಸಾಂಡ್ರಾ ಬಾಯ್ ಫ್ರೆಂಡ್ ಅವರ ಮನೆಯಿಂದ ಹೊರಬಂದಿದ್ದನ್ನು ನೋಡಿದೇವು. ಅಂದಿನಿಂದ ಅಲೆಕ್ಸಾಂಡ್ರಾ ಬಹಳ ಖಿನ್ನತೆಯಲ್ಲಿದ್ದರು ಮತ್ತು ಮನೆಯಿಂದ ಹೊರಗೆ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯ ಪೊಲೀಸರು ಇದೊಂದು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದು ಮರಣೋತ್ತರ ಪರೀಕ್ಷೆಯ ವರದಿಗೆ ಕಾಯುತ್ತಿದ್ದಾರೆ.
ಅಲೆಕ್ಸಾಂಡ್ರಾ ಮೂಲತಃ ರಷ್ಯಾದವರಾಗಿದ್ದು, ಅವರ ಕುಟುಂಬಸ್ಥರು ರಷ್ಯಾದಲ್ಲಿರುವುದರಿಂದ ಮಾಹಿತಿ ನೀಡಲಾಗಿದೆ. ಅಲ್ಲದೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ತನಿಖೆ ನಡೆಸಲು ಆರಂಭಿಸಿದ್ದಾರೆ.
ಕಾಲಿವುಡ್ ನಟ ರಾಘವ್ ಲಾರೆನ್ಸ್‌ಗೆ ಜೋಡಿಯಾಗಿ ಅಲೆಕ್ಸಾಂಡ್ರಾ ಕಾಂಚನಾ-3 ಸಿನಿಮಾದಲ್ಲಿ ಅಭಿನಯಿಸಿದ್ದರು. ಈ ಸಿನಿಮಾ ಕಾಲಿವುಡ್‍ನಲ್ಲಿ ಯಶಸ್ಸು ಕೂಡ ಕಂಡಿತ್ತು.
ಮಾನಸಿಕ ಖಿನ್ನತೆ ?
ಅಲೆಕ್ಸಾಂಡ್ರಾ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದೆ. ಕೆಲದಿನಗಳ ಹಿಂದೆ ಆಕೆಯ ಭಾಯ್ ಫ್ರೆಂಡ್ ಬ್ರೇಕಪ್ ಮಾಡಿಕೊಂಡಿದ್ದ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಈಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.