![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 30, 2021, 8:25 PM IST
ಮುಂಬೈ: ಜಯಲಲಿತಾ ಪಾತ್ರದಲ್ಲಿ ನಟಿಸುವ ಮೂಲಕ ಸುದ್ದಿಯಲ್ಲಿದ್ದ ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಇದೀಗ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ.
ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಟಿ ಕಂಗನಾ, ನಾನು ಮತ್ತು ನಿರ್ದೇಶಕ ಸಾಯಿ ಕಬೀರ್ ಜೊತೆಯಾಗಿ ರಾಜಕೀಯ ಆಧಾರಿತ ಸಿನಿಮಾ ಒಂದರಲ್ಲಿ ಕೆಲಸ ಮಾಡಲಿದ್ದೇವೆ. ಈ ವಿಚಾರವನ್ನು ನಿಮ್ಮೊಂದಿಗೆ ಮಾಹಿತಿ ಹಂಚಿಕೊಳ್ಳಲು ನನಗೆ ಬಹಳ ಸಂತೋಷವಾಗುತ್ತಿದೆ ಎಂದಿದ್ದಾರೆ
ಇದು ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಜೀವನ ಚರಿತ್ರೆಯನ್ನು ಆಧರಿಸಿರುವ ಸಿನಿಮಾ ಅಲ್ಲ. ಬದಲಾಗಿ ಕೆಲವು ರಾಜಕೀಯ ತಿರುವುಗಳನ್ನು ಒಳಗೊಂಡಿರುವ ಸಿನಿಮಾ ಆಗಿದೆ ಎಂದಿರುವ ಇವರು, ಈ ಸಿನಿಮಾದಲ್ಲಿ ಹಲವಾರು ಪ್ರಮುಖ ನಟ- ನಟಿಯರು ಬಣ್ಣಹಚ್ಚಲಿದ್ದಾರೆ ಎಂದಿದ್ದಾರೆ.
ಇದನ್ನೂ ಓದಿ:ಭಾರತದ ವಿರುದ್ಧ ಪಿತೂರಿ; ಪಾಕಿಸ್ಥಾನ ನೌಕಾಪಡೆಗಾಗಿ ಚೀನದಿಂದ ಮತ್ತೊಂದು ಯುದ್ಧ ನೌಕೆ!
ಈ ಹಿಂದೆ ನಟಿ ಕಂಗನಾ ಅವರ ‘ರಿವಾಲ್ಟರ್ ರಾಣಿ’ ಸಿನಿಮಾದಲ್ಲಿ ಕೆಲಸ ಮಾಡಿದ್ದ ನಿರ್ದೇಶಕ ಸಾಯಿ ಕಬೀರ್ ಈ ಹೊಸ ಚಿತ್ರಕ್ಕೆ ಕಥೆ- ಚಿತ್ರಕಥೆಯನ್ನು ಬರೆಯುವುದರ ಜೊತೆಗೆ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಅನ್ನೂ ಹೇಳಲಿದ್ದಾರೆ. ಸಂಜಯ್ ಗಾಂಧಿ, ರಾಜೀವ್ ಗಾಂಧಿ, ಮೊರಾರ್ಜಿ ದೇಸಾಯಿ ಮುಂತಾದ ಹಲವು ಪ್ರಮುಖ ಪಾತ್ರಗಳಿರುವ ಈ ಸಿನಿಮಾವನ್ನು ಮಣಿಕರ್ಣಿಕಾ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ ಎನ್ನಲಾಗಿದೆ.
ಇದನ್ನೂ ಓದಿ:ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಕೊಂದ ಪತ್ನಿ
ಈ ನಡುವೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ರಾಜಕೀಯ ನಾಯಕರ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಕಂಗನ ಮುಂದಿನ ದಿನಗಳಲ್ಲಿ ರಾಜಕೀಯ ಪ್ರವೇಶ ಮಾಡುವ ಸಾಧ್ಯತೆಗಳಿವೆ ಎಂಬ ಸುದ್ದಿಗಳು ಹರಿದಾಡುತ್ತಿವೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.