Shivarajkumar: ಕೇರಳ ಸ್ಟೋರಿ ನಿರ್ದೇಶಕರ ಜೊತೆ ಶಿವಣ್ಣ ಸಿನಿಮಾ?; ಭೇಟಿ ಫೋಟೋ ವೈರಲ್
Team Udayavani, Aug 29, 2023, 6:13 PM IST
ಬೆಂಗಳೂರು: ʼದಿ ಕೇರಳ ಸ್ಟೋರಿʼ ಸಿನಿಮಾದ ಮೂಲಕ ಸುದ್ದಿಯಾದ ನಿರ್ದೇಶಕ ಸುದೀಪ್ತೋ ಸೇನ್ ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿರುವುದು ಸದ್ದು ಮಾಡಿದೆ.
ʼಜೈಲರ್ʼ ಸಿನಿಮಾದ ಬಳಿಕ ಶಿವರಾಜ್ ಕುಮಾರ್ ಅವರಿಗೆ ಅನ್ಯಭಾಷೆಯ ಸಿನಿಮಾರಂಗದಿಂದ ಆಫರ್ ಗಳು ಬರುತ್ತಿವೆ. ʼಜೈಲರ್ʼ ನಲ್ಲಿನ ಅವರ ಅತಿಥಿ ಪಾತ್ರಕ್ಕೆ ಫ್ಯಾನ್ಸ್ ಗಳು ಫಿದಾ ಆಗಿದ್ದಾರೆ. ಇದು ಮಾತ್ರವಲ್ಲದೆ ತಮಿಳಿನ ಧನುಷ್ ಅವರ ʼಕ್ಯಾಪ್ಟನ್ ಮಿಲ್ಲರ್ʼ ನಲ್ಲೂ ಶಿವಣ್ಣ ಕಾಣಿಸಿಕೊಳ್ಳಲಿದ್ದಾರೆ.
ʼದಿ ಕೇರಳ ಸ್ಟೋರಿʼ ಸಿನಿಮಾ ಒಂದಷ್ಟು ವಿವಾದಕ್ಕೆ ಗುರಿಯಾಗಿತ್ತು. ವಿವಾದಕ್ಕೆ ಒಳಗಾದರೂ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಮಾಯಿ ಮಾಡಿತ್ತು. ʼದಿ ಕೇರಳ ಸ್ಟೋರಿʼ ಬಳಿಕ ನಿರ್ದೇಶಕ ಸುದೀಪ್ತೋ ಸೇನ್ ʼಬಸ್ತರ್ʼ ಎನ್ನುವ ಸಿನಿಮಾವನ್ನು ಅನೌನ್ಸ್ ಮಾಡಿದ್ದಾರೆ. ಈ ಸಿನಿಮಾವನ್ನು ಕೇರಳ ಸ್ಟೋರಿ ನಿರ್ಮಿಸಿದ ಸಂಸ್ಥೆಯೇ ನಿರ್ಮಾಣ ಮಾಡಲಿದೆ.
ಈ ನಡುವೆ ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್ ಅವರು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಆಗಿದ್ದಾರೆ. ರಹಸ್ಯವಾಗಿ ಶಿವರಾಜ್ ಕುಮಾರ್ ಅವರನ್ನು ಅವರ ನಿವಾಸದಲ್ಲಿ ಅವರು ಭೇಟಿ ಆಗಿದ್ದಾರೆ. ಆದರೆ ಅವರ ಭೇಟಿ ವೇಳೆಗಿನ ಫೋಟೋ ಲೀಕ್ ಆಗಿದ್ದು ವೈರಲ್ ಆಗಿದೆ.
ಹಿಂದಿ ಸಿನಿಮಾವೊಂದರ ಕುರಿತಾಗಿ ಚರ್ಚಿಸಿಲು ಸುದೀಪ್ತೋ ಸೇನ್ ಅವರು ಶಿವಣ್ಣರನ್ನು ಭೇಟಿ ಆಗಿದ್ದಾರೆ ಎನ್ನಲಾಗಿದೆ. ಅವರ ಭೇಟಿಯ ವೇಳೆ ನಿರ್ದೇಶಕ ಎನ್ ಎಸ್ ರಾಜಕುಮಾರ್ ಅವರು ಕೂಡ ಇದ್ದರು.
ಶಿವರಾಜ್ ಕುಮಾರ್ ಸುದೀಪ್ತೋ ಅವರ ಆಫರ್ ಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎನ್ನಲಾಗಿದ್ದು, ಮುಂದಿನ ದಿನಗಳಲ್ಲಿ ದಿನಾಂಕ ಮತ್ತಿತರ ವಿಚಾರದ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ. ಒಂದು ವೇಳೆ ಇದು ಅಧಿಕೃತವಾದರೆ ಶಿವಣ್ಣ ಬಾಲಿವುಡ್ ಗೆ ಎಂಟ್ರಿ ಕೊಡಲಿದ್ದಾರೆ.
ಸದ್ಯ ಶಿವರಾಜ್ ಕುಮಾರ್ ಶ್ರಿನೀ ಅವರ ʼಘೋಸ್ಟ್ʼ ʼಕರಟಕ ದಮನಕʼ, ʼ45ʼ,ʼ ಭೈರತಿ ರಣಂಗಲ್ʼ ಮುಂತಾದ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದಲ್ಲದೇ ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್ ಅವರೊಂದಿಗೂ ಶಿವಣ್ಣ ನಟಿಸಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.