ಪೊಲೀಸ್‌ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್‌ ಸ್ಟರ್‌ ಆದದ್ದೇಗೆ?


ಸುಹಾನ್ ಶೇಕ್, Apr 15, 2024, 3:44 PM IST

11

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ (Salman Khan) ಅವರಿಗೆ ಜೀವ ಬೆದರಿಕೆ ಹಾಗೂ ಪಂಜಾಬಿ ಗಾಯಕ ಸಿಧು ಮೂಸೆವಾಲ ಕೊಲೆ ಪ್ರಕರಣ, ಇತ್ತೀಚೆಗಿನ ಸಿದ್ದಿಕಿ ಬಾಬಾ ಹತ್ಯೆ ಗುಂಡಿಕ್ಕಿ ಹತ್ಯೆಗೈದ ಪ್ರಕರಣ ಸೇರಿದಂತೆ ಅಪರಾಧ ಜಗತ್ತಿನಲ್ಲಿ ಗ್ಯಾಂಗ್‌ಸ್ಟರ್‌ ಆಗಿ ಗುರುತಿಸಿಕೊಂಡಿರುವ ಲಾರೆನ್ಸ್ ಬಿಷ್ಣೋಯ್ (Gangster Lawrence Bishnoi) ಅವರ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ.

ಜೈಲಿನಲ್ಲೇ ಇದ್ದುಕೊಂಡು ತನ್ನ ತಂಡದ ಮೂಲಕ ಪಂಜಾಬಿ ಗಾಯಕರು ಹಾಗೂ ಬಿಟೌನ್ ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕುತ್ತಿರುವ ಈ ಲಾರೆನ್ಸ್ ಬಿಷ್ಣೋಯ್ ಯಾರು? ಕಳೆದ 10 ವರ್ಷಗಳಿಂದ ಅಪರಾಧ ಜಗತ್ತಿನಲ್ಲಿ ಬೆಳೆದ ಲಾರೆನ್ಸ್ ಬಿಷ್ಣೋಯ್ ಹಿನ್ನೆಲೆ ಏನು? ಎನ್ನುವುದರ ಬಗ್ಗೆ ಒಂದು ವರದಿ ಇಲ್ಲಿದೆ.

ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಮಗ: ಲಾರೆನ್ಸ್ ಬಿಷ್ಣೋಯ್ ಅವರದು ಮಧ್ಯಮ ವರ್ಗದ ಕುಟುಂಬದ. ಪೊಲೀಸ್‌ ಕಾನ್ಸ್‌ ಸ್ಟೇಬಲ್‌ ಆಗಿರುವ ತಂದೆಗೆ ಊರಿನವರ ಮುಂದೆ ನಾಲ್ಕು ಮಾತಿನ ಗೌರವ ಸಿಗುತ್ತಿತ್ತು. ತಂದೆ ಅಂದುಕೊಂಡಂತೆ ಆಗಿದ್ದರೆ ಮಗ ಲಾರೆನ್ಸ್‌ ಇಂದು ಒಳ್ಳೆಯ ಅಧಿಕಾರಿಯೊ, ಒಳ್ಳೆಯ ಕೆಲಸದಲ್ಲೋ ಇರುತ್ತಿದ್ದ ಆದರೆ ಆದದ್ದೇ ಬೇರೆ.

ಹರಿಯಾಣ ಪೊಲೀಸ್ ಪೇದೆಯ ಮಗನಾಗಿದ್ದ ಲಾರೆನ್ಸ್ ಪಂಜಾಬ್‌ನ ಫಿರೋಜ್‌ಪುರದಲ್ಲಿ ಜನಿಸಿ ಉನ್ನತ ಶಿಕ್ಷಣವನ್ನು ಪಡೆದು, ಪಂಜಾಬ್ ವಿಶ್ವವಿದ್ಯಾಲಯದಿಂದ ಎಲ್‌ ಎಲ್‌ ಬಿ ಪದವಿಯನ್ನು ಪಡೆದರು. ಶಿಕ್ಷಿತನಾಗಿದ್ದ ಮಗನನ್ನು ನೋಡಿ ಗೌರವ ಪಡುತ್ತಿದ್ದ ಕುಟುಂಬ, ಮಗನ ರಾಜಕೀಯ ಸೇರ್ಪಡೆಯಿಂದ ಗೌರವ ಕಳೆದುಕೊಳ್ಳುವಂತಾಗಿತ್ತು.

ಅದು ಲಾರೆನ್ಸ್‌ ಕಾಲೇಜಿನಲ್ಲಿದ್ದ ಸಮಯ. ಚಂಡೀಗಢದಲ್ಲಿ ನಡೆದ ಕಾಲೇಜು ಚುನಾವಣೆಗಳಲ್ಲಿ ವಿದ್ಯಾರ್ಥಿ ರಾಜಕೀಯಕ್ಕೆ ಮೊದಲ ಬಾರಿಗೆ ಲಾರೆನ್ಸ್‌ ಎಂಟ್ರಿ ಕೊಟ್ಟಿದ್ದ. ಇದು ಆತನ ಅಪರಾಧ ಜಗತ್ತಿನ ಪ್ರಾರಂಭಿಕ ಹೆಜ್ಜೆಗಳಾಗಿತ್ತು. ಶಿಕ್ಷಣ ಪಡೆದು ಒಳ್ಳೆಯ ದಾರಿಯಲ್ಲಿ ಸಾಗಬೇಕಿದ್ದ ಲಾರೆನ್ಸ್‌ ಕಾಲೇಜು ದಿನದಲ್ಲೇ ಕುಖ್ಯಾತ ದರೋಡೆಕೋರನಾಗಿದ್ದ ಜಗ್ಗು ಭಗವಾನ್‌ಪುರಿಯ ತಂಡದಲ್ಲಿ ಕಾಣಿಸಿಕೊಳ್ಳುತ್ತಾರೆ. ಸಣ್ಣಪುಟ್ಟ ಅಪರಾಧ ಕೃತ್ಯದಲ್ಲಿ ಭಾಗಿಯಾಗುತ್ತಾರೆ. 2013 ರಲ್ಲಿ ಕಾಲೇಜು ಚುನಾವಣೆಯ ವಿಜೇತ ಅಭ್ಯರ್ಥಿ ಮತ್ತು ಲುಧಿಯಾನ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯ ಸಮಯದಲ್ಲಿ ಪ್ರತಿಸ್ಪರ್ಧಿ ಅಭ್ಯರ್ಥಿ ಆಗಿದ್ದಾತನನ್ನು ಗುಂಡಿಕ್ಕಿ ಹತ್ಯೆಗೈಯುವ ಮೂಲಕ ಅಪರಾಧ ಜಗತ್ತಿನಲ್ಲಿ ಮೊದಲ ಕ್ರೂರ ಅಧ್ಯಾಯಕ್ಕೆ ಮುನ್ನುಡಿ ಬರೆದುಬಿಟ್ಟಿದ್ದ. ಇದಾದ ಬಳಿಕ 2014 ರಲ್ಲಿ ರಾಜಸ್ಥಾನ ಪೊಲೀಸರ ಎನ್‌ಕೌಂಟರ್‌ನಲ್ಲಿ ಗುಂಡೇಟು ತಿಂದು ಜೈಲುಪಾಲಾಗುತ್ತಾನೆ.

ಕೆಲ ಸಮಯದ ಬಳಿಕ ಜೈಲಿನಿಂದ ಜಾಮೀನು ಪಡೆದು ಹೊರಬಂದ ಬಿಷ್ಣೋಯ್ ಮತ್ತೆ ಅಪರಾಧ ಜಗತ್ತಿನಲ್ಲಿ ನಾನಾ ಕೃತ್ಯವನ್ನು ಎಸೆಗುತ್ತಾನೆ. ಈ ಕಾರಣದಿಂದ 2016 ರಲ್ಲಿ ಮತ್ತೆ ಬಂಧನಕ್ಕೊಳಾಗುತ್ತಾನೆ.  2021 ರವರೆಗೆ ರಾಜಸ್ಥಾನದ ಜೈಲಿನಲ್ಲಿದ್ದ ಬಿಷ್ಣೋಯ್ ಯನ್ನು ನಂತರ ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ದೆಹಲಿಯ ತಿಹಾರ್ ಜೈಲಿಗೆ ವರ್ಗಾಯಿಸಲಾಗುತ್ತದೆ.

ಆದರೆ ಜೈಲಿನಲ್ಲಿದ್ದುಕೊಂಡೇ ಬಿಷ್ಣೋಯ್  ತನ್ನ ಕ್ರಿಮಿನಲ್ ನೆಟ್‌ವರ್ಕ್ ನ್ನು  ಬೆಳೆಸುತ್ತಾನೆ. ಬಿಷ್ಣೋಯ್ ಭಾರತದಲ್ಲಿನ 5 ರಾಜ್ಯಗಳಲ್ಲಿ ಸುಮಾರು 700 ಶಾರ್ಪ್‌ಶೂಟರ್‌ಗಳ ಗ್ಯಾಂಗ್‌ಗೆ ಕಮಾಂಡರ್ ಆಗಿದ್ದು, ಈತನ ಸಂಪರ್ಕ ಕೆನಡಾದವರೆಗೂ ಇದೆ. ಈತನ ವಿರುದ್ಧ ಕೊಲೆ, ಕೊಲೆ ಯತ್ನ, ಬೆದರಿಕೆ, ದರೋಡೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ.

2018 ರಲ್ಲಿ ಬಿಷ್ಣೋಯ್  ಹೆಸರು ಭಾರತದಲ್ಲಿ ಸಂಚಲನ ಸೃಷ್ಟಿಸುತ್ತದೆ. ಅದಕ್ಕೆ ಕಾರಣ ಬಿಷ್ಣೋಯ್ ಬಾಲಿವುಡ್‌ ನಟ ಸಲ್ಮಾನ್‌ ಖಾನ್ ಅವರಿಗೆ ಜೀವ ಬೆದರಿಕೆಯನ್ನು ಹಾಕಿದ್ದು!

1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್​ಗಾಗಿ ಸಲ್ಮಾನ್​ ಖಾನ್​ ರಾಜಸ್ಥಾನದ ಜೋಧ್‌ಪುರಕ್ಕೆ ತೆರಳಿದ್ದರು.  ಆ ಸಮಯದಲ್ಲಿ ಸಲ್ಮಾನ್ ಖಾನ್ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರು. ಬಿಷ್ಣೋಯ್ ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ, ಈ ಪ್ರಾಣಿಯನ್ನು ಕೊಲ್ಲುವುದನ್ನು ಅಥವಾ ಮರವನ್ನು ಕಡಿಯುವುದನ್ನು ಬಿಷ್ಣೋಯಿಗಳು ಎಂದಿಗೂ ಸಹಿಸುವುದಿಲ್ಲ.

ಅಂದಿನಿಂದ ಇಂದಿನವರೆಗೆ ಸಲ್ಮಾನ್‌ ಖಾನ್‌ ಅವರಿಗೆ ಅನೇಕ ಬಾರಿ ಗ್ಯಾಂಗ್ ಸ್ಟರ್‌ ಲಾರೆನ್ಸ್‌ ಇ-ಮೇಲ್‌ ಮೂಲಕ ಬೆದರಿಕೆಯನ್ನು ಹಾಕುತ್ತಲೇ ಬಂದಿದ್ದ. ಇತ್ತೀಚೆಗೆ ಗುಂಡಿನ ದಾಳಿ ನಡೆಸಿ, ಮತ್ತೊಮ್ಮೆ ಸಲ್ಮಾನ್‌ ಖಾನ್‌ ಗೆ ಎಚ್ಚರಿಕೆಯನ್ನು ನೀಡಿದ್ದ. 2022 ಹಾಗೂ 2023 ರ ಅವಧಿಯಲ್ಲಿ ಬಿಷ್ಣೋಯ್ ಹಲವು ಬಾರಿ ಸಲ್ಮಾನ್‌ ಖಾನ್‌ ಗೆ ಬೆದರಿಕೆಯನ್ನು ಹಾಕಿದ್ದ.

-ಸುಹಾನ್‌ ಶೇಕ್

ಟಾಪ್ ನ್ಯೂಸ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aishwarya Rai  ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್‌

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

Actress: ಸಲ್ಮಾನ್‌,ಶಾರುಖ್‌ ಬಳಿಕ ಖ್ಯಾತ ನಟಿಗೆ ಜೀವ ಬೆದರಿಕೆ.. 50‌ ಲಕ್ಷ ರೂ. ಡಿಮ್ಯಾಂಡ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.