ದೀಪಿಕಾ ಪಡುಕೋಣೆ ಟ್ವಿಟ್ಟರ್, ಇನ್ ಸ್ಟಾಗ್ರಾಂನ ಎಲ್ಲಾ ಫೋಸ್ಟ್ ಗಳು ಡಿಲೀಟ್: ಕಾರಣವೇನು ?
Team Udayavani, Jan 2, 2021, 8:10 PM IST
ಮುಂಬೈ: ಬಾಲಿವುಡ್ ಅಂಗಳದ ಬಹು ಬೇಡಿಕೆಯ ನಟಿ ದೀಪಿಕಾ ಪಡುಕೋಣೆ ತಮ್ಮ ಇನ್ ಸ್ಟಾಗ್ರಾಂ, ಟ್ವಿಟ್ಟರ್ ಖಾತೆಯ ಪೋಸ್ಟ್ ಗಳೆಲ್ಲವನ್ನೂ ಡಿಲೀಟ್ ಮಾಡಿದ್ದು, ಈ ಕುರಿತು ಸಾಮಾಜಿಕ ಜಾಲ ತಾಣಗಳಲ್ಲಿ ಭಾರಿ ಚರ್ಚೆ ನಡೆಸಲಾಗುತ್ತಿದೆ.
ಇತ್ತೀಚಿನ ದಿನಗಳಲ್ಲಿ ನಟಿ ದೀಪಿಕಾ ಪಡುಕೋಣೆ, ಸಾಮಾಜಿಕ ಜಾಲತಾಣಗಳಲ್ಲಿ ಆ್ಯಕ್ವೀವ್ ಆಗಿದ್ದು , ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಬರೋಬ್ಬರಿ 52.5 ಮಿಲಿಯನ್ ಫಾಲೋವರ್ಸ್ ಗಳನ್ನು ಹೊಂದಿದ್ದರು. ಟ್ವಿಟ್ಟರ್ ನಲ್ಲೂ 27.7 ಮಿಲಿಯನ್ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು.
ತಾವು ಪ್ರತಿ ಸಿನಿಮಾದಲ್ಲಿ ನಟಿಸಿದ ಬಳಿಕ ಆ ಸಿನಿಮಾದ ಪೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಳ್ಳುತ್ತಿದ್ದ ಈ ನಟಿ ಇದೀಗ ಒಮ್ಮೆಲೆ ತನ್ನ ಖಾತೆಯಲ್ಲಿರುವ ಎಲ್ಲಾ ಪೋಸ್ಟ್ ಗಳನ್ನು ಡಿಲಿಟ್ ಮಾಡಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿದೆ. ಆದರೆ ಈ ಕುರಿತಾದ ಯಾವುದೇ ಮಾಹಿತಿಯನ್ನು ನಟಿ ಇಲ್ಲಿಯವರೆಗೂ ಬಹಿರಂಗಪಡಿಸಿಲ್ಲ.
ನಟಿ ದೀಪಿಕಾ ಅವರ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಟ್ಟೀಟರ್ ಮೂಲಕ ಹಂಚಿಕೊಂಡಿದ್ದು, ದೀಪಿಕಾ ಅವರಿಗೆ ಏನಾಗಿದೆ? ಯಾಕಾಗಿ ಹೀಗೆ ಮಾಡಿದ್ದಾರೆ? ಎಂದು ಪ್ರೆಶ್ನೆಗಳನ್ನು ಕೇಳಲಾರಂಭಿಸಿದ್ದಾರೆ.
ಇದನ್ನೂ ಓದಿ:ಸಿಂಹದ ಮರಿಯನ್ನು ದತ್ತುಪಡೆದ ವಸಿಷ್ಠ ಸಿಂಹ
ಇನ್ನೂ ಕೆಲವರು ದೀಪಿಕಾ ಅವರು ಸಾಮಾಜಿಕ ಜಾಲತಾಣಗಳಿಂದ ಹೊರಗುಳಿಯಲು ನಿರ್ಧರಿಸಿದ್ದಾರೆಯೇ ? ಅಥವಾ ಇದು ಪ್ರಚಾರ ಗಿಟ್ಟಿಸಿಕೊಳ್ಳುವ ಮಾರ್ಗವಾಗಿರಬಹುದೇ ? ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ನಡುವೆ ಕೆಲ ಅಭಿಮಾನಿಗಳು ದಯವಿಟ್ಟು ಮತ್ತೆ ಸಾಮಾಜಿಕ ಜಾಲತಾಣಕ್ಕೆ ಹಿಂದಿರುಗಿ ಎಂದು ದೀಪಿಕಾ ಅವರಲ್ಲಿ ಮನವಿ ಮಾಡಿದ್ದಾರೆ.
ಏತನ್ಮಧ್ಯೆ ದೀಪಿಕಾ ಪಡುಕೋಣೆಯವರ ಇನ್ ಸ್ಟಾಗ್ರಾಂ, ಟ್ವಿಟ್ಟರ್ ಖಾತೆಯಲ್ಲಿನ ಪೋಸ್ಟ್ ಗಳು ಡಿಲೀಟ್ ಆಗಿರುವುದಕ್ಕೆ ಹ್ಯಾಕರ್ ಗಳು ಕಾರಣವಾಗಿರಬಹುದೇ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಎಲ್ಲಾ ಸುದ್ದಿಗಳ ಹೊರತಾಗಿ ಸದ್ಯ ನಟಿ ದೀಪಿಕಾ, ಪತಿ ರಣವೀರ್ ಜೊತೆ ರಣತಂಬೋರ್ ನಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.