Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Team Udayavani, Apr 17, 2024, 11:08 AM IST
ಮುಂಬಯಿ: ಬಾಲಿವುಡ್ ನಟಿ ಮಲೈಕಾ ಆರೋರಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಮಲೈಕಾ ಅವರ ಮಗ ಕಾರ್ಯಕ್ರಮವೊಂದರಲ್ಲಿ ಅವರ ಬಳಿ ಕೇಳಿದ ಪ್ರಶ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರ ಪುತ್ರ ಅರ್ಹಾನ್ ಖಾನ್ ಚಾಟ್ ಶೋವೊಂದರಲ್ಲಿ ತಮ್ಮ ತಾಯಿಯ ಬಳಿ ಪ್ರಶ್ನೆಯೊಂದನ್ನು ಕೇಳಿ ಪೇಚಿಗೆ ಸಿಲುಕುವಂತೆ ಮಾಡಿದ್ದಾರೆ.
ಅರ್ಬಾಜ್ ಖಾನ್ ಹಾಗೂ ಮಲೈಕಾ 19 ವರ್ಷಗಳ ದಾಂಪತ್ಯ ಜೀವನಕ್ಕೆ 2017 ರಲ್ಲಿ ವಿಚ್ಛೇದನ ನೀಡಿದ್ದರು. ಈ ದಂಪತಿಗೆ ಅರ್ಹಾನ್ ಖಾನ್ ಎನ್ನುವ ಮಗನಿದ್ದಾನೆ. ಪರಸ್ಪರ ದೂರವಾದರೂ ಆಗಾಗ ತನ್ನ ಮಗನ ಜೊತೆಯಲ್ಲಿ ಮಲೈಕಾ ಹಾಗೂ ಅರ್ಬಾಜ್ ಕಾಣಿಸಿಕೊಳ್ಳುತ್ತಾರೆ.
ಮಲೈಕಾ ತನ್ನಗಿಂತ ಕಿರಿಯನಾಗಿರುವ ಅರ್ಜುನ್ ಕಪೂರ್ ಜೊತೆ ಡೇಟ್ ನಲ್ಲಿದ್ದಾರೆ. ಇವರಿಬ್ಬರ ಡೇಟಿಂಗ್ ವಿಚಾರ ಮದುವೆಯ ಹಂತದವರೆಗೂ ಬಂದಿದೆ. ಆಗಾಗ ಮದುವೆ ವಿಚಾರ ಪ್ರಸ್ತಾಪಕ್ಕೆ ಬಂದಿದೆ. ಆದರೆ ಇಬ್ಬರು ಈ ಬಗ್ಗೆ ಅಷ್ಟಾಗಿ ಯೋಚನೆ ಮಾಡಿಲ್ಲ.
ಇನ್ನು ಅರ್ಬಾಜ್ ಖಾನ್ ಇತ್ತೀಚೆಗೆ ಶುರಾ ಖಾನ್ ಅವರನ್ನು ವಿವಾಹವಾಗಿದ್ದಾರೆ.
ಅರ್ಹಾನ್ ಖಾನ್ ನಡೆಸಿಕೊಡುವ ಚಾಟ್ ಶೋ ‘ಧಮ್ ಬಿರಿಯಾನಿ’ ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮಲೈಕಾ ಅವರು ಭಾಗಿಯಾಗಿದ್ದಾರೆ. ಈ ಚಾಟ್ ಶೋನಲ್ಲಿ ಮುಕ್ತವಾಗಿ ವೈಯಕ್ತಿಕ ವಿಚಾರದ ಬಗ್ಗೆಯೂ ಪ್ರಶ್ನೆಯನ್ನು ಕೇಳಲಾಗಿದೆ.
ಅರ್ಹಾನ್ ಖಾನ್ ತನ್ನ ತಾಯಿಯ ಬಳಿ, “ನೀವು ಯಾವಾಗ ಮದುವೆ ಆಗಲಿದ್ದೀರಿ ಹೇಳಿ” ಎಂದು ಪ್ರಶ್ನಿಸಿದ್ದಾರೆ. ಅದಕ್ಕೆ ಮಲೈಕಾ ತನ್ನ ಮಗನ ಬಳಿಯೇ “ನೀವು ನಿನ್ನ ವರ್ಜಿನಿಟಿ(ಕನ್ಯತ್ವ) ಯಾವಾಗ ಕಳೆದುಕೊಂಡಿದ್ದೀಯಾ?” ಎಂದು ಕೇಳಿದ್ದಾರೆ ಇದಕ್ಕೆ ಅರ್ಹಾನ್ ಏನನ್ನು ಉತ್ತರಿಸದೇ ಸುಮ್ಮನೇ ಕೂತಿದ್ದಾರೆ.
ಸದ್ಯ ಈ ಕಾರ್ಯಕ್ರಮದ ಟೀಸರ್ ಮಾತ್ರ ರಿಲೀಸ್ ಮಾಡಲಾಗಿದ್ದು, ಪೂರ್ತಿ ಕಾರ್ಯಕ್ರಮ ಬುಧವಾರ(ಏ.17 ರಂದು) ರಾತ್ರಿ 8 ಗಂಟೆಗೆ ಪ್ರಸಾರವಾಗಲಿದೆ. ʼಧಮ್ ಬಿರಿಯಾನಿʼ ಯೂಟ್ಯೂಬ್ ನಲ್ಲಿ ಪ್ರಸಾರವಾಗಲಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.