Devil; ಕಲ್ಯಾಣ್ ರಾಮ್ ಚಿತ್ರಕ್ಕೆ ಮಾಳವಿಕಾ ನಾಯರ್ ನಾಯಕಿ
Team Udayavani, Oct 22, 2023, 3:14 PM IST
ನಟ ಕಲ್ಯಾಣ್ ರಾಮ್ ಸದಾ ಹೊಸ ಬಗೆಯ ಕಥೆಗಳನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ತಯಾರಾಗುತ್ತಿರುವ ಸಿನಿಮಾವೇ ಡೆವಿಲ್. ಈ ಚಿತ್ರದಲ್ಲಿ ನಂದಮೂರಿ ಕಲ್ಯಾಣ್ ರಾಮ್ ಗೂಢಚಾರಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದೀಗ ಡೆವಿಲ್ ಚಿತ್ರತಂಡ ಪವರ್ ಫುಲ್ ಪೊಲಿಟಿಕಲ್ ಲೇಡಿಯನ್ನು ಪರಿಚಯಿಸಿದೆ.
ಡೆವಿಲ್ ಸಿನಿಮಾ ಅಂಗಳಕ್ಕೆ ಮಾಳವಿಕಾ ನಾಯರ್ ಎಂಟ್ರಿ ಕೊಟ್ಟಿದ್ದಾರೆ. ಮಣಿಮೇಕಲಾ ಎಂಬ ಪ್ರಬಲ ರಾಜಕಾರಣಿ ಪಾತ್ರದಲ್ಲಿ ಅವರು ನಟಿಸುತ್ತಿದ್ದಾರೆ. ರಾಜಕಾರಣಿಯಂತೆ ಬಿಳಿ ಬಣ್ಣದ ಕಾಟನ್ ಸೀರೆ ತೊಟ್ಟು ಭಾಷಣ ಮಾಡುತ್ತಿರುವ ಮಾಳವಿಕಾ ನಾಯರ್ ಫಸ್ಟ್ ಲುಕ್ ನಲ್ಲಿ ಶಾಂತಿಯ ಸಂಕೇತವಾದ ಪಾರಿವಾಳವೂ ಇದೆ.
ಡೆವಿಲ್ ಸಿನಿಮಾವನ್ನು ದೇವಾಂಶ್ ನಾಮಾ ಅರ್ಪಿಸುತ್ತಿದ್ದು, ಅಭಿಷೇಕ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅಭಿಷೇಕ್ ನಾಮಾ ನಿರ್ಮಿಸುತ್ತಿದ್ದಾರೆ. ನವೀನ್ ಮೇಡಾರಂ ನಿರ್ದೇಶನದ ಡೆವಿಲ್ ಚಿತ್ರಕ್ಕೆ ಶ್ರೀಕಾಂತ್ ವಿಸ್ಸಾ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.
#MalvikaNair first look From #Devil – The British secret Agent.#DevilonNov24th pic.twitter.com/xx9LTpNOhm
— Nandamuri Universe 🦁 (@SriNtr9) October 15, 2023
ಹರ್ಷವರ್ಧನ್ ರಾಮೇಶ್ವರ್ ಈ ಚಿತ್ರಕ್ಕೆ ಸಂಗೀತ, ಸೌಂದರ್ಯ ರಾಜನ್ ಛಾಯಾಗ್ರಹಣ ಮಾಡಲಿದ್ದಾರೆ. ತೆಲುಗು, ಹಿಂದಿ, ತಮಿಳು ಮತ್ತು ಕನ್ನಡ ಭಾಷೆಗಳಲ್ಲಿ ಡೆವಿಲ್ ಸಿನಿಮಾ ತಯಾರಾಗುತ್ತಿದ್ದು, ನವೆಂಬರ್ 24ರಂದು ವಿಶ್ವಾದ್ಯಂತ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.