Kundara Johny: ಹೃದಯಾಘಾತದಿಂದ ಮಲಯಾಳಂ ನಟ ಕುಂದರ ಜಾನಿ ನಿಧನ


Team Udayavani, Oct 18, 2023, 9:36 AM IST

Kundara Johny: ಹೃದಯಾಘಾತದಿಂದ ಮಲಯಾಳಂ ನಟ ಕುಂದರ ಜಾನಿ ನಿಧನ

ಕೊಲ್ಲಂ: ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕನಾಗಿ ಮಿಂಚಿದ್ದ ನಟ ಕುಂದರ ಜಾನಿ (71) ವಿಧಿವಶರಾಗಿದ್ದಾರೆ.

ಮಂಗಳವಾರ ರಾತ್ರಿ ಎಂಟು ಗಂಟೆ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಕೊಲ್ಲಂ ಚಿನ್ನಕಡ ಎಂಬಲ್ಲಿ ಅಸ್ವಸ್ಥರಾಗಿದ್ದು ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಇಂದು(ಬುಧವಾರ) ಬೆಳಗ್ಗೆ 9.30ರ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲ ಮಾಹಿತಿ ನೀಡಿದ್ದಾರೆ.

ಜಾನಿ ಅವರು 1979 ರಲ್ಲಿ ತಮ್ಮ 23 ನೇ ವಯಸ್ಸಿನಲ್ಲಿ ನಿತ್ಯ ವಸಂತಂ ಚಿತ್ರದ ಮೂಲಕ ರಂಗ ಪ್ರವೇಶಿಸಿದರು.  ಮೀನ್, ಪರಂಗಿಮಾಲ, ಕರಿಂಬನ, ಗಾಡ್ ಫಾದರ್, ಕಿರ್ಯಾತಂ, ರಾಜದಂಡ, ನಾಟೋಟಿಕಾಟ್, ದಾದಾಸಾಹಿಬ್, ಭರತಚಂದ್ರನ್ ಐಪಿಎಸ್, ಕುಟ್ಟಿಸ್ರಾಂಕ್ ಮತ್ತು ಒರು ವಡ್ಕನ್ ವೀರಗಾಥ ಮುಂತಾದ ಚಿತ್ರಗಳಲ್ಲಿನ ಅವರ ಪಾತ್ರಗಳು ಗಮನಸೆಳೆದಿತ್ತು. ಜಾನಿ ಅವರು ಕೊನೆಯದಾಗಿ 2022 ರಲ್ಲಿ ಮೆಪ್ಪಾಡಿಯನ್ ಚಿತ್ರದಲ್ಲಿ ನಟಿಸಿದರು.

44 ವರ್ಷಗಳ ಚಿತ್ರರಂಗದ ಅವಧಿಯಲ್ಲಿ ಜಾನಿ ಅವರು ಸುಮಾರು 500 ಚಿತ್ರಗಳಲ್ಲಿ ನಟಿಸಿದ್ದಾರೆ. ಅವರು ತಮಿಳು, ತೆಲುಗು ಮತ್ತು ಕನ್ನಡ ಚಲನಚಿತ್ರಗಳು ಸೇರಿದಂತೆ ದೂರದರ್ಶನ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ.

ಕಾಟಪ್ಪಕದ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಬುಧವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 12ರವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ಬಳಿಕ ಕುಂದರದಲ್ಲಿರುವ ಅವರ ಮನೆಗೆ ಕರೆದೊಯ್ಯಲಾಗುತ್ತದೆ. ಅಂತ್ಯಕ್ರಿಯೆ ಗುರುವಾರ ಕಾಂಜಿರೋಡ್‌ನ ಸಂತ ಅಂತೋನಿ ಚರ್ಚ್ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ನಟನ ಅಗಲಿಕೆಗೆ ಚಿತ್ರರಂಗ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಎರಡು ವಾರದ ಹಿಂದೆ ಸಹೋದರ ನಿಧನ:
ಕುಂದರ ಜಾನಿ ಅವರ ಸಹೋದರ ಅಲೆಕ್ಸ್ ಎರಡು ವಾರಗಳ ಹಿಂದೆಯಷ್ಟೇ ನಿಧನರಾಗಿದ್ದರು ಇದರ ನೋವಲ್ಲೇ ಇದ್ದ ಮನೆಮಂದಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.

ಇದನ್ನೂ ಓದಿ: Airstrike: ಗಾಜಾ ಆಸ್ಪತ್ರೆಯ ಮೇಲೆ ವೈಮಾನಿಕ ದಾಳಿ… ಕನಿಷ್ಠ 500 ಮಂದಿ ಮೃತ್ಯು

ಟಾಪ್ ನ್ಯೂಸ್

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!

Sathish-jarakhoili

Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

1-allu

Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-CT

C.T.Ravi; ನನ್ನ ಬಂಧನ ನ್ಯಾಯಾಂಗ ತನಿಖೆಯಾಗಲಿ…ಈಗಲೂ ಜೀವ ಬೆದರಿಕೆ ಇದೆ

Pro Kabaddi: ಪಾಟ್ನಾ-ಗುಜರಾತ್‌ ಟೈ

Pro Kabaddi: ಪಾಟ್ನಾ-ಗುಜರಾತ್‌ ಟೈ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ

G.parameshwar

C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್‌

death

Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.