Producer: ಲೈಂಗಿಕ ಕಿರುಕುಳ ಆರೋಪ; ಖ್ಯಾತ ಧಾರಾವಾಹಿ ನಿರ್ಮಾಪಕನ ವಿರುದ್ಧ ದೂರು ನೀಡಿದ ನಟಿ
Team Udayavani, Jun 20, 2023, 9:21 AM IST
ಮುಂಬಯಿ: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ಮನರಂಜನಾ ಧಾರಾವಾಹಿಗಳಲ್ಲಿ ಒಂದಾಗಿರುವ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಕಾರ್ಯಕ್ರಮದ ನಿರ್ಮಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ದೂರು ದಾಖಲಾಗಿದೆ.
ಕಳೆದ 15 ವರ್ಷಗಳಿಂದ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿಯಲ್ಲಿ ಕೆಲಸ ಮಾಡುತ್ತಿದ್ದ ನಟಿಯೊಬ್ಬರು ಇತ್ತೀಚೆಗೆ ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪವನ್ನು ಮಾಡಿದ್ದರು. ಇದೀಗ ಅದೇ ನಟಿ ಪೊವಾಯಿ ಪೊಲೀಸ್ ಠಾಣೆಯಲ್ಲಿ ನಿರ್ಮಾಪಕ ಸೇರಿ ಮೂವರ ವಿರುದ್ಧ ಲಿಖಿತ ದೂರನ್ನು ನೀಡಿದ್ದಾರೆ.
ಇದನ್ನೂ ಓದಿ: Tollywood;ಮೆಗಾ ಕುಟುಂಬದಲ್ಲಿ ಸಂತಸ; ಹೆಣ್ಣು ಮಗುವಿಗೆ ಜನ್ಮ ನೀಡಿದ ಉಪಾಸನಾ
ತನಗೆ ʼತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾʼ ಧಾರಾವಾಹಿಯ ನಿರ್ಮಾಪಕ ಅಸಿತ್ ಕುಮಾರ್ ಮೋದಿ ಅವರು ಮಾನಸಿಕ ಮತ್ತು ಲೈಂಗಿಕ ಕಿರುಕುಳ ನೀಡಿದ್ದಾರೆ ಆರೋಪವನ್ನು ಮಾಡಿ ಪೊಲೀಸರಿಗೆ ಲಿಖಿತವಾಗಿ ದೂರನ್ನು ನೀಡಿದ್ದಾರೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳದ ಆರೋಪ ಮಾಡಿ ಪ್ರಾಜೆಕ್ಟ್ ಹೆಡ್ ಸೊಹೈಲ್ ರಮಣಿ ಮತ್ತು ಕಾರ್ಯಕಾರಿ ನಿರ್ಮಾಪಕ ಜತಿನ್ ಬಜಾಜ್ ವಿರುದ್ಧವೂ ದೂರನ್ನು ನೀಡಿದ್ದಾರೆ.
ಸದ್ಯ ಪೊಲೀಸರು ನಟಿಯ ದೂರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354 ಮತ್ತು 509 (ಮಹಿಳೆಯೊಬ್ಬಳ ಮೇಲಿನ ದೌರ್ಜನ್ಯ ಅಥವಾ ಕ್ರಿಮಿನಲ್ ಬಲ) ಅಡಿಯಲ್ಲಿ ಪೊವಾಯಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದುವರೆಗೆ ನಿರ್ಮಾಪಕನ ಬಂಧನವಾಗಿಲ್ಲ ಎಂದು ವರದಿ ತಿಳಿಸಿದೆ.
Mumbai, Maharashtra | Powai Police has registered a case against Taarak Mehta Ka Ooltah Chashmah producer Asit Modi, operation head Sohail Ramani, and executive producer Jatin Bajaj under sections 354 and 509 of the IPC based on a complaint by an actor of the show. No arrests…
— ANI (@ANI) June 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.