Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Team Udayavani, Nov 27, 2024, 3:00 PM IST
ಮುಂಬಯಿ: ಭೀಕರ ಕಾರು ಅಪಘಾತದಲ್ಲಿ ಖ್ಯಾತ ನಿರ್ದೇಶಕರ ಪುತ್ರ ಸಹಿತ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿರುವುದು ವರದಿಯಾಗಿದೆ.
ʼಅತಿಥಿ ತುಮ್ ಕಬ್ ಜಾವೋಗೆʼ ಮತ್ತು ʼಸನ್ ಆಫ್ ಸರ್ದಾರ್ʼ ಚಿತ್ರಗಳಿಗೆ ನಿರ್ದೇಶನ ಮಾಡಿರುವ ಅಶ್ವಿನಿ ಧೀರ್ (Ashwini Dhir) ಅವರ ಪುತ್ರ ಜಲಜ್ ಧೀರ್ (18) ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನ.23 ರ ಮುಂಜಾನೆ 3:30 ರ ವೇಳೆಗೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಘಟನೆ ನಡೆದದ್ದು ಹೇಗೆ?:
ಜಲಜ್ ತನ್ನ ಮೂವರು ಸ್ನೇಹಿತರೊಂದಿಗೆ ತಡರಾತ್ರಿ ಬಾಂದ್ರಾದಿಂದ ಗೋರೆಗಾಂವ್‌ಗೆ ಹೊರಟಿದ್ದರು. ಇವರಲ್ಲಿ18 ವರ್ಷದ ಸಾಹಿಲ್ ಮೆಂಧಾ ಕಾರು ಚಾಲನೆ ಮಾಡಿದ್ದು, ಆತ ಈ ಸಂದರ್ಭದಲ್ಲಿ ಮದ್ಯದ ಅಮಲಿನಲ್ಲಿದ್ದ ಎನ್ನಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದಾಗ ಸಹಾರಾ ಸ್ಟಾರ್ ಹೋಟೆಲ್ ಬಳಿ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಜಲಜ್, ಸಾರ್ಥ್ ಕೌಶಿಕ್ (18) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಾರಿನಲ್ಲಿದ್ದ ನಾಲ್ಕನೇ ಸ್ನೇಹಿತ ಜೆಡಾನ್ ಜಿಮ್ಮಿ (18) ಅವರು ನೀಡಿದ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಮೆಂಧಾ ಅವರನ್ನು ಬಂಧಿಸಿದ್ದಾರೆ. ಅವರ ರಕ್ತದ ಮಾದರಿಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.
ಮದ್ಯದ ಅಮಲಿನಲ್ಲಿ ವೇಗವಾಗಿ ವಾಹನ ಚಲಾಯಿಸಿಕೊಂಡು ಹೋದದ್ದೇ ಘಟನೆಗೆ ಕಾರಣವೆಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
Mumbai: ಬ್ರೇಕಪ್ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.