ʼದಸರಾʼ ಓಟಿಟಿ ಎಂಟ್ರಿಗೆ ಡೇಟ್ ಫಿಕ್ಸ್: ʼಧರಣಿʼ ನೋಡಲು ಫ್ಯಾನ್ಸ್ ವೇಟಿಂಗ್
Team Udayavani, Apr 21, 2023, 1:21 PM IST
ಹೈದರಾಬಾದ್: ಟಾಲಿವುಡ್ ಸ್ಟಾರ್ ನಾನಿ ಅಭಿನಯದ ʼ ದಸರಾʼ ಸಿನಿಮಾ ಥಿಯೇಟರ್ ನಲ್ಲಿ ಬಿಗ್ ಹಿಟ್ ಬಳಿಕ ಇದೀಗ ಓಟಿಟಿ ರಿಲೀಸ್ ಗೆ ರೆಡಿಯಾಗಿದೆ.
ಮಾ. 30 ರಂದು ತೆರೆಗೆ ಬಂದ ನ್ಯಾಚುರಲ್ ಸ್ಟಾರ್ ನಾನಿ ಮಾಸ್ ಅವತಾರದಲ್ಲಿ ಕಾಣಿಸಿಕೊಂಡ ʼದಸರಾʼ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಮಾಯಿ ಮಾಡಿತ್ತು. 2019 ರಲ್ಲಿ ಅವರ ʼಜೆರ್ಸಿʼ ಸಿನಿಮಾದ ಬಳಿಕ ಅತೀ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾವಾಗಿ ದಸರಾ ಹೊರಹೊಮ್ಮಿದೆ. 100 ಕೋಟಿಗೂ ಅಧಿಕ ಗಳಿಕೆಯನ್ನು ಚಿತ್ರ ಪಡೆದುಕೊಂಡಿದೆ.
ನಾನಿ ಅವರ ʼ ಶ್ಯಾಮ್ ಸಿಂಗ ರಾಯ್ʼ ‘ಅಂಟೇ ಸುಂದರಾನಿಕಿ’ ಸಿನಿಮಾಗಳು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ʼದಸರಾʼ ಮೂಲಕ ನಾನಿ ಮತ್ತೆ ವಿನ್ನಿಂಗ್ ಟ್ರ್ಯಾಕ್ ಗೆ ಮರಳಿದ್ದಾರೆ.
ಇದನ್ನೂ ಓದಿ: ಅಕ್ಕಿ ನಮ್ಮದು ಎಂದಿರಿ, ಯಾಕೆ ಕಡಿಮೆ ಕೊಡುತ್ತೀರಿ.. : ವರುಣದಲ್ಲಿ ಪ್ರತಾಪ್ ಸಿಂಹಗೆ ತರಾಟೆ
ಶ್ರೀಕಾಂತ್ ಒಡೆಲಾ ನಿರ್ದೇಶನದ ಸಿನಿಮಾದಲ್ಲಿ ನಾನಿ ʼಧರಣಿʼ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ನಟಿ ಕೀರ್ತಿ ಸುರೇಶ್ ನಾಯಕಿಯಾಗಿ ನಟಿಸಿದ್ದಾರೆ.
ಸಿನಿಮಾದಲ್ಲಿನ ನಾನಿ ಅವರ ನಟನೆಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ಸಿನಿಮಾ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಂಡ ಬಳಿಕ ನೆಟ್ ಫ್ಲಿಕ್ಸ್ ನಲ್ಲಿ ಇದೇ ಏ.27 ರಂದು ಸ್ಟ್ರೀಮಿಂಗ್ ಆಗಲಿದೆ ಎಂದು ಚಿತ್ರತಂಡ ಅನೌನ್ಸ್ ಮಾಡಿದೆ.
ದೀಕ್ಷಿತ್ ಶೆಟ್ಟಿ, ಶೈನ್ ಟಾಮ್ ಚಾಕೋ, ಸಮುದ್ರಕನಿ, ಸಾಯಿ ಕುಮಾರ್ ಮತ್ತು ಪೂರ್ಣ ಮುಂತಾದ ಕಲಾವಿದರು ಸಿನಿಮಾದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
Pro Kabaddi League-11: ಇಂದು ಎಲಿಮಿನೇಟರ್ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ
ICC : 904 ರೇಟಿಂಗ್ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್ ಬುಮ್ರಾ
Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್ ಎದುರಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.