ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಅಕ್ಷಯ್ ಕುಮಾರ್ ನಟನೆ?
Team Udayavani, Jun 21, 2017, 4:03 PM IST
ನವದೆಹಲಿ: ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ, ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಸಿನಿಮಾ ಸೆಟ್ಟಲೇರಲಿದೆಯೇ? ಸದ್ಯದ ಊಹಾಪೋಹದ ಸುದ್ದಿಯ ಪ್ರಕಾರ ನರೇಂದ್ರ ಮೋದಿ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳುವುದೇ ಹೆಚ್ಚು ಸೂಕ್ತ ಎಂದು ಹರಿದಾಡುತ್ತಿದೆ. ಈ ಹಿಂದೆ ನಟ ಪರೇಶ್ ರಾವಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು.
ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಸಿನಿಮಾದಲ್ಲಿ ಪ್ರಧಾನಿ ಅವರ ಪಾತ್ರವನ್ನು ಅಕ್ಷಯ್ ಕುಮಾರ್ ಅವರು ಮಾಡಬೇಕೆಂದು ನಿರ್ಮಾಪಕರು ಬೇಡಿಕೆ ಇಟ್ಟಿರುವುದಾಗಿ ವರದಿ ಹೇಳಿದೆ. ಮೋದಿ ಜೀವನದ ಬಗ್ಗೆ ಸಿನೆಮಾ ನಿರ್ಮಾಣ ಇನ್ನೂ ವಿಚಾರದ ಹಂತದಲ್ಲಿದ್ದು, ನಾಯಕ ನಟನ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಪರೇಶ್ ರಾವಲ್ ಹಾಗೂ ಅನುಪಮ್ ಖೇರ್ ಅವರಿಗಿಂತ ಹೆಚ್ಚಾಗಿ ಅಕ್ಷಯ್ ಕುಮಾರ್ ಉತ್ತಮ ಆಯ್ಕೆ ಎಂಬ ಮಾತು ಕೇಳಿಬಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ನಿರ್ವಹಿಸಲು ಅಕ್ಷಯ್ ಕುಮಾರ್ ಸರಿಯಾದ ಆಯ್ಕೆ ಎಂಬುದು ನಟ, ಬಿಜೆಪಿ ಮುಖಂಡ ಶತ್ರುಘ್ನ ಸಿನ್ನಾ ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅಕ್ಷಯ್ ಕುಮಾರ್ ಮಿಸ್ಟರ್ ಕ್ಲೀನ್ ಆಫ್ ಇಂಡಿಯಾ, ಈ ಹಿನ್ನೆಲೆಯಲ್ಲಿ ನೂತನ ಶೈನಿಂಗ್ ಇಂಡಿಯಾದಲ್ಲಿ ಅಕ್ಷಯ್ ವ್ಯಕ್ತಿತ್ವ ಮತ್ತಷ್ಟು ಎತ್ತರಕ್ಕೆ ಏರಲಿದೆ ಎಂದು ತಿಳಿಸಿದ್ದಾರೆ.
ಸೆನ್ಸಾರ್ ಮಂಡಳಿ ಮುಖ್ಯಸ್ಥ ಫಹಲಾಜ್ ನಿಹಲಾನಿ ಕೂಡಾ, ಪ್ರಧಾನಿ ಮೋದಿ ಅವರ ಪಾತ್ರ ಮಾಡಲು ಅಕ್ಷಯ್ ಗಿಂತ ಉತ್ತಮವಾದ ಆಯ್ಕೆ ಇಲ್ಲ ಎಂದು ಹೇಳಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ಟಾಯ್ಲೆಟ್, ಏಕ್ ಪ್ರೇಮ್ ಕಥಾ ಸಿನಿಮಾ ಆಗಸ್ಟ್ 11ರಂದು ಬಿಡುಗಡೆಗೆ ಸಿದ್ಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.