ಅವಳಿ ಗಂಡು ಮಕ್ಕಳಿಗೆ ತಂದೆ – ತಾಯಿಯಾದ ನಟಿ ನಯನತಾರಾ – ವಿಘ್ನೇಶ್ ದಂಪತಿ
Team Udayavani, Oct 9, 2022, 7:12 PM IST
ಚೆನ್ನೈ: ಇದೇ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ – ವಿಘ್ನೇಶ್ ದಂಪತಿ ಅವಳಿ ಮಕ್ಕಳಿಗೆ ತಂದೆ -ತಾಯಿಯಾಗಿದ್ದಾರೆ.
ಬಾಡಿಗೆ ತಾಯ್ತನದಿಂದ ಇಬ್ಬರು ಪೋಷಕರಾಗಿದ್ದು, ಈ ಸಂತಸವನ್ನು ಸ್ವತಃ ವಿಘ್ನೇಶ್ ಶಿವನ್ ಅವರೇ ಹಂಚಿಕೊಂಡಿದ್ದಾರೆ.
ಈ ವರ್ಷದ ಜೂ.9 ರಂದು ನಟಿ ನಯನತಾರಾ ನಿರ್ದೇಶಕ ವಿಘ್ನೇಶ್ ಶಿವನ್ ತಮ್ಮ 7 ವರ್ಷದ ಪ್ರೇಮಕ್ಕೆ ಮದುವೆಯ ಮುದ್ರೆ ಒತ್ತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮಹಾಬಲಿಪುರಂನ ಐಷಾರಾಮಿ ರೆಸಾರ್ಟ್‌ನ ಗಾಜಿನ ಮಂಟಪದಲ್ಲಿ ಗಣ್ಯರ ಸಮ್ಮುಖದಲ್ಲಿ ಇಬ್ಬರು ಮದುವೆಯಾಗಿದ್ದರು.
ಇತ್ತೀಚಿಗೆ ಬ್ಯಾಂಕಾಕ್ ನಲ್ಲಿ ಜೋಡಿಯ ಹನಿಮೂನ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈಗ ಇಬ್ಬರು ತಂದೆ-ತಾಯಿಯಾದ ಖುಷಿಯನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ವಿಘ್ನೇಶ್ ಶಿವನ್ ನಾನು ಮತ್ತು ನಯನ್ (ನಯನತಾರಾ) ಅವಳಿ ಗಂಡು ಮಕ್ಕಳಿಗೆ ಅಪ್ಪ- ಅಮ್ಮ ಆಗಿದ್ದೇವೆ ಎಂದು ಹೇಳಿ ಉಯಿರ್ (ಬದುಕು) , ಉಲಗಂ ( ಜಗತ್ತು) ಎಂದು ನಾಮಕರಣ ಮಾಡಿ, ಪಾದಗಳನ್ನು ಚುಂಬಿಸುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಯನತಾರಾ ಬಾಲಿವುಡ್ ನಲ್ಲಿ ʼಜವಾನ್ʼ ಚಿತ್ರದಲ್ಲಿ ಶಾರುಖ್ ಜೊತೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ಮುಂದಿನ ವರ್ಷ ರಿಲೀಸ್ ಆಗಲಿದೆ.
Nayan & Me have become Amma & Appa❤️
We are blessed with
twin baby Boys❤️❤️
All Our prayers,our ancestors’ blessings combined wit all the good manifestations made, have come 2gethr in the form Of 2 blessed babies for us❤️?
Need all ur blessings for our
Uyir?❤️& Ulagam?❤️ pic.twitter.com/G3NWvVTwo9— Vignesh Shivan (@VigneshShivN) October 9, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.