ನಯನಾತಾರಾ-ವಿಘ್ನೇಶ್ ದಂಪತಿಗೆ ಕ್ಲೀನ್ ಚಿಟ್
Team Udayavani, Oct 28, 2022, 6:45 AM IST
ಚೆನ್ನೈ: ನಟಿ ನಯನಾತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ದಂಪತಿ ಮಕ್ಕಳನ್ನು ಪಡೆಯುವ ನಿಟ್ಟಿನಲ್ಲಿ ಬಾಡಿಗೆ ತಾಯ್ತನಕ್ಕೆ ಸಂಬಂಧಿಸಿದ ಯಾವುದೇ ಕಾನೂನನ್ನು ಉಲ್ಲಂಘಿಸಿಲ್ಲ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ.
ಬಾಡಿಗೆ ತಾಯ್ತನದ ವಿಚಾರಕ್ಕೆ ಸಂಬಂಧಿಸಿದಂತೆ ನಯನತಾರಾ ದಂಪತಿ ವಿರುದ್ಧ ನಿಯಮ ಉಲ್ಲಂಘನೆಯ ಆರೋಪ ಕೇಳಿಬಂದಿತ್ತು. ಕಾನೂನಿನ ಪ್ರಕಾರವೇ ಈ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಕ್ಕಳು ಪಡೆದಿದ್ದಾರೆ. ಅವರು ಚಿಕಿತ್ಸೆ ಪಡೆದಿದ್ದ ಆಸ್ಪತ್ರೆಯೇ ಈ ನಿಟ್ಟಿನಲ್ಲಿ ದೋಷಿ ಎಂದು ತಮಿಳುನಾಡು ಸರ್ಕಾರದ ಮೂವರು ಸದಸ್ಯರ ಸಮಿತಿ ಪ್ರತಿಪಾದಿಸಿದೆ.
ಅ.9ರಂದು ತಾವು ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡು ಮಕ್ಕಳಾದ ಉಯಿರ್ ಮತ್ತು ಉಲಘಂ ಗೆ ತಂದೆ-ತಾಯಿ ಆಗಿರುವುದಾಗಿ ನಯನತಾರಾ-ವಿಘ್ನೇಶ್ ದಂಪತಿ ಘೋಷಿಸಿದ್ದರು. ನಂತರ ತಾವು ಆರು ವರ್ಷಗಳ ಮೊದಲೇ ಕಾನೂನಿನ ಪ್ರಕಾರ ಮದುವೆಯಾಗಿದ್ದಾಗಿ ದಂಪತಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.