6 ವರ್ಷಗಳ ಹಿಂದೆಯೇ ನಟಿ ನಯನತಾರಾ-ವಿಘ್ನೇಶ್ ಮದುವೆ!
Team Udayavani, Oct 17, 2022, 7:15 AM IST
ಚೆನ್ನೈ: ದಕ್ಷಿಣ ಭಾರತದ ನಟಿ ನಯನತಾರಾ ತಮ್ಮ ಪ್ರಿಯತಮ ವಿಘ್ನೇಶ್ರೊಂದಿಗೆ ಮದುವೆಯಾಗಿ ನಾಲ್ಕೇ ತಿಂಗಳಿಗೆ ಅವಳಿ ಮಕ್ಕಳಿಗೆ ತಾಯಿಯಾಗಿರುವ ವಿಚಾರ ಎಲ್ಲೆಡೆ ಭಾರೀ ಸದ್ದು ಮಾಡಿತ್ತು.
ಬಾಡಿಗೆ ತಾಯಿ ಮೂಲಕ ಮಗು ಪಡೆಯುವುದಕ್ಕೆ ಭಾರತದಲ್ಲಿ ನಿರ್ಬಂಧವಿರುವಾಗ ಈ ಜೋಡಿ ನಿಯಮ ಉಲ್ಲಂಘಿಸಿ ಮಕ್ಕಳನ್ನು ಪಡೆದರೇ ಎನ್ನುವ ಬಗ್ಗೆ ವಿಚಾರಣೆ ಮಾಡುವುದಾಗಿ ತಮಿಳುನಾಡು ಆರೋಗ್ಯ ಸಚಿವರೂ ಹೇಳಿದ್ದರು.
ಆದರೆ ಈ ಬಗ್ಗೆ ಇದೀಗ ದಂಪತಿ ತಮಿಳುನಾಡು ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದ್ದು, ಅದರಲ್ಲಿ ತಾವು ಆರು ವರ್ಷಗಳ ಹಿಂದೆಯೇ ಕಾನೂನಾತ್ಮಕವಾಗಿ ಮದುವೆಯಾಗಿರುವ ವಿಚಾರವನ್ನು ಬಿಚ್ಚಿಟ್ಟಿದ್ದಾರೆ.
ವಿವಾಹವಾಗಿ 5 ವರ್ಷಗಳ ನಂತರ ಬಾಡಿಗೆ ತಾಯಿ ಮೂಲಕ ಮಕ್ಕಳನ್ನು ಪಡೆಯಲು ಅವಕಾಶವಿದೆಯಾದ್ದರಿಂದ ನಾವು ನಿಯಮ ಉಲ್ಲಂಘನೆ ಮಾಡಿಲ್ಲ ಎಂದು ದಂಪತಿ ಸ್ಪಷ್ಟೀಕರಣ ಕೊಟ್ಟಿದ್ದಾರೆ.
ನಯನತಾರಾ ಅವರ ಅತ್ಯಂತ ಆಪ್ತರೇ ಮಕ್ಕಳನ್ನು ಹೆತ್ತು ಕೊಟ್ಟಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿಯೇ ಈ ಹೆರಿಗೆಯಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.