ಸುಶಾಂತ್ ಪ್ರಕರಣದಲ್ಲಿ ‘ನಶೆ’ ನಂಟು: ರಿಯಾ ಚಕ್ರವರ್ತಿ, ಶೋವಿಕ್ ನಿವಾಸಕ್ಕೆ NCB ರೈಡ್
Team Udayavani, Sep 4, 2020, 8:06 AM IST
ಮುಂಬೈ: ನಟ ಸುಶಾಂತ್ ಸಿಂಗ್ ಸಾವು ಪ್ರಕರಣದ ತನಿಖೆಯಲ್ಲಿ ಮಾದಕ ದ್ರವ್ಯ ಪೂರೈಕೆ ನಂಟು ಬೆಸೆದುಕೊಂಡಿರುವ ಕಾರಣ ಸುಶಾಂತ್ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್ ಚಕ್ರವರ್ತಿ ನಿವಾಸಕ್ಕೆ ಇಂದು ಮುಂಜಾನೆ ಮಾದಕ ದ್ರವ್ಯ ನಿಯಂತ್ರಣ ಘಟಕ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇಂದು ಮುಂಜಾನೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಇದೇ ವೇಳೆ ಮತ್ತೊಂದು ಎನ್ ಸಿಬಿ ತಂಡ ಸುಶಾಂತ್ ಸಿಂಗ್ ರಜಪೂತ್ ಹೌಸ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ಮನೆಗೂ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ನಟ ಸುಶಾಂತ್ ಸಿಂಗ್ ಸಾವು ಪ್ರಕರಣದಲ್ಲಿ ಆತನ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಪ್ರಮುಖ ಆರೋಪಿಯಾಗಿದ್ದಾರೆ. ಈಗಾಗಲೇ ಈ ಪ್ರಕರಣ ಸಿಬಿಐಗೆ ವರ್ಗಾವಣೆ ಆಗಿದೆ. ಹಣ ವರ್ಗಾವಣೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯವೂ ಪ್ರಕರಣದ ತನಿಖೆ ನಡೆಸುತ್ತಿದೆ. ಮಾದಕ ದ್ರವ್ಯ ಪೂರೈಕೆ ಮತ್ತು ಸೇವನೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಎನ್ ಸಿಬಿಯೂ ತನಿಖೆ ನಡೆಸುತ್ತಿದೆ.
ಇದನ್ನೂ ಓದಿ: ದಿಢೀರ್ ಶಾಕ್! ಬೆಳ್ಳಂಬೆಳಗ್ಗೆ ನಟಿ ರಾಗಿಣಿ ಮನೆ ಮೇಲೆ ಸಿಸಿಬಿ ಅಧಿಕಾರಿಗಳಿಂದ ದಾಳಿ
House search being conducted at Showik Chakraborty’s and Samuel Miranda’s residences as provided under NDPS Act: Narcotics Control Bureau (NCB) https://t.co/EpKDxZEkqK
— ANI (@ANI) September 4, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.