Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Team Udayavani, Oct 18, 2024, 9:00 AM IST
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೀವ ಬೆದರಿಕೆ ಬಂದಿದೆ. ಈ ವೇಳೆ ಮುಂಬೈ ಟ್ರಾಫಿಕ್ ಪೊಲೀಸರಿಗೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಸದಸ್ಯನೊಬ್ಬ ಸಂದೇಶ ಕಳುಹಿಸಿದ್ದು ಅದರಲ್ಲಿ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶವೊಂದು ಬಂದಿದ್ದು, ಲಾರೆನ್ಸ್ ಬಿಷ್ಣೋಯ್ ಅವರೊಂದಿಗಿನ ದೀರ್ಘಕಾಲದ ದ್ವೇಷವನ್ನು ಕೊನೆಗೊಳಿಸಲು ನಟ ಸಲ್ಮಾನ್ ಖಾನ್ ಅವರಿಂದ 5 ಕೋಟಿ ರೂ.ಗೆ ಬೇಡಿಕೆಯಿಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಲಾರೆನ್ಸ್ ಬಿಷ್ಣೋಯ್ ಹಾಗೂ ಸಲ್ಮಾನ್ ಖಾನ್ ನಡುವಿನ ವೈಷ್ಯಮ್ಯವನ್ನು ಶಮನ ಮಾಡಲು ನಾನು ಮುಂದಾಗಿದ್ದು ಅದಕ್ಕಾಗಿ ಐದು ಕೋಟಿ ನೀಡುವಂತೆ ಹೇಳಿದ್ದಾನೆ ಒಂದು ವೇಳೆ ಹಣ ನೀಡದೇ ಇದ್ದಲ್ಲಿ ಇತ್ತೀಚಿಗೆ ನಡೆದ ಬಾಬಾ ಸಿದ್ದಿಕಿ ಹತ್ಯೆಗಿಂತಲೂ ಸಲ್ಮಾನ್ ಖಾನ್ ಕೆಟ್ಟದಾಗಿ ಸಾವನ್ನಪ್ಪುತ್ತಾನೆ ನೆನಪಿರಲಿ ಎಂದು ಎಚ್ಚರಿಕೆ ಸಂದೇಶ ರವಾನಿಸಿದ್ದಾನೆ ಎನ್ನಲಾಗಿದೆ.
ಪೊಲೀಸರು ಹೈ ಅಲರ್ಟ್ :
ಟ್ರಾಫಿಕ್ ಪೊಲೀಸರ ವಾಟ್ಸ್‌ಆ್ಯಪ್ ನಂಬರ್ ಗೆ ಬಂದ ಬೆದರಿಕೆ ಸಂದೇಶದಲ್ಲಿ ನನ್ನ ಸಂದೇಶವನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಬರೆದುಕೊಂಡಿದ್ದಾನೆ. ಈ ಸಂದೇಶ ಬಂದ ಬಳಿಕ ಅಲರ್ಟ್ ಅದ ಪೊಲೀಸರು ಸಲ್ಮಾನ್ ಖಾನ್ ಮನೆಗೆ ಹೆಚ್ಚಿನ ಭದ್ರತೆ ಒದಗಿಸಿದ್ದು ಆರೋಪಿಗಳ ಪತ್ತೆಗೆ ತಂಡ ರಚಿಸಿದ್ದಾರೆ.
ನಿರಂತರ ಬೆದರಿಕೆ:
ದಸರಾ ಸಮಯದಲ್ಲಿ ಸಲ್ಮಾನ್ ಅವರ ಆಪ್ತ ಸ್ನೇಹಿತ ಮತ್ತು ಹಿರಿಯ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕಿ ಅವರನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಹೊಳ್ಳಲಾಗಿದ್ದು ಇದಾದ ಬಳಿಕ ಸಲ್ಮಾನ್ ಖಾನ್ ಅವರಿಗೆ ನಿರಂತರ ಬೆದರಿಕೆಗಳು ಬರುತ್ತಿವೆ ಎನ್ನಲಾಗಿದೆ. ಈ ಹತ್ಯೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ. ಇದೀಗ ಸಲ್ಮಾನ್ ಖಾನ್ ಗೆ ಈ ಬೆದರಿಕೆಯ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿದೆ.
#WATCH | Mumbai: Security heightened outside Salman Khan’s residence after the actor receives fresh threats. pic.twitter.com/Fkv29yqdDr
— ANI (@ANI) October 18, 2024
ಸಲ್ಮಾನ್ ಖಾನ್ ಗೆ Y+ ಭದ್ರತೆ:
ಬೆದರಿಕೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಸಲ್ಮಾನ್ ಖಾನ್ ಅವರಿಗೆ ಈಗ Y+ ಭದ್ರತೆ ನೀಡಲಾಗಿದೆ. ಇದಾದ ಬಳಿಕ ಅವರ ಭದ್ರತೆಗಾಗಿ ಸುಮಾರು 25 ಮಂದಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು ಇವುಗಳಲ್ಲಿ ಸುಮಾರು 2 ರಿಂದ 4 ಎನ್‌ಎಸ್‌ಜಿ ಕಮಾಂಡೋಗಳು ಮತ್ತು ಪೊಲೀಸ್ ಭದ್ರತಾ ಸಿಬ್ಬಂದಿ ಇರಲಿದ್ದಾರೆ ಇದಲ್ಲದೇ ಎರಡರಿಂದ ಮೂರು ವಾಹನಗಳು ಅವರ ಬೆಂಗಾವಲಾಗಿ ಇರಲಿದ್ದು, ಇದರಲ್ಲಿ ಬುಲೆಟ್ ಪ್ರೂಫ್ ವಾಹನವೂ ಇರುತ್ತದೆ.
ಇದನ್ನೂ ಓದಿ: Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.