ಪದ್ಮಾವತ್ ಚಿತ್ರಕ್ಕೆ ನಿಷೇಧ ಇಲ್ಲ; ಸುಪ್ರೀಂ ಕೋರ್ಟ್ ತೀರ್ಪು
Team Udayavani, Jan 23, 2018, 12:15 PM IST
ಹೊಸದಿಲ್ಲಿ : ಸಂಜಯ್ ಲೀಲಾ ಭನ್ಸಾಲಿ ಅವರ ಐತಿಹಾಸಿಕ ಕಥಾ ಚಿತ್ರ ಪದ್ಮಾವತ್ ಬಿಡುಗಡೆಗೆ ನಿಷೇಧ ಹೇರಬೇಕೆಂದು ಕೋರಿ ಮಧ್ಯ ಪ್ರದೇಶ ಮತ್ತು ರಾಜಸ್ಥಾನ ಸರಕಾರಗಳು ಸಲ್ಲಿಸಿರುವ ಮನವಿಯನ್ನು ಸುಪ್ರೀಂ ಕೋರ್ಟ್ ಇಂದು ಮಂಗಳವಾರ ತಿರಸ್ಕರಿಸಿದೆ.
ಪದ್ಮಾವತ್ ಚಿತ್ರದ ದೇಶಾದ್ಯಂತದ ಬಿಡುಗಡೆಗೆ ತಾನು ಕಳೆದ ಜನವರಿ 18ರಂದು ನೀಡಿದ್ದ ಆದೇಶಕ್ಕೆ ಎಲ್ಲ ರಾಜ್ಯ ಸರಕಾರಗಳು ಬದ್ಧವಾಗಿರಬೇಕು ಎಂದು ಸುಪ್ರೀಂ ಕೋರ್ಟ್ ಕಟ್ಟುನಿಟ್ಟಾಗಿ ಹೇಳಿದೆ.
ಪದ್ಮಾವತ್ ಚಿತ್ರ ಪ್ರದರ್ಶನದಿಂದ ಯಾವುದೇ ರೀತಿಯ ಕಾನೂನು ಮತ್ತು ಸುವ್ಯವಸ್ಥೆಯ ಸಮಸ್ಯೆ ಉಂಟಾದಲ್ಲಿ ಅದನ್ನು ಆಯಾ ರಾಜ್ಯ ಸರಕಾರಗಳೇ ನಿಭಾಯಿಸಬೇಕು; ಹಾಗೆ ಮಾಡುವುದು ಅವುಗಳ ಕರ್ತವ್ಯವಾಗಿರುತ್ತದೆ ಎಂದು ಕೋರ್ಟ್ ಹೇಳಿತು.
ಜನರು ಇಂತಹ ವಿಚಾರಗಳಲ್ಲಿ ಶಾಸನಾತ್ಮಕ ಸಂಸ್ಥೆ ಇದೆ ಎಂಬುದನ್ನು ಮರೆಯಕೂಡದು; ಪದ್ಮಾವತ್‌ಗೆ ಕೇಂದ್ರ ಸೆನ್ಸಾರ್ ಮಂಡಳಿ ಸರ್ಟಿಫಿಕೇಟ್ ನೀಡಿದೆ. ಅಂತೆಯೇ ಸರ್ವೋಚ್ಚ ನ್ಯಾಯಾಲಯ ಅದರ ದೇಶವ್ಯಾಪಿ ಬಿಡುಗಡೆಗೆ ಅನುಮತಿ ನೀಡಿದೆ ಎಂದು ವರಿಷ್ಠ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಮೂವರು ಸದಸ್ಯರ ಸುಪ್ರೀಂ ಕೋರ್ಟ್ ಪೀಠ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
MUST WATCH
ಹೊಸ ಸೇರ್ಪಡೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.