OMG 2: 12 ವರ್ಷದ ಬಳಿಕ ಅಕ್ಷಯ್ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್ ಕೊಟ್ಟ ಸೆನ್ಸಾರ್ ಬೋರ್ಡ್
Team Udayavani, Aug 1, 2023, 2:08 PM IST
ಮುಂಬಯಿ: ಕಳೆದ ಕೆಲ ದಿನಗಳಿಂದ ಚರ್ಚೆಯಲ್ಲಿರುವ ಅಕ್ಷಯ್ ಕುಮಾರ್ ಅಭಿನಯಯದ ʼಓ ಮೈ ಗಾಡ್-2” ಸಿನಿಮಾ ಕೊನೆಗೂ ಸೆನ್ಸಾರ್ ನಲ್ಲಿ ಪಾಸ್ ಆಗಿದೆ.
ಅಮಿತ್ ರೈ ನಿರ್ದೇಶನದ ಸಿನಿಮಾದಲ್ಲಿ ಅಕ್ಷಯ್ ಕುಮಾರ್ ʼಶಿವʼನ ಪಾತ್ರದಲ್ಲಿ ನಟಿಸಿರುವುದು ಒಂದಷ್ಟು ಸಮಸ್ಯೆಗೆ ಕಾರಣವಾಗಿತ್ತು. ಸಿನಿಮಾದ ಟೀಸರ್ ಸದ್ದು ಮಾಡಿದ ಬಳಿಕ ಸಿನಿಮಾಕ್ಕೆ ಪ್ರಮಾಣಪತ್ರ ಸಿಗಲು ವಿಳಂಬವಾದ ವಿಚಾರದಿಂದ ರಿಲೀಸ್ ಗೂ ವಿವಾದಕ್ಕೆ ಸಿಲುಕುವ ಸಾಧ್ಯತೆಗಳಿತ್ತು.
ಲೈಂಗಿಕ ಶಿಕ್ಷಣದ ಕಥಾಹಂದರವನ್ನು ಹೊಂದಿದ ಸಿನಿಮಾ ಇದಾಗಿದ್ದು, ಕೆಲ ದೃಶ್ಯಗಳಿಗೆ ಕತ್ತರಿ ಹಾಕಬೇಕೆಂದು ಸಲಹೆಗಳನ್ನು ಚಿತ್ರತಂಡಕ್ಕೆ ಮಂಡಳಿ ನೀಡಿತ್ತು. ಅದರಂತೆ ಇದೀಗ ಸೆನ್ಸಾರ್ ಬೋರ್ಡ್ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್ ನೀಡಿದೆ. ಅಂದರೆ ಸಿನಿಮಾವನ್ನು ವಯಸ್ಕರು ಮಾತ್ರ ನೋಡಬೇಕೆನ್ನುವ ಪ್ರಮಾಣ ಪತ್ರ.
ʼಓ ಮೈಗಾಡ್-2ʼ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ʼಎʼ ಸರ್ಟಿಫಿಕೇಟ್ ನೀಡಿದೆ. ಸಿನಿಮಾ 2:36 ನಿಮಿಷ 10 ಸೆಕಂಡ್ ಇರಲಿದೆ ಎಂದು ಸಿನಿಮಾ ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಅವರು ಟ್ವೀಟ್ ಮಾಡಿದ್ದಾರೆ.
ಸಿನಿಮಾದಲ್ಲಿ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕಿಲ್ಲ. ಆದರೆ ಚಿತ್ರವು ಲೈಂಗಿಕ ಶಿಕ್ಷಣದ ಸೂಕ್ಷ್ಮ ವಿಷಯದೊಂದಿಗೆ ವ್ಯವಹರಿಸುವ ಕಾರಣದಿಂದ ಕೆಲ ಡೈಲಾಗ್ಸ್ ಗಳಿಗೆ ಕತ್ತರಿ ಹಾಕಲಾಗಿದೆ ಎಂದು ಸೆನ್ಸಾರ್ ಮಂಡಳಿ ಮೂಲಗಳು ತಿಳಿಸಿರುವುದಾಗಿ ʼಇಂಡಿಯಾ ಟುಡೇʼ ವರದಿ ಹೇಳಿದೆ.
ಈ ಹಿಂದೆ ಅಕ್ಷಯ್ ಕುಮಾರ್ ಅವರ 2011 ರಲ್ಲಿ ಬಂದ ʼದೇಸಿ ಬಾಯ್ಸ್ʼ ಸಿನಿಮಾಕ್ಕೆ ಸೆನ್ಸಾರ್ ಬೋರ್ಡ್ ʼಎʼ ಸರ್ಟಿಫಿಕೇಟ್ ನೀಡಿತ್ತು.
ಸೆನ್ಸಾರ್ ನಲ್ಲಿನ ಬದಲಾವಣೆಯನ್ನು ಚಿತ್ರತಂಡ ಒಪ್ಪಿಕೊಂಡಿದೆ ಎಂದು ವರದಿ ತಿಳಿಸಿದೆ. ಸಿನಿಮಾದಲ್ಲಿ ಅಕ್ಷಯ್ ಕುಮಾರ್ ಅವರೊಂದಿಗೆ ಯಾಮಿ ಗೌತಮ್, ಪಂಕಜ್ ತ್ರಿಪಾಠಿ ಮತ್ತು ಅರುಣ್ ಗೋವಿಲ್ ಮುಂತಾದವರು ನಟಿಸಿದ್ದಾರೆ. ಸಿನಿಮಾ ಆಗಸ್ಟ್ 11 ರಂದು ಬಿಡುಗಡೆಯಾಗಲಿದೆ.
#Xclusiv… ‘OMG 2’ RUN TIME… #OMG2 certified ‘A’ by #CBFC on 31 July 2023. Duration: 156.10 min:sec [2 hours, 36 min, 10 sec]. #India
⭐ Theatrical release date: 11 Aug 2023.#AkshayKumar #PankajTripathi #YamiGautam pic.twitter.com/yG6aBqEYDw
— taran adarsh (@taran_adarsh) August 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.