ʼAdipurushʼ ನಿಂದ ಜನರ ಭಾವನೆಗೆ ಧಕ್ಕೆಯಾಗಿದೆ ಕೈಮುಗಿದು ಕ್ಷಮೆ ಕೇಳುತ್ತೇನೆಂದ ಸಂಭಾಷಣೆಕಾರ
Team Udayavani, Jul 8, 2023, 10:25 AM IST
ಮುಂಬಯಿ: ಪ್ರಭಾಸ್ ಅಭಿನಯದ ಬಹುಕೋಟಿ ನಿರ್ಮಾಣದ ʼಆದಿಪುರುಷ್ʼ ಸಿನಿಮಾ ಈಗಾಗಲೇ ಬಹುತೇಕ ಥಿಯೇಟರ್ ನಿಂದ ಹೊರಬಿದ್ದಿದೆ. ಒಂದಷ್ಟು ವಿವಾದ, ಗೊಂದಲದ ನಡುವೆ ಸಿನಿಮಾ ಕೋಟಿ ಕ್ಲಬ್ ದಾಟಿದೆ.
ಸಿನಿಮಾ ರಿಲೀಸ್ ಆದ ದಿನದಿಂದ ಸಿನಿಮಾದ ಬಗ್ಗೆ ಹಲವು ರೀತಿಯಲ್ಲಿ ವಿಮರ್ಶೆಗಳು ಬಂದಿದೆ. ಸಿನಿಮಾದಲ್ಲಿನ ವಿಎಫ್ಎಕ್ಸ್ ಕುರಿತಂತೆ ಹಲವರು ಸಿನಿಮಾವನ್ನು ಟೀಕಿಸಿದ್ದಾರೆ. ಮತ್ತೊಂದೆಡೆ ಸಿನಿಮಾದಲ್ಲಿನ ಡೈಲಾಗ್ಸ್ ಗಳಿಗೂ ಟೀಕೆ ವ್ಯಕ್ತವಾಗಿತ್ತು.
ಹನುಮಾನ್ ಪಾತ್ರಧಾರಿಗೆ ಬರೆದ ಡೈಲಾಗ್ಸ್ ಗಳಿಗೆ ವಿರೋಧ ವ್ಯಕ್ತವಾಗಿತ್ತು. ಡೈಲಾಗ್ಸ್ ಬರೆದ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಅವರಿಗೆ ಈ ಕಾರಣಕ್ಕಾಗಿ ಜೀವ ಬೆದರಿಕೆಗಳು ಬಂದಿತ್ತು. ಈ ಸಂಬಂಧ ಮುಂಬಯಿ ಪೊಲೀಸರು ಸಂಭಾಷಣೆಕಾರನಿಗೆ ಭದ್ರತೆಯನ್ನು ನೀಡಿದ್ದರು.
ಆ ಬಳಿಕ “ಬಜರಂಗಬಲಿ ದೇವರಲ್ಲ, ಅವರು ಅಪ್ಪಟ ಭಕ್ತ ಮಾತ್ರ. ನಾವು ಹನುಮಾನ್ ರನ್ನು ದೇವರಾಗಿ ಮಾಡಿದ್ದೇವೆ. ಏಕೆಂದರೆ ಅವರ ಭಕ್ತಿ ಶಕ್ತಿಶಾಲಿ ಆಗಿತ್ತು” ಎಂದು ಸಂದರ್ಶನವೊಂದರಲ್ಲಿ ಹೇಳಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದರು.
ಇದನ್ನೂ ಓದಿ: Rishab Shetty Birthday: ಒಂದೇ ತಟ್ಟೆಯಲ್ಲಿ ಬಿರಿಯಾನಿ ಸವಿದ ರಿಷಬ್ – ರಕ್ಷಿತ್
ಇದೀಗ ಈ ಬಗ್ಗೆ ಮತ್ತೊಮ್ಮೆ ಸಂಭಾಷಣೆಕಾರ ಮನೋಜ್ ಮುಂತಾಶಿರ್ ಕ್ಷಮೆ ಕೇಳಿದ್ದಾರೆ. “ಆದಿಪುರುಷ್ ನಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಇದಕ್ಕೆ ನಾನು ಕೈಮುಗಿದು ಕ್ಷಮೆ ಕೇಳುತ್ತೇನೆ. ಪ್ರಭು ಬಜರಂಗ ಬಲಿ ನಮ್ಮನ್ನು ಒಗ್ಗೂಡಿಸಲಿ ಮತ್ತು ನಮ್ಮ ಪವಿತ್ರ ಸನಾತನ ಮತ್ತು ನಮ್ಮ ಮಹಾನ್ ರಾಷ್ಟ್ರದ ಸೇವೆ ಮಾಡಲು ನಮಗೆ ಶಕ್ತಿಯನ್ನು ನೀಡಲಿ” ಎಂದು ಬರೆದುಕೊಂಡಿದ್ದಾರೆ.
ಜೂ.16 ರಂದು ಓಂ ರಾವತ್ ನಿರ್ದೇಶನ ಮಾಡಿರುವ ʼಆದಿಪುರುಷ್ʼ ರಿಲೀಸ್ ಆಗಿತ್ತು. ಸಿನಿಮಾದಲ್ಲಿ ರಾಘವ್ ಆಗಿ ಪ್ರಭಾಸ್, ಜಾನಕಿಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.