ತಮಿಳು ನಿರ್ದೇಶಕ ಮಣಿ ರತ್ನಂ ವಿರುದ್ಧ ಎಫ್‍ಐಆರ್ ದಾಖಲು
Team Udayavani, Sep 3, 2021, 3:11 PM IST
ಚೆನ್ನೈ: ತಮಿಳಿನ ಖ್ಯಾತ ಸಿನಿಮಾ ನಿರ್ದೇಶಕ ಮಣಿ ರತ್ನಂ ಅವರಿಗೆ ಕಾನೂನಿನ ಕಂಠಕ ಎದುರಾಗಿದೆ. ಈ ಹಿರಿಯ ನಿರ್ದೇಶಕನ ವಿರುದ್ಧ ದೂರು ದಾಖಲಾಗಿದೆ.
ಮಣಿ ರತ್ನಂ ಅವರು ಐತಿಹಾಸಿ ಕಥಾ ಹಂದರದ ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಬಳಸಲಾಗಿದ್ದ ಕುದುರೆಯೊಂದು ಚಿತ್ರೀಕರಣದ ವೇಳೆ ಸಾವನ್ನಪ್ಪಿದೆ. ಈ ಕಾರಣವಾಗಿ ಹೈದರಾಬಾದ್ನಲ್ಲಿ ಕುದುರೆಯ ಮಾಲೀಕ, ಸಿನಿಮಾ ನಿರ್ಮಾಣ ಸಂಸ್ಥೆ ಹಾಗೂ ಚಿತ್ರತಂಡದ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಆಗಸ್ಟ್ 11ರಂದು ಕುದುರೆ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಆಗಸ್ಟ್ 18 ರಂದು ಎಫ್‍ಐಆರ್ ದಾಖಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಸೆ. 2ರಂದು. ದ ಅನಿಮಲ್ ವೆಲ್ಫೇರ್ ಬೋರ್ಡ್ ಆಫ್ ಇಂಡಿಯಾ (AWBI) ಕುದುರೆ ಸಾವಿನ ಕುರಿತಾಗಿ ತನಿಖೆ ನಡೆಸಿ ವರದಿ ನೀಡುವಂತೆ ಹೈದರಾಬಾದ್ನ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.
ಸಿನಿಮಾದಲ್ಲಿ ಯುದ್ಧ ನಡೆಯುವ ದೃಶ್ಯಗಳ ಚಿತ್ರೀಕರಣಕ್ಕಾಗಿ ಕುದುರೆಗಳನ್ನು ಬಳಸಲಾಗುತ್ತಿದ್ದು, ಶೂಟಿಂಗ್ ವೇಳೆ ಕುದುರೆ ಕೆಳಗೆ ಬಿದ್ದು ಪೆಟ್ಟಾಗಿ ಅಸುನೀಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ಆಗಬೇಕಿದೆ. ಪೇಟಾ ಹೇಳಿರುವಂತೆ ಸುಸ್ತಾಗಿರುವ ಕುದುರೆಗಳನ್ನು ಸತತವಾಗಿ ಬಿಸಿಲಿನಲ್ಲಿ ಶೂಟಿಂಗ್ನಲ್ಲಿ ಬಳಸಿಕೊಂಡ ಕಾರಣದಿಂದ ಡಿಹೈಡ್ರೇಷನ್ ಆಗಿ ಕುದುರೆ ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದೆ. ಅಲ್ಲದೆ ಇಂತಹ ಘಟನೆಗಳನ್ನು ಸಹಿಸಲು ಸಾಧ್ಯವಿಲ್ಲ. ಸಿನಿಮಾಗಳಲ್ಲಿ ಪ್ರಾಣಿಗಳನ್ನು ಬಳಸಿಕೊಳ್ಳಲು ಕಠಿಣ ನಿಯಮಗಳಿವೆ. ಹಾಗಾಗಿಯೇ ಚಿತ್ರತಂಡಗಳು ಪ್ರಾಣಿಗಳ ಬದಲಾಗಿ ಸಿಜಿಐ ಅಥವಾ ಇತರೆ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಾರೆ. ಇದು ಪೌರಾಣಿಕ ಕಥಾಹಂದರ ಹೊಂದಿರುವ ಸಿನಿಮಾ ಆಗಿದ್ದು, ಯುದ್ಧದ ಸನ್ನಿವೇಶಗಳು ತುಂಬಾ ಇವೆ. ಹೀಗಾಗಿಯೇ ಕುದುರೆಗಳನ್ನು ಬಳಸಲಾಗಿದೆಯಂತೆ.
ಇನ್ನು ‘ಪೊನ್ನಿಯಿನ್ ಸೆಲ್ವನ್’ ಚಿತ್ರದಲ್ಲಿ ಬಾಲಿವುಡ್ ನಟಿ ಐಶ್ವರ್ಯ ರೈ ನಟಿಸುತ್ತಿದ್ದಾರೆ. ಹೆಸರಾಂತ ತಮಿಳು ಲೇಖಕ ಕಲ್ಕಿ ಕೃಷ್ಣಮೂರ್ತಿ 1954ರಲ್ಲಿ ರಚಿಸಿದ್ದ ಚೋಳ ರಾಜಮನೆತನದ ಐತಿಹಾಸಿಕ ಹಿನ್ನೆಲೆಯ ಕಾದಂಬರಿ ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.