ನಟಿ ಪೂಜಾ ಹೆಗ್ಡೆಗೆ ಕೋವಿಡ್ ಪಾಸಿಟಿವ್ ದೃಢ
Team Udayavani, Apr 26, 2021, 3:46 PM IST
ಹೈದರಾಬಾದ್ : ದೇಶದ ಜನರನ್ನು ಪೆಡಂಭೂತದಂತೆ ಕಾಡುತ್ತಿರುವ ಮಹಾಮಾರಿ ಕೋವಿಡ್ ಚಿತ್ರರಂಗದ ತಾರೆಯರನ್ನು ಇನ್ನಿಲ್ಲದಂತೆ ಬಾಧಿಸುತ್ತಿದೆ.
ಚಿತ್ರರಂಗದ ಹಲವು ತಾರೆಯರಲ್ಲಿ ಈಗಾಗಲೇ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಕೆಲವರು ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿದ್ದರೆ, ಮತ್ತೆ ಕೆಲವರೂ ಇನ್ನೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಟಿ ಪೂಜಾ ಹೆಗ್ಡೆ ಅವರಿಗೂ ಕೋವಿಡ್ ಪಾಸಿಟಿವ್ ದೃಢವಾಗಿದೆ.
ಭಾನುವಾರ ತನಗೆ ಕೋವಿಡ್ ಪಾಸಿಟಿವ್ ಬಂದಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿರುವ ಪೂಜಾ, ಎಲ್ಲರಿಗೂ ನಮಸ್ಕಾರ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ ನಾನು ಕ್ವಾರೆಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಸೋಷಿಯಲ್ ಮಿಡಿಯಾ ಪೋಸ್ಟ್ ಶೇರ್ ಮಾಡಿದ್ದಾರೆ.
ಇನ್ನು ಕೆಲ ದಿನಗಳ ಹಿಂದೆಯಷ್ಟೆ ಬಾಲಿವುಡ್ ನಟ ಅಕ್ಷಯ್ ಕುಮಾರ್, ಆಮೀರ್ ಖಾನ್ ಅವರಿಗೂ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡು ಸಂಪೂರ್ಣ ಗುಣಮುಖರಾಗಿ ಮನೆಗೆ ವಾಪಸ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್ನಲ್ಲಿ ಗೆದ್ದವರು ಯಾರು?
Movies: ದೀಪಾವಳಿ ಹಬ್ಬಕ್ಕೆ ರಿಲೀಸ್ ಆಗಿ ಕೈ ಸುಟ್ಟುಕೊಂಡ ಸ್ಟಾರ್ ಸಿನಿಮಾಗಳು
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್ಗೆ ಬರಲಿದ್ದಾರೆ ʼಕರಣ್ ಅರ್ಜುನ್ʼ
Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್ ಹಿಟ್ ʼಮಿರ್ಜಾಪುರ್ʼ ಸರಣಿ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.