‘ಸಲಾರ್’ಗೆ ʼಎʼ ಸರ್ಟಿಫಿಕೇಟ್ ಕೊಟ್ಟ CBFC: ಭರ್ಜರಿ ಆ್ಯಕ್ಷನ್ ಗೆ ಸಿದ್ದರಾಗಿ ಎಂದ ಹೊಂಬಾಳೆ
Team Udayavani, Dec 11, 2023, 2:54 PM IST
ಹೈದರಾಬಾದ್: ಡಾರ್ಲಿಂಗ್ ಸ್ಟಾರ್ ಪ್ರಭಾಸ್ ಅಭಿನಯದ ಪ್ಯಾನ್ ಇಂಡಿಯಾ ʼಸಲಾರ್ʼ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ದೃಶ್ಯಗಳಿರುವುದು ಗೊತ್ತೇ ಇದೆ. ಟ್ರೇಲರ್ ನಲ್ಲಿ ಅದರ ಝಲಕ್ ನ್ನು ತೋರಿಸಲಾಗಿತ್ತು.
ಬಹುಕೋಟಿ ನಿರ್ಮಾಣದ( 400 ಕೋಟಿ) ʼಸಲಾರ್ʼ ರಿಲೀಸ್ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಇತ್ತೀಚೆಗೆ ಟ್ರೇಲರ್ ರಿಲೀಸ್ ಆಗಿದ್ದು, ಇಬ್ಬರು ಸ್ನೇಹಿತರ ನಡುವಿನ ಕಥೆಯನ್ನು ಆ್ಯಕ್ಷನ್ ಅಂಶಗಳೊಂದಿಗೆ ತೋರಿಸಲಾಗಿದೆ. ಟ್ರೇಲರ್ ಯೂಟ್ಯೂಬ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿದೆ. ಇದೀಗ ಸಿನಿಮಾದ ಸೆನ್ಸಾರ್ ಪೂರ್ಣಗೊಂಡಿದ್ದು, ಸೆನ್ಸಾರ್ ಬೋರ್ಡ್ ಸಿನಿಮಾಕ್ಕೆ ʼಎʼಸರ್ಟಿಫಿಕೇಟ್ ನೀಡಿದೆ.
ಆ್ಯಕ್ಷನ್ ಡ್ರಾಮಕ್ಕಾಗಿ ಸಿದ್ದರಾಗಿ ಎಂದು ಹೊಂಬಾಳೆ ಫಿಲ್ಮ್ಸ್ ʼಎʼ ಸರ್ಟಿಫಿಕೇಟ್ ಕೊಟ್ಟಿರುವ ಬಗ್ಗೆ ಹೇಳಿದೆ.
ಇದನ್ನೂ ಓದಿ: “Salaar ಸಿನಿಮಾದಲ್ಲಿ ಯಶ್ ಅಂಕಲ್ ಇದ್ದಾರೆ..” ಸೀಕ್ರೆಟ್ ಬಿಟ್ಟು ಕೊಟ್ರಾ ಯುವ ಗಾಯಕಿ?
ಚಿತ್ರದಲ್ಲಿರುವ ಅತಿಯಾದ ಹಿಂಸೆಯ (ಆ್ಯಕ್ಷನ್) ದೃಶ್ಯಗಳಿಂದಾಗಿ ಮಂಡಳಿಯು ‘ಎ’ ಪ್ರಮಾಣಪತ್ರ ನೀಡಲು ನಿರ್ಧರಿಸಿದೆ ಎಂದು ವರದಿಯಾಗಿದೆ.
ಪ್ರಭಾಸ್ ಸಿನಿಮಾದಲ್ಲಿ ʼದೇವʼ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪೃಥ್ವಿರಾಜ್ ವರದ ರಾಜಮನ್ನಾರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಶ್ರುತಿ ಹಾಸನ್, ಜಗಪತಿ ಬಾಬು, ಶ್ರೀಯಾ ರೆಡ್ಡಿ, ಬಾಬಿ ಸಿಂಹ ಮತ್ತು ಟಿನ್ನು ಆನಂದ್ ಮುಂತಾದವರು ನಟಿಸಿದ್ದಾರೆ.
ಪ್ರಭಾಸ್ ವೃತ್ತಿ ಜೀವನದಲ್ಲಿ ʼಎʼ ಸರ್ಟಿಫಿಕೇಟ್ ಸಿಕ್ಕಿರುವ ಎರಡನೇ ಸಿನಿಮಾ ʼಸಲಾರ್ʼ ಆಗಿದೆ. ಈ ಹಿಂದೆ 2013ರಲ್ಲಿ ಬಂದ ಕೊರಟಾಲ ಶಿವ ನಿರ್ದೇಶನದ ‘ಮಿರ್ಚಿ’ ಸಿನಿಮಾಕ್ಕೆ ʼಎʼ ಸರ್ಟಿಫಿಕೇಟ್ ನೀಡಲಾಗಿತ್ತು.
ಇದೇ ಡಿ.22 ರಂದು ಸಿನಿಮಾ ತೆರೆ ಕಾಣಲಿದೆ.
Censor done for #SalaarCeaseFire 🔥
Get ready for an intense ‘𝐀’ction drama in cinemas from December 22nd 💥#Salaar #Prabhas #PrashanthNeel @PrithviOfficial @shrutihaasan @VKiragandur @hombalefilms @IamJagguBhai @sriyareddy @bhuvangowda84 @RaviBasrur @vchalapathi_art @anbariv… pic.twitter.com/GKZ6PHuVny
— Salaar (@SalaarTheSaga) December 11, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.