Salaar: ಪ್ಯಾನ್ ಇಂಡಿಯಾ ʼಸಲಾರ್ʼ ರಿಲೀಸ್ ಡೇಟ್ ಮುಂದೂಡಿಕೆ; ಕಾರಣವೇನು?
Team Udayavani, Sep 2, 2023, 2:55 PM IST
ಬೆಂಗಳೂರು: ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ʼಸಲಾರ್ʼ ರಿಲೀಸ್ ಗೆ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇನ್ನೇನು ಸಿನಿಮಾ ತೆರೆಗೆ ಬರಬೇಕು ಎನ್ನುವಾಗಲೇ, ಇದೀಗ ಸಿನಿ ಪ್ರೇಕ್ಷಕರಿಗೆ ʼಸಲಾರ್ʼ ಚಿತ್ರತಂಡ ಶಾಕಿಂಗ್ ನ್ಯೂಸ್ ನೀಡಿದೆ.
ಪ್ರಶಾಂತ್ ನೀಲ್ ನಿರ್ದೇಶನದ ʼಸಲಾರ್ʼ ಅನೌನ್ಸ್ ಆದ ದಿನದಿಂದಲೇ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಇತ್ತೀಚೆಗೆ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ಟೀಸರ್ ಬಿಗ್ ಹಿಟ್ ಆಗಿದೆ. ಸಿನಿಮಾ ಸೆ.28 ರಂದು ರಿಲೀಸ್ ಆಗುವ ದಿನಾಂಕವನ್ನು ಈ ಹಿಂದೆಯೇ ಚಿತ್ರತಂಡ ಹೇಳಿತ್ತು. ಆದರೆ ಇದೀಗ ಸಿನಿಮಾದ ರಿಲೀಸ್ ಡೇಟ್ ಮುಂದೂಡಿಕೆ ಆಗಿದೆ ಎನ್ನಲಾಗಿದೆ.
ಸಿನಿಮಾ ಟ್ರೇಡ್ ವಿಷ್ಲೇಶಕ ತರಣ್ ಆದರ್ಶ್ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು “ಸಲಾರ್” ಸಿನಿಮಾ ಸೆ.28 ರಂದು ಬಿಡುಗಡೆ ಆಗುತ್ತಿಲ್ಲ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸ ಇನ್ನು ಬಾಕಿ ಇರುವ ಕಾರಣದಿಂದ ಸಿನಿಮಾ ನವೆಂಬರ್ ತಿಂಗಳಿನಲ್ಲಿ ರಿಲೀಸ್ ಆಗಲಿದೆ. ಹೊಸ ರಿಲೀಸ್ ಡೇಟ್ ಶೀಘ್ರದಲ್ಲಿ ಅನೌನ್ಸ್ ಆಗಲಿದೆ” ಎಂದು ಟ್ವೀಟ್ ಮಾಡಿದ್ದಾರೆ.
ಸದ್ಯ ತರಣ್ ಅವರ ಟ್ವೀಟ್ ವೈರಲ್ ಆಗಿದ್ದು, ʼಸಲಾರ್ʼ ಹೊಸ ರಿಲೀಸ್ ಡೇಟ್ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಈ ಬಗ್ಗೆ ಸಿನಿಮಾ ತಂಡ ಇನ್ನಷ್ಟೇ ಮಾಹಿತಿಯನ್ನು ಹಂಚಿಕೊಳ್ಳಬೇಕಿದೆ.
ಪ್ಯಾನ್ ಇಂಡಿಯಾ ʼಸಲಾರ್ʼ ನಲ್ಲಿ ಪೃಥ್ವಿರಾಜ್ ಸುಕುಮಾರನ್ ಶ್ರುತಿ ಹಾಸನ್, ಜಗಪತಿ ಬಾಬು, ತಿನ್ನು ಆನಂದ್ ಮತ್ತು ಶ್ರೀಯಾ ರೆಡ್ಡಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ”ಸಲಾರ್: ಭಾಗ 1” ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
#BreakingNews…
PRABHAS: ‘SALAAR’ TO ARRIVE IN NOV… #Salaar is NOT arriving on 28 Sept 2023, it’s OFFICIAL now… The post-production work of this #Prabhas starrer is going on in full swing… #HombaleFilms – the producers – are bringing the film in Nov 2023… New release date… pic.twitter.com/SbOLGSobz5— taran adarsh (@taran_adarsh) September 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.