ಪ್ರಭುದೇವ್-ಹಿಮಾನಿ ಮದುವೆ ಸುದ್ದಿ ಖಚಿತಪಡಿಸಿದ ರಾಜು ಸುಂದರಂ !
Team Udayavani, Nov 22, 2020, 8:16 PM IST
ನವದೆಹಲಿ: ಖ್ಯಾತ ನೃತ್ಯ ಸಂಯೋಜಕ, ತಮಿಳು ನಟ ಪ್ರಭುದೇವ್ ಮುಂಬೈ ಮೂಲದ ವೈದ್ಯೆ ಹಿಮಾನಿ ಅವರನ್ನು ಕಳೆದ ಮೇ ತಿಂಗಳಿನ ಲಾಕ್ ಡೌನ್ ವೇಳೆಯಲ್ಲಿ ಸರಳವಾಗಿ ವಿವಾಹವಾಗಿದ್ದಾರೆ ಎಂದು ವರದಿಯಾಗಿತ್ತು. ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಇದೀಗ ಮದುವೆಯ ಸುದ್ದಿಯನ್ನು ಪ್ರಭುದೇವ್ ಸಹೋದರ ರಾಜು ಸುಂದರಂ ಖಚಿತಪಡಿಸಿದ್ದಾರೆ.
ಈ ಕುರಿತು ವರದಿ ಮಾಡಿದ್ದ ಇ-ಟೈಮ್ಸ್ ನ ಸಂದರ್ಶನವೊಂದರಲ್ಲಿ ಸಹೋದರ ರಾಜು ಸುಂದರಂ ಮಾತನಾಡಿ. ನಿಮಗೆಲ್ಲಾ ಈಗಾಗಲೇ ತಿಳಿದಿರುವಂತೆ ಪ್ರಭುದೇವ್, ಹಿಮಾನಿ ಅವರನ್ನು ವಿವಾಹವಾಗಿದ್ದಾರೆ. ಇವರ ವಿವಾಹ ನಮಗೆಲ್ಲರಿಗೂ ಅತ್ಯಂತ ಸಂತೋಷವನ್ನು ಉಂಟುಮಾಡಿದೆ ಎಂದಿದ್ದಾರೆ.
ಲಾಕ್ ಡೌನ್ ಸಂದರ್ಭದಲ್ಲಿ ತನ್ನ ಬೆನ್ನು ಹಾಗೂ ಕಾಲಿಗೆ ಸಂಬಂಧಿಸಿದ ಚಿಕಿತ್ಸೆಗಾಗಿ ಮುಂಬೈಗೆ ತೆರಳಿದ್ದ ಪ್ರಭುದೇವ್ ಗೆ ತನ್ನ ಆರೈಕೆ ಮಾಡುತ್ತಿದ್ದ ವೈದ್ಯೆ ಹಿಮಾನಿ ಮೇಲೆ ಪ್ರೇಮಾಂಕುರವಾಗಿತ್ತು. ನಂತರ 2 ತಿಂಗಳುಗಳ ಕಾಲ ಚೆನೈನಲ್ಲಿ ಜೊತೆಯಾಗಿ ಕಾಲ ಕಳೆದ ಇವರಿಬ್ಬರು, ಪರಸ್ಪರ ಒಪ್ಪಿಕೊಂಡು ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ.
ಮೇ ತಿಂಗಳಲ್ಲಿ ಕೋವಿಡ್ -19 ಲಾಕ್ ಡೌನ್ ನಿಯಮದಂತೆ ಕೇವಲ ಮನೆಯ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದು, ಆ ಬಳಿಕ ಕೇವಲ 2 ಬಾರಿಯಷ್ಟೆ ಹಿಮಾನಿ, ಪ್ರಭುದೇವ್ ಕುಟುಂಬದವರನ್ನು ಭೇಟಿಯಾಗಲು ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಟ್ರೆಂಡಿಂಗ್-#BoycottNetflix: ಟ್ವೀಟಿಗರ ಆಕ್ರೋಶಕ್ಕೆ ಕಾರಣವಾದ ವೆಬ್ ಸರಣಿಯ ಚುಂಬನ ದೃಶ್ಯ
ಇದು ಪ್ರಭುದೇವ್ ಅವರ ಎರಡನೇ ಮದುವೆಯಾಗಿದ್ದು, ಮೊದಲ ಪತ್ನಿ ರಾಮಲತಾ ಸೇರಿದಂತೆ ಎರಡು ಮಕ್ಕಳಿದ್ದಾರೆ. ಹಾಗೆಯೇ ಕೆಲಕಾಲ ನಟಿ ನಯನಾ ತಾರಾ ಜೊತೆಯಲ್ಲಿಯೂ ಅನ್ಯೊನ್ಯವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.