Actress; 8 ತಿಂಗಳ ಗರ್ಭಿಣಿಯಾಗಿದ್ದ 35 ವರ್ಷದ ನಟಿ ಹೃದಯಸ್ತಂಭನದಿಂದ ವಿಧಿವಶ
Team Udayavani, Nov 1, 2023, 5:11 PM IST
ತಿರುವನಂತಪುರಂ: ಮಲಯಾಳಂ ಜನಪ್ರಿಯ ಕಿರುತೆರೆ ಧಾರಾವಾಹಿಯ ನಟಿ ಡಾ.ಪ್ರಿಯಾ ಹೃದಯಾಘಾತದಿಂದ ಅ 31(ಮಂಗಳವಾರ) ರಂದು ನಿಧನ ಹೊಂದಿದ್ದಾರೆ.
ವೃತ್ತಿಯಲ್ಲಿ ವೈದ್ಯೆಯಾಗಿದ್ದ ಡಾ. ಪ್ರಿಯಾ ಜನಪ್ರಿಯ ನಟಿಯರಲ್ಲಿ ಒಬ್ಬರಾಗಿದ್ದರು. ವೈವಾಹಿಕ ಜೀವನಕ್ಕೆ ಕಾಲಿರಿಸಿದ ನಂತರ ನಟನೆಯಿಂದ ದೂರವಿದ್ದರು. ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದರು.
ಬೇರೆ ಯಾವುದೇ ಆರೋಗ್ಯ ಸಮಸ್ಯೆಗಳಿಲ್ಲದ ಪ್ರಿಯಾ ಅವರು ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದ ವೇಳೆಯೇ ಹೃದಯ ಸ್ತಂಭನವಾಗಿದೆ ಎಂದು ತಿಳಿದು ಬಂದಿದೆ. ಆಕೆಯ ಶಿಶು ಈಗ ಐಸಿಯುನಲ್ಲಿದೆ ಎಂದು ವರದಿಯಾಗಿದೆ.
ವರದಿಗಳ ಪ್ರಕಾರ, ಆಕೆ ಎಂಡಿ ವ್ಯಾಸಂಗ ಮಾಡುತ್ತಿದ್ದರು ಮತ್ತು ತಿರುವನಂತಪುರಂನ ಪಿಆರ್‌ಎಸ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.
”ಮಲಯಾಳಂ ಟಿವಿ ಉದ್ಯಮದಲ್ಲಿ ಮತ್ತೊಂದು ಅನಿರೀಕ್ಷಿತ ಸಾವಿನ ಸುದ್ದಿ ಬಂದಿದೆ. ನಟಿ ಡಾ.ಪ್ರಿಯಾ ಹೃದಯ ಸ್ತಂಭನದಿಂದ ಕೊನೆಯುಸಿರೆಳೆದಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು 35 ವರ್ಷದ ಅವರು ಎಂಟು ತಿಂಗಳ ಗರ್ಭಿಣಿಯಾಗಿದ್ದರು” ಎಂದು ನಟ, ನಿರೂಪಕ ಕಿಶೋರ್ ಸತ್ಯ ಫೇಸ್‌ಬುಕ್ ಪೋಸ್ಟ್ ನಲ್ಲಿ ನೋವಿನ ವಿಚಾರ ಹಂಚಿಕೊಂಡಿದ್ದಾರೆ.
ಸೋಮವಾರವಷ್ಟೇ ಜನಪ್ರಿಯ ಮಲಯಾಳಂ ಟಿವಿ ಮತ್ತು ಚಲನಚಿತ್ರ ನಟಿ 35 ವರ್ಷದ ರೆಂಜೂಷಾ ಮೆನನ್ ಅವರು ತಿರುವನಂತಪುರಂನಲ್ಲಿ ಫ್ಲಾಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದರು. ಆಕೆಯ ಸಾವಿನಲ್ಲಿ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರು ಎಂದು ಕೆಲವು ವರದಿಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BBK11: ಫಿನಾಲೆಗೆ ಬರುತ್ತಾರೆ ಎನ್ನಲಾಗುತ್ತಿದ್ದ ದೈತ್ಯ ಸ್ಪರ್ಧಿಯೇ ಬಿಗ್ ಬಾಸ್ ನಿಂದ ಔಟ್?
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.