ಸೋಶಿಯಲ್ ಮೀಡಿಯಾ ಸಾಕೆಂದ ಪ್ರಿಯಾ ವಾರಿಯರ್
Team Udayavani, May 24, 2020, 8:28 PM IST
ಮಲೆಯಾಳಂನ ಓರು ಆಡಾರ್ ಲವ್ ಚಿತ್ರದಲ್ಲಿ ತನ್ನ ಕಣ್ಸನ್ನೆ ಮೂಲಕವೇ ಭಾರತೀಯ ಚಿತ್ರರಂಗದಲ್ಲಿ ಹಲವರ ಗಮನ ಸೆಳೆದಿದ್ದ, ಕಣ್ಸನ್ನೆ ಚೆಲುವೆ ಎಂದೇ ಖ್ಯಾತಿ ಪಡೆದಿದ್ದ ಪ್ರಿಯಾ ಪ್ರಕಾಶ್ ವಾರಿಯರ್ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಿಂದ ಇದ್ದಕ್ಕಿದ್ದಂತೆ ಹೊರನಡೆದಿದ್ದಾರೆ. ತನ್ನ ಕಣ್ಸನ್ನೆ ಮೂಲಕವೇ ಬಾಲಿವುಡ್ ಸೇರಿದಂತೆ ಹಲವು ಚಿತ್ರರಂಗಗಳಲ್ಲಿ ಆಫರ್ ಗಿಟ್ಟಿಸಿಕೊಳ್ಳುವ ಮೂಲಕ ಬಹುಬೇಡಿಕೆ ನಟಿಯಾಗಿರುವ ಪ್ರಿಯಾ ಇದ್ದಕ್ಕಿದ್ದಂತೆ ಸಾಮಾಜಿಕ ಜಾಲತಾಣಗಳಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದು, ಇದರ ಭಾಗವಾಗಿ ತಮ್ಮ ಇನ್ ಸ್ಟಾಗ್ರಾಮ್ ಖಾತೆಯನ್ನು ಡಿಲೀಟ್ ಮಾಡಿದ್ದಾರೆ.
ಇನ್ನು ಇದ್ದಕ್ಕಿದ್ದಂತೆ ಪ್ರಿಯಾ ಈ ನಿರ್ಧಾರವನ್ನೇಕೆ ಮಾಡಿದರು ಎಂದು ಅವರ ಅಭಿಮಾನಿಗಳು ಯೋಚಿಸುತ್ತಿದ್ದಾರೆ. ಸದ್ಯ ಬಹುಬೇಡಿಕೆ ನಟಿಯಾಗಿದ್ದು, ಕನ್ನಡದ ಎರಡು ಸಿನಿಮಾ ಸೇರಿದಂತೆ ಹಲವು ಸಿನಿಮಾಗಳನ್ನು ಇನ್ನೂ ಕೈಯ್ಯಲ್ಲಿಟ್ಟು ಕೊಂಡಿದ್ದಾರೆ. ಹೀಗೆ ಜನಪ್ರಿಯತೆ ಗಳಿಸುತ್ತಿರುವಾಗಲೇ ಇದ್ದಕ್ಕಿದ್ದಂತೆ ಇನ್ ಸ್ಟಾಗ್ರಾಮ್‌ನಿಂದ ದೂರವಾಗಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಿಯಾ ವಾರಿಯರ್ 7.2 ಮಿಲಿಯನ್ ಫಾಲೋವರ್ಸ್ ಹೊಂದಿದ್ದು, ಮಾತ್ರವಲ್ಲದೆ ಒಂದೇ ದಿನ 6 ಲಕ್ಷಕ್ಕೂ ಅಧಿಕ ಹಿಂಬಾಲಕರನ್ನು ಹೊಂದುವ ಮೂಲಕ ದಾಖಲೆ ನಿರ್ಮಿಸಿದ್ದರು.
ತಮ್ಮ ಸಿನಿಮಾಗಳ ಕುರಿತು ಆಗಾಗ ಅಪ್‌ಡೇಟ್ ನೀಡುತ್ತಿದ್ದ ಪ್ರಿಯಾ ವಾರಿಯರ್ ಇದೀಗ ಇದ್ದಕ್ಕಿದ್ದಂತೆ ಮಾಯವಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಇನ್ನು ಪ್ರಿಯಾ ವಾರಿಯರ್ ತನ್ನ ಇನ್‌ಸ್ಟಾಗ್ರಾಮ್ ಖಾತೆ ಡಿಲೀಟ್ ಮಾಡಲು ಅಸಲಿ ಕಾರಣವೇನು ಎನ್ನುವುದರ ಸುತ್ತ ಅನೇಕ ಗುಸುಗುಸು ಹರಿದಾಡುತ್ತಿದೆ. ಅಶ್ಲೀಲ ಕಾಮೆಂಟ್‌ಗಳು, ನಿಂದನೆ ಹಾಗೂ ವಿಪರೀತ ಟ್ರೊಲ್ ಗಳಿಗೆ ಒಳಗಾಗಿದ್ದರಿಂದ ಪ್ರಿಯಾ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಆದರೆ ಪ್ರಿಯಾ ನಿರ್ಧಾರದಿಂದ ಅಭಿಮಾನಿಗಳಿಗೆ ಬೇಸರವಾಗಿದ್ದು, ಮತ್ತೆ ಇನ್‌ಸ್ಟಾಗೆ ಮರಳುವಂತೆ ಒತ್ತಾಯಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.