ಪ್ರಿಯಾಂಕಾ ದಾಂಪತ್ಯದಲ್ಲಿ ಬಿರುಕು ಮೂಡಿತಾ? : ಇನ್ ಸ್ಟಾಗ್ರಾಮ್ ನಲ್ಲಿ ಯಾಕೆ ಈ ಬದಲಾವಣೆ..!
Team Udayavani, Nov 23, 2021, 10:22 AM IST
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ನಡುವೆ ಬಿರುಕು ಮೂಡಿದೆ ಎಂದು ಬಾಲಿವುಡ್ ಅಂಗಳದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿಯೆಂಬತೆ ಇದೆ ಪ್ರಿಯಾಂಕಾ ಇನ್ ಸ್ಟಾಗ್ರಾಮ್ ಪ್ರೊಫೈಲ್.
ಹೌದು ನಟಿ ಪ್ರಿಯಾಂಕಾ ಚೋಪ್ರಾ ಇದ್ದಕ್ಕಿದ್ದಂತೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ತಮ್ಮ ಹೆಸರಿನ ಜೊತೆಗೆ ಇದ್ದ ಪತಿ ನಿಕ್ ಜೋನಾಸ್ ಅವರ ಹೆಸರನ್ನು ತೆಗೆದುಹಾಕಿದ್ದಾರೆ. ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎನ್ನುವ ಸುದ್ದಿಯೊಂದು ಬಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.
ಪ್ರಿಯಾಂಕಾ ತಮ್ಮ ಮದುವೆಯ ನಂತರ ಇನ್‍ಸ್ಟಾಗ್ರಾಮ್‌ನಲ್ಲಿ ತಮ್ಮ ಹೆಸರಿನ ಜೊತೆಗೆ ಜೋನಾಸ್ ಎಂದು ಸೇರಿಸಿಕೊಂಡಿದ್ದರು. ಇಂದು ಜೋನಾಸ್ ಹೆಸರನ್ನು ತೆಗೆದುಹಾಕಿರುವುದು ತೀವ್ರ ಕುತೂಹಲಕ್ಕಿಡುಮಾಡಿದೆ.
View this post on Instagram
ಆದರೆ ಮಂಗಳವಾರ (ನ.23) ಇನ್‍ಸ್ಟಾಗ್ರಾಮ್‌ನಲ್ಲಿ ನಿಕ್ ಜೋಸನ್ ಅವರು ಒಂದು ವಿಡಿಯೋ ಪೋಸ್ಟ್ ಮಾಡಿಕೊಂಡಿದ್ದಾರೆ. ಜಿಮ್ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಅವರು ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರಿಯಾಂಕಾ ಕೂಡ ಕಮೆಂಟ್ ಮಾಡಿದ್ದಾರೆ. ‘Damn! I just died in your arms’ ಎಂದು ಕಮೆಂಟ್ ಮಾಡುವ ಮೂಲಕ ಪತಿಯ ವಿಡಿಯೋಗೆ ಮೆಚ್ಚುಗೆ ಸೂಚಿಸಿದ್ದಾರೆ. ಆ ಮೂಲಕ ತಮ್ಮಿಬ್ಬರ ನಡುವೆ ಯಾವುದೇ ವೈಮನಸ್ಸು ಇಲ್ಲ ಎಂಬುದನ್ನು ಅವರು ಖಚಿತಪಡಿಸಿದ್ದಾರೆ.
View this post on Instagram
ಪ್ರಿಯಾಂಕಾ-ನಿಕ್ ಜೋಡಿ 2018 ಡಿಸೆಂಬರ್ 1ರಂದು ವಿವಾಹವಾಗಿದ್ದರು. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮೇಲೆ ಪ್ರಿಯಾಂಕಾ ಅಮೆರಿಕದಲ್ಲಿ ನೆಲೆಸಿದ್ದಾರೆ. ಪ್ರಿಯಾಂಕಾ ಅವರು ಪಾಪ್ ಸ್ಟಾರ್ ನಿಕ್ ಜೋನಾಸ್ ಅವರನ್ನು ಕೈ ಹಿಡಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು
Oscars 2025; ರೇಸ್ನಿಂದ ಹೊರಬಿದ್ದ ಲಾಪತಾ ಲೇಡೀಸ್: 15ರ ಕಿರುಪಟ್ಟಿಯ ಭಾಗವಾಗಿಲ್ಲ
Kidnap ಬಲೆಯಿಂದ ಸ್ವಲ್ಪದರಲ್ಲೇ ಪಾರಾದ ನಟ ಶಕ್ತಿ ಕಪೂರ್!
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.