![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Sep 2, 2023, 12:28 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರ ‘ಜೈಲರ್’ ಬಿಗ್ ಹಿಟ್ ಆಗಿದೆ. 600 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಬಾಕ್ಸ್ ಆಫೀಸ್ ನಲ್ಲಿ ಹಲವು ದಾಖಲೆಗಳನ್ನು ಬ್ರೇಕ್ ಮಾಡಿದೆ.
ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ , ರಜನಿಕಾಂತ್ ಇಬ್ಬರಿಗೂ ‘ಜೈಲರ್’ ಕಂಬ್ಯಾಕ್ ಸಿನಿಮಾವೆಂದೇ ಹೇಳಬಹುದು. ‘ಬೀಸ್ಟ್’ ಸೋಲಿನಿಂದ ಟೀಕೆಗೆ ಒಳಗಾಗಿದ್ದ ನೆಲ್ಸನ್ ‘ಜೈಲರ್’ ಮೂಲಕ ದೊಡ್ಡ ಹಿಟ್ ಕೊಟ್ಟಿದ್ದಾರೆ. ಸಿನಿಮಾ ನಿರೀಕ್ಷೆಗೂ ಮೀರಿದ ಯಶಸ್ಸು ಸಾಧಿಸಿದ ಬೆನ್ನಲ್ಲೇ ನಿರ್ಮಾಣ ಸಂಸ್ಥೆ ಸನ್ ಪಿಕ್ಚರ್ಸ್ ನೆಲ್ಸನ್ ಹಾಗೂ ರಜನಿಕಾಂತ್ ಇಬ್ಬರಿಗೂ ಭರ್ಜರಿ ಗಿಫ್ಟ್ ನೀಡಿದೆ.
ಸನ್ ಪಿಕ್ಚರ್ಸ್ ಸಿಇಒ ಕಲಾನಿತಿ ಮಾರನ್ ಅವರು ಇತ್ತೀಚೆಗೆ ‘ತಲೈವಾ’ ಅವರನ್ನು ಚೆನ್ನೈನ ಪೋಯಸ್ ಗಾರ್ಡನ್ ಮನೆಯಲ್ಲಿ ಭೇಟಿ ಮಾಡಿ ಸಿನಿಮಾದ ಲಾಭಾಂಶದ ಚೆಕ್ ಹಾಗೂ ‘BMWX7 ‘ ದುಬಾರಿ ಕಾರನ್ನು ಗಿಫ್ಟ್ ಆಗಿ ನೀಡಿದ್ದಾರೆ. ಅಂದಾಜು 100 ಕೋಟಿ ರೂಪಾಯಿಯ ಚೆಕ್ ನ್ನು ರಜಿನಿ ಅವರಿಗೆ ನೀಡಿದ್ದಾರೆ ಎನ್ನಲಾಗಿದೆ.
ಇದಲ್ಲದೆ ಕಲಾನಿತಿ ಮಾರನ್ ಅವರು ‘ಜೈಲರ್’ ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರನ್ನು ಭೇಟಿಯಾಗಿ ದುಬಾರಿ ಗಿಫ್ಟ್ ನ್ನು ನೀಡಿದ್ದಾರೆ.
ಜಗತ್ತಿನಲ್ಲಿ ಅತ್ಯಂತ ದುಬಾರಿ ಕಾರುಗಳಲ್ಲಿ ಒಂದಾಗಿರುವ ಬ್ಲ್ಯಾಕ್ ಪೋರ್ಷೆ ಕಾರನ್ನು ಹಾಗೂ ಸಿನಿಮಾದ ಲಾಭಾಂಶದ ಚೆಕ್ ನ್ನು ನೆಲ್ಸನ್ ಅವರಿಗೆ ನೀಡಿದ್ದಾರೆ.
ಸನ್ ಪಿಕ್ಚರ್ಸ್ ನಟ ,ನಿರ್ದೇಶಕನಿಗೆ ನೀಡಿರುವ ಗಿಫ್ಟ್ ನ ವಿಡಿಯೋವನ್ನು ಹಂಚಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇದು ಭಾರೀ ವೈರಲ್ ಆಗಿದೆ.
Mr.Kalanithi Maran congratulated @Nelsondilpkumar and handed over a cheque to him, celebrating the Mega Blockbuster #Jailer #JailerSuccessCelebrations pic.twitter.com/b6TGnGaFd6
— Sun Pictures (@sunpictures) September 1, 2023
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.