ರಜನಿ-ಅಕ್ಷಯ್ 2.0 : ವಾರದೊಳಗೆ 500 ಕೋಟಿ ಮೀರಿದ ಜಾಗತಿಕ ಗಳಿಕೆ
Team Udayavani, Dec 6, 2018, 12:21 PM IST
ಹೊಸದಿಲ್ಲಿ : ಸೂಪರ್‌ಸ್ಟಾರ್ ರಜನೀಕಾಂತ್ ಮತ್ತು ಬಾಲಿವುಡ್ ನಟ ಅಕ್ಷಯ್ ಕುಮಾರ್ ಮುಖ್ಯ ಭೂಮಿಕೆಯಲ್ಲಿರುವ 2.0 ಚಿತ್ರ ಬಿಡುಗಡೆಗೊಂಡ ಒಂದು ವಾರದೊಳಗೆ 500 ಕೋಟಿ ರೂ. ಮೀರಿದ ಸಂಪಾದನೆಯನ್ನು ದಾಖಲಿಸಿದೆ.
ಸುಮಾರು ಮೂರು ವರ್ಷಗಳ ಸುದೀರ್ಘ ಕಾಯುವಿಕೆಯ ಬಳಿಕ ತೆರೆಕಂಡಿರುವ ಈ ಚಿತ್ರದ ಹಿಂದಿ ಅವತರಣಿಕೆಯ ಜತೆಗೆ ಕಾಣಿಸಿಕೊಂಡಿರುವ ಕರಣ್ ಜೋಹರ್ ಅವರು ಚಿತ್ರ 500 ಕೋಟಿ ರೂ. ಮೀರಿದ ಜಾಗತಿಕ ಗಳಿಕೆಯನ್ನು ದಾಖಲಿಸಿರುವ ವಿಷಯವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.
ಧರ್ಮಾ ಮೂವೀಸ್ ನಲ್ಲಿ ನಾವು 2.0 ಚಿತ್ರದ ಈ ಅಭೂತಪೂರ್ವ ಸಾಧನೆಗೆ ತುಂಬ ಸಂತಸಗೊಂಡಿದ್ದೇವೆ; ಹೆಮ್ಮೆ ಪಟ್ಟಿದ್ದೇವೆ ಎಂದು ಟ್ವಿಟರ್‌ನಲ್ಲಿ ಬರೆದಿದ್ದಾರೆ.
2.0 ಚಿತ್ರಕಥೆಯನ್ನು ಬರೆದು ನಿರ್ದೇಶಿಸಿದವರು ಶಂಕರ್. ಇದು 500 ಕೋಟಿ ರೂ. ವೆಚ್ಚದ ನಿರ್ಮಾಣ. 3ಡಿ ಯಲ್ಲಿ ನಿರ್ಮಾಣಗೊಂಡ ಮತ್ತು ವಿಶ್ವಾದ್ಯಂತ 1,500 ಚಿತ್ರಮಂದಿರಗಳಲ್ಲಿ ಏಕಕಾಲದಲ್ಲಿ ತೆರೆಕಂಡ ಮೊತ್ತ ಮೊದಲ ಭಾರತೀಯ ಚಿತ್ರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್ ನಾಮಿನೇಷನ್ ವೋಟಿಂಗ್ ವಿಸ್ತರಣೆ
Pritish Nandy: ಖ್ಯಾತ ಕವಿ, ಚಲನಚಿತ್ರ ನಿರ್ಮಾಪಕ ಪ್ರಿತೀಶ್ ನಂದಿ ನಿಧನ
Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
MUST WATCH
ಹೊಸ ಸೇರ್ಪಡೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Champions Trophy: ರಾಹುಲ್, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.