Bollywood actor ರಾಜ್‌ಪಾಲ್ ಯಾದವ್ ರ ಕೋಟ್ಯಂತರ ರೂ. ಮೌಲ್ಯದ ಆಸ್ತಿ ಜಪ್ತಿ
ಚಿತ್ರ ನಿರ್ಮಾಣ ಮಾಡಿ ಸಾಲದ ಸುಲಿಗೆ ಸಿಲುಕಿದ ನೂರಾರು ಚಿತ್ರಗಳಲ್ಲಿ ನಟಿಸಿದ ನಟ
Team Udayavani, Aug 14, 2024, 11:22 AM IST
ಮುಂಬಯಿ: ಖ್ಯಾತ ಬಾಲಿವುಡ್ ಹಾಸ್ಯ ನಟ ರಾಜ್‌ಪಾಲ್ ಯಾದವ್ ಅವರ ತವರು ಪಟ್ಟಣವಾದ ಶಹಜಹಾನ್‌ಪುರದಲ್ಲಿರುವ ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಬ್ಯಾಂಕ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಮಾಧ್ಯಮ ವರದಿಗಳ ಪ್ರಕಾರ, ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳು ಉತ್ತರ ಪ್ರದೇಶದ ಶಹಜಹಾನ್‌ಪುರಕ್ಕೆ ಆಗಮಿಸಿ ಭಾನುವಾರ ಆಸ್ತಿಯ ಮೇಲೆ ಬ್ಯಾನರ್ ಹಾಕಿದ್ದಾರೆ. ಆಸ್ತಿಯು ಮುಂಬೈನ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ್ದು, ಯಾವುದೇ ರೀತಿಯ ಖರೀದಿ ಅಥವಾ ಮಾರಾಟವನ್ನು ಮಾಡಲು ಸಾಧ್ಯವಿಲ್ಲ ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ.
ರಾಜ್‌ಪಾಲ್ ಯಾದವ್ ಅವರು ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯದ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದಾರೆ. 2012 ರಲ್ಲಿ ಅಟಾ ಪಟಾ ಲಪಟ್ಟಾ ಎಂಬ ಚಲನಚಿತ್ರವನ್ನು ಸಹ ನಿರ್ದೇಶಿಸಿದ್ದಾರೆ. ಚಲನಚಿತ್ರವನ್ನು ನಿರ್ಮಿಸಲು, ರಾಜ್‌ಪಾಲ್ ಅವರು ಸೆಂಟ್ರಲ್ ಬ್ಯಾಕ್ ಆಫ್ ಇಂಡಿಯಾದ ಬಾಂದ್ರಾ, ಮುಂಬೈ ಶಾಖೆಯಿಂದ 5 ಕೋಟಿ ರೂಪಾಯಿ ಸಾಲವನ್ನು ತೆಗೆದುಕೊಂಡಿದ್ದರು. ಸಾಲವನ್ನು ಮರುಪಾವತಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ.
2018 ರಲ್ಲಿ ರಾಜ್ ಪಾಲ್ ಯಾದವ್ ಅವರು ಮೂರು ತಿಂಗಳ ಜೈಲು ಶಿಕ್ಷೆಯನ್ನೂ ಸಾಲ ಮರು ಪಾವತಿ ಮಾಡದ ಕಾರಣಕ್ಕಾಗಿ ಅನುಭವಿಸಿದ್ದರು. 5 ಕೋಟಿ ರೂ. ಸಾಲ ಈಗ 11 ಕೋಟಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.