![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 10, 2024, 5:32 PM IST
ಪಣಜಿ: ಸದ್ಯ ರಾಕುಲ್ ಪ್ರೀತ್ ಸಿಂಗ್ ಮತ್ತು ಜಾಕಿ ಭಗ್ನಾನಿ ಮದುವೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಇಬ್ಬರೂ ಫೆಬ್ರವರಿ 21 ರಂದು ಗೋವಾದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಈ ಮದುವೆಯ ಬಗ್ಗೆ ಒಂದು ದೊಡ್ಡ ಅಪ್‍ಡೇಟ್ ಹೊರಬಿದ್ದಿದ್ದು, ಇಬ್ಬರೂ ಗೋವಾದಲ್ಲಿ ಮದುವೆಯಾಗಲು ಕಾರಣವನ್ನು ನೀಡಲಾಗಿದೆ.
ಇವರಿಬ್ಬರೂ ಗೋವಾದಲ್ಲಿ ಮದುವೆಯಾಗಲಿರುವ ಕಾರಣ ಈ ಸ್ಥಳವು ಅವರಿಗೆ ವಿಶೇಷವಾಗಿದೆ. ರಾಕುಲ್ ಪ್ರೀತ್ ಸಿಂಗ್ ಮತ್ತು ಜಾಕಿ ಭಗ್ನಾನಿ ಗೋವಾದಲ್ಲಿ ಮದುವೆಯಾಗಲು ದೊಡ್ಡ ಕಾರಣವೆಂದರೆ ಸುಂದರವಾದ ಸ್ಥಳವಲ್ಲ, ಆದರೆ ಅವರ ಪ್ರೇಮಕಥೆ ಗೋವಾದಲ್ಲಿಯೇ ಪ್ರಾರಂಭವಾದ ಕಾರಣ ಗೋವಾ ಅವರಿಗೆ ತುಂಬಾ ವಿಶೇಷವಾಗಿದೆ.
ರಾಕುಲ್ ಮತ್ತು ಜಾಕಿ ವಿದೇಶದಲ್ಲಿ ಮದುವೆಯಾಗಲು ಸಿದ್ಧತೆ ನಡಸಿಕೊಂಡಿದ್ದರು, ಆರು ತಿಂಗಳ ಹಿಂದೆಯೇ ಮದುವೆಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು. ಆದಾಗ್ಯೂ, ಡಿಸೆಂಬರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವೆಡ್ ಇನ್ ಇಂಡಿಯಾ ಮನವಿಯ ನಂತರ, ಇಬ್ಬರೂ ಭಾರತದಲ್ಲಿ ಮದುವೆಯಾಗಲು ನಿರ್ಧರಿಸಿದರು.
ಫೆಬ್ರವರಿ 19 ಮತ್ತು 20 ರಂದು ಗೋವಾದಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ನಡೆಯಲಿವೆ. ಇದಾದ ನಂತರ ಫೆಬ್ರವರಿ 21 ರಂದು ಜಾಕಿ ಜೊತೆ ರಾಕುಲ್ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಮೂಲಗಳ ಪ್ರಕಾರ, ಇಬ್ಬರೂ ಮದುವೆ ಮತ್ತು ಕಾರ್ಯಕ್ರಮವನ್ನು ಖಾಸಗಿಯಾಗಿಡಲು ಬಯಸುತ್ತಾರೆ. ರಾಕುಲ್ ಮತ್ತು ಜಾಕಿ ಸುಮಾರು 2 ವರ್ಷಗಳಿಂದ ಪರಸ್ಪರ ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ.
2022 ರಲ್ಲಿ ಜಾಕಿ ಹುಟ್ಟುಹಬ್ಬದಂದು ರೊಮ್ಯಾಂಟಿಕ್ ಫೋಟೋವನ್ನು ಪೋಸ್ಟ್ ಮಾಡುವ ಮೂಲಕ ರಾಕುಲ್ ಅವರೊಂದಿಗಿನ ಸಂಬಂಧವನ್ನು ಒಪ್ಪಿಕೊಂಡರು.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.