Game Changer: ರಾಮ್‌ಚರಣ್‌ಗೆ ಗಾಯ; ಕೊನೆ ಕ್ಷಣದಲ್ಲಿ ʼಗೇಮ್ ಚೇಂಜರ್ʼ ಶೂಟಿಂಗ್ ರದ್ದು
Team Udayavani, Sep 25, 2023, 1:02 PM IST
ಹೈದರಾಬಾದ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅವರ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ʼಗೇಮ್ ಚೇಂಜರ್ʼ ಅನೌನ್ಸ್ ಆದ ದಿನದಿಂದ ಸದ್ದು ಮಾಡುತ್ತಿದೆ. ಶಂಕರ್ – ರಾಮ್ ಚರಣ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಸಿನಿಮಾ ಇದಾಗಿರುವುದರಿಂದ ಸಿನಿಮಾದ ಮೇಲೆ ಹೆಚ್ಚಿನ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿದೆ.
ಶೂಟಿಂಗ್ ಹಂತದಲ್ಲಿರುವ ಸಿನಿಮಾದ ಹಾಡೊಂದು ಲೀಕ್ ಆಗಿರುವ ಬಗ್ಗೆ ಇತ್ತೀಚೆಗೆ ವರದಿಯಾಗಿತ್ತು. ಈ ಹಾಡನ್ನು 15 ಕೋಟಿ ರೂ ಬಜೆಟ್ ನಲ್ಲಿ ತಯಾರಿಸಲಾಗಿದೆ. ಶಂಕರ್ ಮತ್ತು ಅವರ ತಂಡ ಈ ಚಿತ್ರಕ್ಕಾಗಿ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಂದಲ್ಲೇ ಈ ಹಾಡು ಲೀಕ್ ಆಗಿದೆ ಎಂದು ವರದಿ ತಿಳಿಸಿತ್ತು.
ಇದೀಗ ಸಿನಿಮಾ ತಂಡಕ್ಕೆ ಮತ್ತೊಂದು ಹಿನ್ನೆಡೆ ಉಂಟಾಗಿದೆ. ಇನ್ನೇನು ಶೂಟಿಂಗ್ ಆರಂಭಕ್ಕೆ ಕೆಲವೇ ದಿನ ಇರುವ ವೇಳೆ ರಾಮ್ ಚರಣ್ ಅವರ ಮುಖಕ್ಕೆ ಏಟಾಗಿದೆ ಎನ್ನಲಾಗಿದೆ. ವೈದ್ಯರು ಅವರನ್ನು ಪರೀಕ್ಷಿಸಿದ್ದು, 10 ದಿನಗಳ ವಿಶ್ರಾಂತಿ ಪಡೆಯಬೇಕೆಂದು ಹೇಳಿರುವುದಾಗಿ ವರದಿ ತಿಳಿಸಿದೆ.
“ಕೆಲವು ಕಲಾವಿದರ ಅಲಭ್ಯತೆಯಿಂದಾಗಿ ʼಗೇಮ್ ಚೇಂಜರ್ʼ ನ ಸೆಪ್ಟೆಂಬರ್ ವೇಳಾಪಟ್ಟಿಯನ್ನು ರದ್ದುಗೊಳಿಸಲಾಗಿದೆ. ಚಿತ್ರೀಕರಣವು ಅಕ್ಟೋಬರ್ ಎರಡನೇ ವಾರದಲ್ಲಿ ಪುನರಾರಂಭಗೊಳ್ಳುತ್ತದೆ” ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಎಂದು ಟ್ವೀಟ್ ಮಾಡಿ ಹೇಳಿದೆ.
ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ರಾಜಕೀಯ ಥ್ರಿಲ್ಲರ್ ಸಿನಿಮಾವಾಗಿದ್ದು, ಕಾರ್ತಿಕ್ ಸುಬ್ಬರಾಜ್ ಚಿತ್ರದ ಕಥೆ ಬರೆದಿದ್ದಾರೆ.
ಈ ಸಿನಿಮಾದಲ್ಲಿ ರಾಮ್ ಚರಣ್ ಐಎಎಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇನ್ನು ನಾಯಕಿಯಾಗಿ ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಕಾಣಿಸಿಕೊಳ್ಳಲಿದ್ದಾರೆ. ಎಸ್‌ಜೆ ಸೂರ್ಯ , ಅಂಜಲಿ, ಜಯರಾಮ್, ನವೀನ್ ಚಂದ್ರ, ಸುನೀಲ್, ಶ್ರೀಕಾಂತ್, ಸಮುದ್ರಕಣಿ ನಾಸರ್ ಹಾಗೂ ಇತರರು ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Bollywood: ಹೃತಿಕ್ ರೋಷನ್ ʼಕ್ರಿಶ್ -4ʼ ಬಗ್ಗೆ ಹೊರಬಿತ್ತು ಬಿಗ್ ಅಪ್ಡೇಟ್
Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?
Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್ ಮೂಲದವರು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.